Renault: ರೆನಾಲ್ಟ್‌ನಿಂದ ಭಾರೀ ರಿಯಾಯಿತಿ ಘೋಷಣೆ.. ರೂ.4.70 ಲಕ್ಷಕ್ಕೆ ಹೊಸ ಕಾರು, 22 ಕಿ.ಮೀ ಮೈಲೇಜ್!
ಫ್ರೆಂಚ್ ವಾಹನ ತಯಾರಕ ಸಂಸ್ಥೆ ರೆನಾಲ್ಟ್ (Renault) ದೇಶೀಯ ಮಾರುಕಟ್ಟೆಯಲ್ಲಿ ಕ್ವಿಡ್, ಕಿಗರ್ ಹಾಗೂ ಟ್ರೈಬರ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಪಡೆದುಕೊಂಡಿರುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ ಕಂಪನಿಯು ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರರನ್ನು ಆಕರ್ಷಿಸಲು ಈ ಜೂನ್‌ನಲ್ಲಿ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಿಸಿದೆ. ಹೊಸ ರೆನಾಲ್ಟ್ ಕಾರುಗಳನ್ನು ತೆಗೆದುಕೊಂಡರೆ ನೀವು ಎಷ್ಟು ಹಣವನ್ನು ಉಳಿಸಬಹುದು ಎನ್ನುವುದರ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ರೆನಾಲ್ಟ್ ಕಿಗರ್ (Renault Kiger) ಹೊಂದಿರುವ ರಿಯಾಯಿತಿ ಕುರಿತಂತೆ ಮಾತನಾಡೋಣ. ಈ ಕಾರು ಒಟ್ಟು ರೂ.40,000ವರೆಗೆ ಡಿಸ್ಕೌಂಟ್ ಆಫರ್‌ನ್ನು ಹೊಂದಿದೆ. ಅದರಲ್ಲಿ ರೂ.15,000 ನಗದು ರಿಯಾಯಿತಿ (Cash Discount), ರೂ.15,000 ವಿನಿಯಮ ಬೋನಸ್ (Exchange Benefit) ಹಾಗೂ ರೂ.10,000 ಲಾಯಲ್ಟಿ ಬೋನಸ್ (Loyalty Bonus) ಅನ್ನು ಒಳಗೊಂಡಿದೆ.

ನೂತನ ಕಿಗರ್ ಎಸ್‌ಯುವಿ ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ರೆನಾಲ್ಟ್ ಟ್ರೈಬರ್ (Renault Triber) ಕೂಡ ಈ ಜೂನ್‌ನಲ್ಲಿ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದ್ದು, ರೂ.45,000ವರೆಗೆ ಡಿಸ್ಕೌಂಟ್ ಲಭಿಸುತ್ತದೆ. ಇದು ರೂ.6 ಲಕ್ಷದಿಂದ ರೂ.8.97 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 18.2 - 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 7 ಮಂದಿ ಪ್ರಯಾಣಿಸಬಹುದು.

ಹೊಸ ಟ್ರೈಬರ್ ಎಂಪಿವಿಯು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸ್ಟೀರಿಂಗ್-ಮೌಂಟೆಡ್ ಕಂಟ್ರೊಲ್ಸ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.
ರೆನಾಲ್ಟ್ ಕ್ವಿಡ್ (Renault Kwid) ಹ್ಯಾಚ್‌ಬ್ಯಾಕ್ ರೂ.40,000ವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ. ಈ ಕಾರು 1-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 91 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕ್ವಿಡ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಪಡೆದಿದೆ. ನಿಮ್ಮ ಗಮನಕ್ಕೆ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








