ಗ್ರಾಮೀಣ ಪ್ರದೇಶದಲ್ಲಿ ಈ ಎಸ್‌ಯುವಿಗಳು ಸಖತ್ ಫೇಮಸ್: ಕಡಿಮೆ ಬೆಲೆಯ ಈ SUVಗಳು ನಿಮಗಾಗಿ!
ಭಾರತದಲ್ಲಿ ದಿನೇ ದಿನೇ ಎಸ್‌ಯುವಿ ಮಾರುಕಟ್ಟೆ ಬೆಳೆಯುತ್ತಲೇ ಹೋಗುತ್ತಿದೆ. ಇದೇ ಕಾರಣದಿಂದ ಹಲವಾರು ಕಾರು ನಿರ್ಮಾಣ ಕಂಪನಿಗಳೂ ಸಹ ಎಸ್‌ಯುವಿ ಕಾರು ಮಾದರಿಯನ್ನು ಹೆಚ್ಚಾಗಿ ಮಾರುಕಟ್ಟೆಗೆ ತರಲು ಪ್ರಯತ್ನಿಸಿರುವುದನ್ನು ನಾವು ಕಾಣಬಹುದಾಗಿದೆ. ಇನ್ನೊಂದು ಕಡೆ ಭಾರತ ಬಿಟ್ಟು ಹೋಗಿದ್ದ ಕಾರು ನಿರ್ಮಾಣ ಕಂಪನಿಗಳು, ಭಾರತೀಯ ಆಟೋಮೊಬೈಲ್ ಕ್ಷೇತ್ರ ಬೆಳೆಯುತ್ತಿರುವುದನ್ನು ಕಂಡು ಮತ್ತೆ ಇತ್ತ ಮರಳುತ್ತಿದೆ. ಅಂದ ಹಾಗೆ ಎಸ್‌ಯುವಿ ಕಾರುಗಳಿಗೆ ನಗರದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹೆಚ್ಚು ಬೇಡಿಕೆಯಿದ್ದು, ಈ ಕುರಿತಾಗಿ ಇಂದಿನ ಲೇಖನದಲ್ಲಿ ನಾವು ನೋಡೋಣ.
ಮಾರುತಿ ಸುಜುಕಿ ಬ್ರೆಝಾ: ನಗರಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಬೇಡಿಕೆಯಿರುವ ಕಾರುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿ ಇರುವ ಕಾರು ಈ ಮಾರುತಿ ಸುಜುಕಿ ಬ್ರೆಝಾ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಸೇರಿದಂತೆ 4 ರೂಪಾಂತರ ಒಳಗೊಂಡಂತೆ 6 ಮೊನೊಟೋನ್, 3 ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. 5- ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿರುವ ಈ ಎಸ್‌ಯುವಿ, 1.5 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಹ್ಯುಂಡೈ ಕ್ರೆಟಾ: ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡಿಸೇಲ್ ಪವರ್ ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್ ಅಥವಾ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಮತ್ತೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 7-ಸ್ವೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ.

ಮಹೀಂದ್ರಾ ಬೊಲೇರೋ: ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಬೊಲೆರೊ (Mahindra Bolero) ಎಸ್‌ಯುವಿಯು ಸಾಮಾನ್ಯ ಬೊಲೆರೊ ಹಾಗೂ ಬೊಲೆರೊ ನಿಯೋ ಎಂಬ ಎರಡು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಬೊಲೆರೊ ನಿಯೋ ಆವೃತ್ತಿಯು ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜೊತೆಗೆ ಮೆಜೆಸ್ಟಿಕ್ ಸಿಲ್ವರ್, ಹೈವೇ ರೆಡ್, ಪರ್ಲ್ ವೈಟ್, ಡೈಮಂಡ್ ವೈಟ್ ಬಣ್ಣಗಳೊಂದಿಗೂ ಸಿಗುತ್ತದೆ.
ಟಾಟಾ ನೆಕ್ಸಾನ್: ಟಾಟಾ ನೆಕ್ಸಾನ್ (Nexon) ಎಸ್‍ಯುವಿ ಒಂದು 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 120 bhp ಮತ್ತು 170 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ AMT, ಮತ್ತು 7-ಸ್ಪೀಡ್ DCT ಗೇರ್‌ಬಾಕ್ಸ್ ಎಂಬ ಮೂರು ಗೇರ್ ಬಾಕ್ಸ್ ಗಳನ್ನು ಒಳಗೊಂಡಿವೆ.

ಇದರೊಂದಿಗೆ ಈ ಹೊಸ ನೆಕ್ಸಾನ್ ಎಸ್‍ಯುವಿಯಲ್ಲಿ 1.5-ಲೀಟರ್, ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 114 bhp ಪವರ್ ಮತ್ತು 260 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ AMT ಗೇರ್‌ಬಾಕ್ಸ್‌ನೊಂದಿಗೆ ನಿರ್ದಿಷ್ಟಪಡಿಸಬಹುದು.
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್: ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ರೂ.13.60 ಲಕ್ಷದಿಂದ ರೂ.24.54 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಝಡ್2, ಝಡ್4, ಝಡ್6, ಝಡ್8 ರೂಪಾಂತರ ಮತ್ತು ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ನಾಪೋಲಿ ಬ್ಲ್ಯಾಕ್ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.
ಈ ಮಹೀಂದ್ರಾ ಸ್ಕಾರ್ಪಿಯೋ ಎನ್ 2.2-ಲೀಟರ್ ಡೀಸೆಲ್ ಮತ್ತು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಸಿಗುತ್ತದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಪಡೆದಿದ್ದು, 2WD (ಟೂ ವೀಲ್ ಡ್ರೈವ್) 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ವಿನ್ಯಾಸದಲ್ಲಿಯೂ ಅತ್ಯುತ್ತಮವಾಗಿದ್ದು, 6, 7 ಆಸನ (ಸೀಟ್)ದೊಂದಿಗೆ ದೊರೆಯುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications