Renault: ರೆನಾಲ್ಟ್‌ನಿಂದ ದೊಡ್ಡ ಸಿಹಿಸುದ್ದಿ.. ಏನದು?

ಫ್ರಾನ್ಸ್ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿ ರೆನಾಲ್ಟ್‌ (Renault), ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಈ ಮೇ ತಿಂಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸಲು ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮೊದಲಿಗೆ ರೆನಾಲ್ಟ್‌ನ ಎಂಟ್ರಿ ಲೆವೆಲ್ ಮಾಡೆಲ್ (ಆರಂಭಿಕ ಮಾದರಿ) ಕ್ವಿಡ್ (Kwid) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಈ ಕಾರು ಒಟ್ಟು ರೂ.40,000 ವರೆಗೆ ಡಿಸ್ಕೌಂಟ್ ಆಫರ್ ಪಡೆದಿದೆ. ಅದರಲ್ಲಿ ರೂ.15,000 ನಗದು ರಿಯಾಯಿತಿ (Cash Discount), ರೂ.15,000 ವಿನಿಮಯ ಬೋನಸ್ (Exchange Bonus) ಹಾಗೂ ರೂ.10,000 ಲಾಯಲ್ಟಿ ನಗದು ಪ್ರಯೋಜನಗಳು (Loyalty Cash Benefit) ಕೂಡ ಸೇರಿವೆ.

Renault Kwid Kiger Triber Cars Have Upto Rs 40 000 Discount In May Rs 4 70 Lakh Starting Price

ನೂತನ ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್ ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಸಿಗುತ್ತದೆ. ಜೊತೆಗೆ 21.46 - 22.3 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ರೆನಾಲ್ಟ್ ಕಿಗರ್ (Renault Kiger) ಕಾರು ಸಹ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಹೊಂದಿದ್ದು, ಬರೊಬ್ಬರಿ ರೂ.40,000 ವರೆಗೆ ಡಿಸ್ಕೌಂಟ್ ಆಫರ್ ಒಳಗೊಂಡಿದೆ. ಹೊಸ ಕಿಗರ್ ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 18.24 ರಿಂದ 20.5 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Renault Kwid Kiger Triber Cars Have Upto Rs 40 000 Discount In May Rs 4 70 Lakh Starting Price

ಈ ಕಿಗರ್ ಮಾದರಿಯು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಸ್ಟಾರ್ಟ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.

ದೇಶೀಯವಾಗಿ 7 ಆಸನ ಆಯ್ಕೆಯಲ್ಲಿ ದೊರೆಯುವ ರೆನಾಲ್ಟ್ ಟ್ರೈಬರ್ (Renault Triber) ಎಂಪಿವಿ ಒಟ್ಟು ರೂ.35,000 ವರೆಗೆ ರಿಯಾಯಿತಿ ಸೌಲಭ್ಯವನ್ನು ಹೊಂದಿದೆ. ಆ ಮೊತ್ತದಲ್ಲಿ ರೂ.10,000 ನಗದು ರಿಯಾಯಿತಿ, ರೂ.15,000 ವಿನಿಮಯ ಬೋನಸ್ ಮತ್ತು ರೂ.10,000 ಲಾಯಲ್ಟಿ ನಗದು ಪ್ರಯೋಜನಗಳು ಸಹ ಇವೆ. ಈ ಕಾರು ರೂ.6 ಲಕ್ಷದಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

Renault Kwid Kiger Triber Cars Have Upto Rs 40 000 Discount In May Rs 4 70 Lakh Starting Price

ಹೊಸ ರೆನಾಲ್ಟ್ ಟ್ರೈಬರ್ ಎಂಪಿವಿ 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 18.2 ರಿಂದ 20 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಗಮನಕ್ಕೆ.. ಈ ಡಿಸ್ಕೌಂಟ್ ಆಫರ್ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 17, 2024, 15:57 [IST]
English summary
Renault kwid kiger triber cars have upto rs 40000 discount may 2024 rs 4 70 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+