ನಿಮ್ಮ ಹೆಂಡತಿಗೆ ಹೊಸ ಕಾರು ಗಿಫ್ಟ್ ನೀಡಬೇಕೇ.. ರೂ.4.70 ಲಕ್ಷಕ್ಕೆ ಸಿಗುತ್ತೆ ಈ ಹ್ಯಾಚ್‌ಬ್ಯಾಕ್, 22 Km ಮೈಲೇಜ್!
ಬೆಂಗಳೂರು, ಮುಂಬೈ, ದೆಹಲಿಯಂತಹ ಮಹಾನಗರಗಳಲ್ಲಿ ವಾಸಿಸುವ ಜನರಿಗೆ ದಿನನಿತ್ಯದ ಬಳಕೆಗೆ ಕಾರುಗಳು ಬೇಕೇ ಬೇಕು. ಅದರಲ್ಲೂ ಗೃಹಿಣಿಯರಿಗೆ ತುಂಬಾ ಅತ್ಯಗತ್ಯ.. ಬೇಸಿಗೆಗಾಲ, ಮಳೆಗಾಲ ಹಾಗೂ ಚಳಿಗಾಲದಲ್ಲಿ ಮಕ್ಕಳನ್ನು ಶಾಲೆಗೆ ಬಿಡುವುದು.. ಶಾಪಿಂಗ್‌ಗೆ ಹೋಗುವುದು ಸೇರಿದಂತೆ ಹಲವು ಕೆಲಸಗಳನ್ನು ಕಾರಿನ ಸಹಾಯದಿಂದ ಮಹಿಳೆಯರು ಬೇಗನೆ ಮಾಡಿ ಮುಗಿಸುತ್ತಾರೆ. ನಿಮ್ಮ ಹೆಂಡತಿಗೆ ಹೊಸ ಕಾರನ್ನು ಉಡುಗೊರೆಯಾಗಿ ನೀಡಬೇಕು ಅಂದುಕೊಂಡಿದ್ದರೆ, ರೆನಾಲ್ಟ್ ಕ್ವಿಡ್ (Renault KWID) ಉತ್ತಮ ಆಯ್ಕೆಯಾಗಲಿದೆ. ಇಲ್ಲಿ ನೂತನ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಬೆಲೆ & ರೂಪಾಂತರಗಳು: ಹೊಚ್ಚ ಹೊಸ ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್ ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್ (ಒ), ಆರ್‌ಎಕ್ಸ್‌ಟಿ ಸೇರಿದಂತೆ 4 ಅತ್ಯಾಧುನಿಕ ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದೆ.

ಕಾರ್ಯಕ್ಷಮತೆ, ಇಂಧನ ದಕ್ಷತೆ: ಈ ಕಾರು 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 91 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಆಸನ ಆಯ್ಕೆ: ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್‌ನಲ್ಲಿ 5 ಜನರು ಸುಲಭವಾಗಿ ಓಡಾಟಾವನ್ನು ಮಾಡಬಹುದು. ಈ ಕಾರು ಚಿಕ್ಕದಾಗಿರುವುದರಿಂದ ಸುಲಭವಾಗಿಯೂ ಪಾರ್ಕಿಂಗ್ ಮಾಡಬಹುದು. ವಾರಾಂತ್ಯ ಅಥವಾ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 279 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.

ಬಣ್ಣಗಳು ಹಾಗೂ ವೈಶಿಷ್ಟ್ಯಗಳು: ಈ ಕಾರು ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್, ಮೂನ್‌ಲೈಟ್ ಸಿಲ್ವರ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಕ್ವಿಡ್ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್ ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಕಾರುಗಳು: ಕ್ವಿಡ್ ಕಾರಿಗೆ ಮಾರುತಿ ಸುಜುಕಿ ಆಲ್ಟೊ ಕೆ10 ಮತ್ತು ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ಗಳು ಪ್ರಬಲ ಎದುರಾಳಿಯಾಗಿವೆ. ಆಲ್ಟೊ ಕೆ10 ರೂ.3.99 ಲಕ್ಷದಿಂದ ರೂ.5.96 ಲಕ್ಷ ಹಾಗೂ ಎಸ್-ಪ್ರೆಸ್ಸೊ ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. ಇವೆರೆಡು ಕಾರುಗಳು ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








