Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದಲ್ಲಿ ರೆನಾಲ್ಟ್ (Renault) ಕೂಡ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಟ್ರೈಬರ್ (Triber) ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಬೆಂಗಳೂರಿನಲ್ಲಿ ರೆನಾಲ್ಟ್ ಟ್ರೈಬರ್ ಕಾರಿನ ಬೇಸ್ ಮಾಡೆಲ್ (ಆರಂಭಿಕ ಆವೃತ್ತಿ) ಆರ್‌ಎಕ್ಸ್ಇ ರೂ.7.22 ಲಕ್ಷ, ಆರ್‌ಎಕ್ಸ್‌ಎಲ್ ರೂ.8.17 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಆರ್‌ಎಕ್ಸ್‌ಟಿ ರೂ.9.13 ಲಕ್ಷ, ಆರ್‌ಎಕ್ಸ್‌ಝಡ್ ರೂ.9.87 ಲಕ್ಷ, ಆರ್‌ಎಕ್ಸ್‌ಝಡ್ ಡುಯಲ್ ಜೋನ್ ರೂ.10.14 ಲಕ್ಷ ಹಾಗೂ ಟಾಪ್ ಎಂಡ್ ಮಾಡೆಲ್ (ಗರಿಷ್ಠ ಆವೃತ್ತಿ) ಆರ್‌ಎಕ್ಸ್‌ಝಡ್ ಈಜಿ-ಆರ್ ಎಎಂಟಿ ಡುಯಲ್ ಟೋನ್ ರೂ.10.76 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

Renault Triber car on road price and emi details

ನೀವು ಈ ಕಾರನ್ನು ರೂ.72,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.13,738 ಇಎಂಐ ಕಟ್ಟಬೇಕು. ರೆನಾಲ್ಟ್ ಟ್ರೈಬರ್ ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ಐಸ್ ಕೂಲ್ ವೈಟ್, ಸೀಡರ್ ಬ್ರೌನ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ರೆನಾಲ್ಟ್ ಟ್ರೈಬರ್, 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 72 ಪಿಎಸ್ ಗರಿಷ್ಠ ಪವರ್ ಮತ್ತು 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 18.2 ರಿಂದ 20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Renault Triber car on road price and emi details

ಈ ಕಾರು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ಸ್, ಎಸಿ ವೆಂಟ್ಸ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಕೂಲ್ಡ್ ಸ್ಟೋರೇಜ್ & ಏರ್ ಫಿಲ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ರೆನಾಲ್ಟ್ ಟ್ರೈಬರ್ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 4 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್, TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ರೇರ್ ವ್ಯೂ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

Renault Triber car on road price and emi details

ಈ ಕಾರಿಗೆ ಮಹೀಂದ್ರಾ ಬೊಲೆರೊ ಪ್ರಬಲ ಎದುರಾಳಿಯಾಗಿದೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ಮಾದರಿಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಶೋರೂಂಗೆ ಭೇಟಿ ನೀಡಿರಿ. ರೆನಾಲ್ಟ್ ಟ್ರೈಬರ್ ಅತ್ಯಾಧುನಿಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, April 24, 2024, 8:30 [IST]
English summary
Renault triber car on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+