ನಿಮ್ಮ ಪುಟ್ಟ ಫ್ಯಾಮಿಲಿಗೆ ಈ ಕಾರು ಬೆಸ್ಟ್.. ರೂ.6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್!
ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ರೆನಾಲ್ಟ್ (Renault) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ (Design) ಮತ್ತು ವೈಶಿಷ್ಟ್ಯ (Feature) ಹೊಂದಿರುವ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನಿಮ್ಮ ಪುಟ್ಟ ಕುಟುಂಬಕ್ಕಾಗಿ ಹೊಸ ಕಾರನ್ನು ತೆಗೆದುಕೊಳ್ಳಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ, ಕಿಗರ್ (Kiger) ಎಸ್‌ಯುವಿ ಉತ್ತಮ ಆಯ್ಕೆಯಾಗಲಿದೆ. ಇಲ್ಲಿ ನೂತನ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ & ರೂಪಾಂತರಗಳು: ಈ ರೆನಾಲ್ಟ್ ಕಿಗರ್ (Renault Kiger) ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ, ಆರ್‌ಎಕ್ಸ್‌ಝಡ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ.

ಆಸನ, ಬಣ್ಣಗಳು: ನೂತನ ಕಿಗರ್ ಎಸ್‌ಯುವಿ ಆಕರ್ಷಕ ವಿನ್ಯಾಸ (ಡಿಸೈನ್)ವನ್ನು ಹೊಂದಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಮೂನ್‌ಲೈಟ್ ಸಿಲ್ವರ್, ಐಸ್ ಕೂಲ್ ವೈಟ್, ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. ಇದರಲ್ಲಿ 5 ಜನರು ಸುಲಭವಾಗಿ ಓಡಾಟವನ್ನು ನಡೆಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು 405 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ: ಈ ಕಾರು ಎರಡು ಪೆಟ್ರೋಲ್ ಪವರ್‌ಟ್ರೇನ್‌ನೊಂದಿಗೆ ಸಿಗಲಿದೆ. ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ 72 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 96 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಶಕ್ತಿ ಮತ್ತು 160 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೊಚ್ಚ ಹೊಸ ಕಿಗರ್ ಎಸ್‌ಯುವಿಯು ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಆಟೋಮೆಟಿಕ್ (ಎಎಂಟಿ) ಹಾಗೂ ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಹೊಂದಿದೆ. ನಾರ್ಮಲ್, ಇಕೋ & ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್‌ನ್ನು ಪಡೆದಿದ್ದು, ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ. 18.24 - 20.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ವೈಶಿಷ್ಟ್ಯಗಳು: ಈ ಕಾರು ಯುವ ಗ್ರಾಹಕರನ್ನು ಸೆಳೆಯುವಂತಹ ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಕ್ರೂಸ್ ಕಂಟ್ರೋಲ್‍ನ್ನು ಪಡೆದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ರೆನಾಲ್ಟ್ ಕಿಗರ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 4 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ & ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್ ಹಾಗೂ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








