7 ಜನ ಪ್ರಯಾಣಿಸುವ ಕಾರನ್ನು ತೆಗೆದುಕೊಳ್ಳಬೇಕೇ.. ರೂ.6 ಲಕ್ಷಕ್ಕೆ ಸಿಗುತ್ತೆ ಈ ಎಂಪಿವಿ, 20 Km ಮೈಲೇಜ್

ದೇಶದ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ರೆನಾಲ್ಟ್ (Renault) ಖ್ಯಾತಿ ಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನಿಮ್ಮ ಕುಟುಂಬಕ್ಕಾಗಿ ಹೊಸ ಕಾರನ್ನು ತೆಗೆದುಕೊಳ್ಳಲು ಆಯೋಚಿಸಿದ್ದೀರಾ.. ಹಾಗಾದರೆ ಕೈಗೆಟುಕುವ ದರದಲ್ಲಿ ಸಿಗುವ 'ಟ್ರೈಬರ್' ಎಂಪಿವಿ ಉತ್ತಮ ಆಯ್ಕೆಯಾಗಲಿದೆ. ಇಲ್ಲಿ ನೂತನ ಕಾರಿನ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯ (Features)ಗಳ ಕುರಿತು ಸಂಪೂರ್ಣವಾಗಿ ವಿವರಿಸಿದ್ದೇವೆ.

ಬೆಲೆ: ನೂತನ ರೆನಾಲ್ಟ್ ಟ್ರೈಬರ್ (Renault Triber) ಕಾರು ಅತ್ಯಂತ ಅಗ್ಗದ ದರದಲ್ಲಿ ಸಿಗುತ್ತದೆ. ಇದು ರೂ.6 ಲಕ್ಷದಿಂದ ರೂ.8.98 ಲಕ್ಷ (ಎಕ್ಸ್ ಶೋರೂಂ - ದೆಹಲಿ) ಬೆಲೆಯನ್ನು ಹೊಂದಿದೆ. ನೋಡುಗರನ್ನು ಸೆಳೆಯುವಂತಹ ಅತ್ಯಾಧುನಿಕ ವಿನ್ಯಾಸವನ್ನು ಸಹ ಪಡೆದಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

Renault Triber Best 7 Seater Car For Buy Rs 6 Lakh Starting Price 20 Km Mileage

ಆಸನ ಆಯ್ಕೆ & ಬಣ್ಣಗಳು: ಈ ಎಂಪಿವಿಯು 7 ಆಸನ ವ್ಯವಸ್ಥೆಯನ್ನು ಹೊಂದಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು ಸಾಧ್ಯವಾಗುವಂತೆ 84 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದ್ದು, ಆಸನಗಳನ್ನು ಮಡಚಿದರೆ 625 ಲೀಟರ್‌ವರೆಗೂ ವಿಸ್ತರಿಸಬಹುದು. ಈ ಕಾರು ಐಸ್ ಕೂಲ್ ವೈಟ್, ಸೀಡರ್ ಬ್ರೌನ್, ಮೂನ್‌ಲೈಟ್ ಸಿಲ್ವರ್ ಹಾಗೂ ಎಲೆಕ್ಟ್ರಿಕ್ ಬ್ಲೂ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಕಾರ್ಯಕ್ಷಮತೆ: ರೆನಾಲ್ಟ್ ಟ್ರೈಬರ್ ಕಾರು 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 72 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 96 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Renault Triber Best 7 Seater Car For Buy Rs 6 Lakh Starting Price 20 Km Mileage

ವೈಶಿಷ್ಟ್ಯಗಳು: ಈ ಎಂಪಿವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೂಲ್ಡ್ ಸ್ಟೋರೇಜ್, ಏರ್ ಫಿಲ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು: ರೆನಾಲ್ಟ್ ಟ್ರೈಬರ್ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 4 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.

Renault Triber Best 7 Seater Car For Buy Rs 6 Lakh Starting Price 20 Km Mileage

ಪ್ರತಿಸ್ಪರ್ಧಿ ಕಾರು: ಈ ಎಂಪಿವಿಗೆ ಮಹೀಂದ್ರಾ ಬೊಲೆರೊ ದೊಡ್ಡ ಎದುರಾಳಿಯಾಗಿದೆ. ಹೊಚ್ಚ ಹೊಸ ಬೊಲೆರೊ ರೂ.9.98 ಲಕ್ಷದಿಂದ ರೂ.10.91 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನ್ಯುಯಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, July 6, 2024, 14:00 [IST]
English summary
Renault triber best 7 seater car for buy rs 6 lakh starting price 20 km mileage
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+