Kiger: 20 ಕಿ.ಮೀ ಮೈಲೇಜ್.. ಹೊಸ ರೆನಾಲ್ಟ್ ಕಿಗರ್ ಕಾರನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
ಭಾರತದಲ್ಲಿ ರೆನಾಲ್ಟ್ (Renault) ಕಂಪನಿಯು ಕೈಗೆಟುಕುವ ಬೆಲೆಯಲ್ಲಿ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ 'ಕಿಗರ್' ಮಾದರಿಯು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.
ಬೆಂಗಳೂರಿನಲ್ಲಿ ರೆನಾಲ್ಟ್ ಕಿಗರ್ (Renault Kiger) ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಆರ್‌ಎಕ್ಸ್ಇ ರೂ.7.22 ಲಕ್ಷ, ಆರ್‌ಎಕ್ಸ್ಎಲ್ ರೂ.7.94 ಲಕ್ಷ, ಆರ್‌ಎಕ್ಸ್ಎಲ್ ಎಎಂಟಿ ರೂ.8.53 ಲಕ್ಷ, ಆರ್‌ಎಕ್ಸ್‌ಟಿ ರೂ.9.01 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಆರ್‌ಎಕ್ಸ್‌ಝಡ್ ರೂ.10.55 ಲಕ್ಷ, ಆರ್‌ಎಕ್ಸ್‌ಝಡ್ ಟರ್ಬೊ ರೂ.11.98 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ರೆನಾಲ್ಟ್ ಕಿಗರ್‌ನ್ನು ರೂ.72,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ ಐದು ವರ್ಷದ ಅವಧಿಗೆ ಶೇಕಡ 9.8% ಬಡ್ಡಿ ದರದಲ್ಲಿ ಮಾಸಿಕ ರೂ.13,750 ಇಎಂಐ ಕಟ್ಟಬೇಕು. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಮೂನ್‌ಲೈಟ್ ಸಿಲ್ವರ್, ಐಸ್ ಕೂಲ್ ವೈಟ್, ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ನೂತನ ರೆನಾಲ್ಟ್ ಕಿಗರ್ ಎರಡು ಪೆಟ್ರೋಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗಲಿದ್ದು, ಇದರ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ 72 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 100 ಪಿಎಸ್ ಪವರ್ ಹಾಗೂ 160 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಆಟೋಮೆಟಿಕ್ (ಎಎಂಟಿ) ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, ನಾರ್ಮಲ್, ಇಕೋ & ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಮೋಡ್ ಅನ್ನು ಒಳಗೊಂಡಿದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 18.24 - 20.5 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ರೆನಾಲ್ಟ್ ಕಿಗರ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ 405 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 4 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ & ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ರೆನಾಲ್ಟ್ ಕಿಗರ್ ಕಾರಿಗೆ ನಿಸ್ಸಾನ್ ಮ್ಯಾಗ್ನೈಟ್, ಕಿಯಾ ಸೋನೆಟ್, ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಸಿಟ್ರಸ್ ಸಿ3, ಮಾರುತಿ ಸುಜುಕಿ ಫ್ರಾಂಕ್ಸ್ ಮತ್ತು ಹ್ಯುಂಡೈ ಎಕ್ಸ್‌ಟರ್ ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆ ಬಗ್ಗೆ ಮಾತ್ರ ತಿಳಿಸಿಕೊಟ್ಟಿದ್ದೇವೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








