ಬಿಸಿಲಿಗೂ ಸೈ.. ಮಳೆಗೂ ಸೈ ಈ ಕಾರು.. 22 ಕಿ.ಮೀ ಮೈಲೇಜ್, ಬೈಕ್‌ನಷ್ಟೇ EMI

ಬೇಸಿಗೆಗಾಲ, ಮಳೆಗಾಲ ಹಾಗೂ ಚಳಿಗಾಲದಲ್ಲಿ ಓಡಾಡಲು ದ್ವಿಚಕ್ರ ವಾಹನಗಳಿಗಿಂತ ಕಾರುಗಳು ಉತ್ತಮ ಆಯ್ಕೆಯಾಗಿವೆ. ಇವು ಕೆಟ್ಟ ಹವಾಮಾನ ಪರಿಸ್ಥಿತಿಯಲ್ಲಿ ಕೂಡ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತವೆ. ಆದರೆ, ಮಧ್ಯಮ ವರ್ಗದವರೇ ಹೆಚ್ಚಿರುವ ನಮ್ಮ ದೇಶದಲ್ಲಿ ಹಣಕಾಸಿನ ಸಮಸ್ಯೆಗಳಿಂದ ಬಹುತೇಕರಿಗೆ ಹೊಸ ಕಾರುಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ.

ಇಲ್ಲಿ ನಾವು ತಿಳಿಸಲಾಗಿರುವ ರೆನಾಲ್ಟ್ ಕಂಪನಿಯ 'ಕ್ವಿಡ್' ಹ್ಯಾಚ್‌ಬ್ಯಾಕ್ ಮಾತ್ರ ಕೈಗೆಟುಕುವ ಬೆಲೆಯಲ್ಲಿ ಸಿಗುವುದರೊಂದಿಗೆ ಬೈಕ್‌ನಷ್ಟೇ ಇಎಂಐ (EMI) ಪಾವತಿಯ ಆಯ್ಕೆಯನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, 7 ವರ್ಷದ ಅವಧಿಗೆ ತಿಂಗಳಿಗೆ ರೂ.5,966 ಇಎಂಐ ತುಂಬಬೇಕು.

Renault Kwid Car Good Option In Summer Winter And Rainy Season 22 Mileage Very Low Emi

ನೂತನ ರೆನಾಲ್ಟ್ ಕ್ವಿಡ್ (Renault KWID) ಕಾರು, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಆರ್‌ಎಕ್ಸ್ಇ ಹಾಗೂ ಆರ್‌ಎಕ್ಸ್ಎಲ್ (ಒ) ಸೇರಿದಂತೆ ವಿವಿಧ ರೂಪಾಂತಗಳ ಆಯ್ಕೆಯಲ್ಲಿ ಸಹ ದೊರೆಯುತ್ತದೆ. ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಸೇರಿದಂತೆ 5-ಮೊನೊಟೋನ್ ಮತ್ತು 5-ಡುಯಲ್ ಟೋನ್ ಬಣ್ಣಗಳೊಂದಿಗೂ ಲಭ್ಯವಿದ್ದು, ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಹ್ಯಾಚ್‌ಬ್ಯಾಕ್ 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 91 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಎಂಟಿ (ಆಟೋಮೆಟಿಕ್) ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗಲಿದ್ದು, ರೂಪಾಂತರ (ವೇರಿಯೆಂಟ್)ಗಳಿಗೆ ಅನ್ವಯ 21.46 - 22.3 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

Renault Kwid Car Good Option In Summer Winter And Rainy Season 22 Mileage Very Low Emi

ಹೊಸ ರೆನಾಲ್ಟ್ ಕ್ವಿಡ್ ಕಾರು ಬೆಲೆಗೆ ತಕ್ಕಂತೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕೀಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿಯನ್ನು ಹೊಂದಿದೆ. ಹಾಗೆಯೇ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 279 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.

ಸುರಕ್ಷತೆಯ ವಿಚಾರದಲ್ಲಿಯೂ ಈ ಕಾರು ಅತ್ಯಾಧುನಿಕವಾಗಿದೆ. ಡುಯಲ್ ಫ್ರಂಟ್ ಏರ್ ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಮತ್ತು ಹಿಲ್ ಸ್ಟಾರ್ಟ್ ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

Renault Kwid Car Good Option In Summer Winter And Rainy Season 22 Mileage Very Low Emi

ನೂತನ ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್‌ಗೆ ಟಾಟಾ ಪಂಚ್‌, ಮಾರುತಿ ಸುಜುಕಿ ಆಲ್ಟೊ ಕೆ10, ಮಾರುತಿ ಸುಜುಕಿ ಎಸ್-ಪ್ರೆಸ್ಸೊಗಳು ಪ್ರಬಲ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಈ ಕ್ವಿಡ್ ಕಾರಿನ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ವಿವರಗಳಿಗೆ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, May 5, 2024, 15:00 [IST]
English summary
Renault kwid car good option in summer winter and rainy season 22 km mileage very low emi
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+