Renault: ಭಾರತೀಯ ಸೇನೆಗೆ ಜನಪ್ರಿಯ ರೆನಾಲ್ಟ್ ಕಾರುಗಳು ಹಸ್ತಾಂತರ.. ಇವುಗಳನ್ನು ನೀವು ಖರೀದಿಸಬಹುದು!
ರೆನಾಲ್ಟ್ ಇಂಡಿಯಾ (Renault India) ಕೈಗೆಟುಕುವ ಬೆಲೆಯ ವಿವಿಧ ಕಾರುಗಳನ್ನು ಮಾರಾಟ ಮಾರಾಟ ಮಾಡುತ್ತಿದ್ದು, ದೇಶಾದ್ಯಂತ ಮನೆ ಮಾತಾಗಿದೆ. ಸದ್ಯ ಕಂಪನಿಯ ಜನಪ್ರಿಯ ಟ್ರೈಬರ್ ಮತ್ತು ಕಿಗರ್ ಕಾರುಗಳನ್ನು ಭಾರತೀಯ ಸೇನೆಯ ಈಸ್ಟರ್ನ್ ಕಮಾಂಡ್‍ಗೆ ಹಸ್ತಾಂತರ ಮಾಡಿದೆ. ಸೆಪ್ಟೆಂಬರ್‌ನಲ್ಲಿಯೂ ಕಂಪನಿಯು ಕೆಲವು ಕಾರುಗಳನ್ನು ನಾರ್ತನ್ ಕಮಾಂಡ್‍ನ ಭಾಗವಾಗಿದ್ದ 14 ಕಾರ್ಪ್ಸ್‌ಗೆ (ಫೈರ್ & ಫ್ಯೂರಿ ಕಾರ್ಪ್ಸ್) ಉಡೊಗೊರೆಯಾಗಿ ನೀಡಿತ್ತು. ಈ 14 ಕಾರ್ಪ್ಸ್ ಸೈನಿಕರು ಕಾರ್ಗಿಲ್-ಲೇಹ್ ಹಾಗೂ ಸಿಯಾಚಿನ್ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಾರೆ.
ಈ ಕುರಿತಂತೆ ರೆನಾಲ್ಟ್ ಇಂಡಿಯಾ ಸಿಇಒ ಎಂ.ವೆಂಕಟರಾಮ್ (M.Venkatram) ಅವರು ಸಂತಸ ಹಂಚಿಕೊಂಡಿದ್ದಾರೆ. 'ನೂತನ ಕಾರುಗಳನ್ನು ಭಾರತೀಯ ಸೇನೆಗೆ ಹಸ್ತಾಂತರ ಮಾಡಿರುವುದು ನಮಗೆ ಹೆಮ್ಮೆ ತಂದಿದೆ. ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಗುಣಮಟ್ಟ, ಸುರಕ್ಷತೆಗೆ ಹೆಸರುವಾಸಿಯಾಗಿರುವ ಟ್ರೈಬರ್ ಮತ್ತು ಕಿಗರ್ ಕಾರುಗಳು ಪ್ರತಿಬಿಂಬಿಸುತ್ತೇವೆ' ಎಂದು ಹೇಳಿದ್ದಾರೆ.

ಸದ್ಯ, ರೆನಾಲ್ಟ್ ಇಂಡಿಯಾ ದೇಶೀಯ ಮಾರುಕಟ್ಟೆ ಕ್ವಿಡ್, ಕಿಗರ್ ಹಾಗೂ ಟ್ರೈಬರ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅದರಲ್ಲೂ ಕ್ವಿಡ್ (KWID) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.4.70 ರಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ರೆನಾಲ್ಟ್ ಕ್ವಿಡ್ ಕಾರಿನಲ್ಲಿ 5-ಜನರು ಸುಲಭವಾಗಿ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀ-ಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗೆ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.

ರೆನಾಲ್ಟ್ ಕಿಗರ್ (Renault Kiger) ಬಗ್ಗೆ ಹೇಳುವುದಾದರೆ, ಇದೊಂದು ಎಸ್‌ಯುವಿಯಾಗಿದೆ. ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18.24 ರಿಂದ 20.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ನೂತನ ರೆನಾಲ್ಟ್ ಕಿಗರ್ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್- ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4-ಏರ್‌ಬ್ಯಾಗ್‌ಗಳು ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ರೆನಾಲ್ಟ್ ಟ್ರೈಬರ್ (Renault Triber) ಕೂಡ ಪ್ರಮುಖ ಎಂಪಿವಿಯಾಗಿದೆ. ಇದು ರೂ.6 ರಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 7 ಆಸನಗಳನ್ನು ಪಡೆದಿದೆ.
ಹೊಸ ರೆನಾಲ್ಟ್ ಟ್ರೈಬರ್ ಕಾರು, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ವೈರ್‌ಲೆಸ್ ಚಾರ್ಜರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4-ಏರ್‌ಬ್ಯಾಗ್‌ಗಳು ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








