Safest Cars: ಭಾರತದ ಅತ್ಯಂತ ಸುರಕ್ಷಿತ ಕಾರುಗಳಿವು, ಟಾಟಾದಿಂದ ಮಹೀಂದ್ರಾವರೆಗೆ...

ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಪ್ರಮುಖವಾಗಿ ಟಾಟಾ, ಮಹೀಂದ್ರಾ ಕಂಪನಿಯ ಕಾರುಗಳು ಪ್ರಯಾಣಿಕರಿಗೆ ಅಪಘಾತವಾದ ಸಂದರ್ಭದಲ್ಲಿ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತವೆ. ಇಲ್ಲಿ ಗ್ಲೋಬಲ್ ಎನ್‌ಸಿಎಪಿ ಹಾಗೂ ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5 ಸ್ಟಾರ್ ರೇಟಿಂಗ್ ಪಡೆದ ಸುರಕ್ಷಿತ ಕಾರು (Safest Cars)ಗಳ ಬಗ್ಗೆ ವಿವರಿಸಿದ್ದೇವೆ.

ಇತ್ತೀಚೆಗೆ ಗ್ಲೋಬಲ್ ಎನ್‌ಸಿಎಪಿ (Global NCAP) ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದ ಟಾಟಾ ನೆಕ್ಸಾನ್ ಫೇಸ್‌ಲಿಫ್ಟ್ ಎಸ್‌ಯುವಿ ಬಗ್ಗೆ ಮೊದಲಿಗೆ ಮಾತನಾಡೋಣ. ಈ ಕಾರು ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 32.22 ಅಂಕ, ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.52 ಅಂಕಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Safest Cars In India: Nexon, Harrier, Safari, Punch, Slavia, Virtus, Scorpio N, XUV700

ಟಾಟಾ ಹ್ಯಾರಿಯರ್ (Tata Harrier) ಹಾಗೂ ಸಫಾರಿ (Safari) ಎಸ್‌ಯುವಿಗಳು ಅತ್ಯಂತ ಸುರಕ್ಷಿತ ಕಾರುಗಳಾಗಿ ಹೊರಹೊಮ್ಮಿವೆ. ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆದ ಭಾರತ್ ಎನ್‌ಸಿಎಪಿ (ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ - Bharat NCAP) ಪರೀಕ್ಷೆಯಲ್ಲಿ ಅತ್ಯಂತ ಸುರಕ್ಷತಾ ಕಾರುಗಳೆಂಬ ಹೆಗ್ಗಳಿಗೆ ಪಾತ್ರವಾಗಿದ್ದು, 5 ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿವೆ.

ಸುರಕ್ಷತೆಯ ವಿಚಾರದಲ್ಲಿಯೂ ಈ ಟಾಟಾ ಹ್ಯಾರಿಯರ್, ಸಫಾರಿ ಕಾರುಗಳು ಅತ್ಯುತ್ತಮವಾಗಿದ್ದು, 7 - ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೆಕೆಂಡ್ ರೋ ಐಎಸ್ಒಎಫ್ಐಎಕ್ಸ್ (ISOFIX) ಚೈಲ್ಡ್ ಸೀಟ್ ಆಂಕಾರೇಜ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌) ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.

Safest Cars In India: Nexon, Harrier, Safari, Punch, Slavia, Virtus, Scorpio N, XUV700

ಟಾಟಾ ಪಂಚ್ (Tata Punch) ಪುಟ್ಟ ಎಸ್‌ಯುವಿಯಾಗಿದ್ದರೂ ಅತ್ಯುತ್ತಮ ಸುರಕ್ಷಿತ ಕಾರಾಗಿ ಹೆಸರು ಮಾಡಿದೆ. ಗ್ಲೋಬಲ್ ಎನ್‌ಸಿಎಪಿಯಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ಈ ಕಾರು, ಏರ್‌ಬ್ಯಾಗ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಡಿಫಾಗರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್, ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.

ಸ್ಕೋಡಾ ಸ್ಲಾವಿಯಾ, ಪೋಕ್ಸ್‌ವ್ಯಾಗನ್ ವರ್ಟಸ್ ಕಾರುಗಳು ಸಹ ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್ ಗಳಿಸಿವೆ. ಈ ಕಾರುಗಳು ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 29.71 ಅಂಕ ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 42 ಅಂಕಗಳನ್ನು ಗಳಿಸಿವೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Safest Cars In India: Nexon, Harrier, Safari, Punch, Slavia, Virtus, Scorpio N, XUV700

ಮಹೀಂದ್ರಾ ಸ್ಕಾರ್ಪಿಯೋ-ಎನ್ (Mahindra Scorpio-N) ಸಹ ಉತ್ತಮ ಸುರಕ್ಷಿತ ಕಾರೆಂದು ಹೆಸರು ಮಾಡಿದ್ದು, ಗ್ಲೋಬಲ್ ಎನ್‌ಸಿಎಪಿ ಪರೀಕ್ಷೆಯ ಮಕ್ಕಳ ರಕ್ಷಣೆ ವಿಭಾಗದಲ್ಲಿ 5 ಸ್ಟಾರ್ ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 3 ಸ್ಟಾರ್ ರೇಟಿಂಗ್ ಪಡೆದಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ - ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಒಳಗೊಂಡಂತೆ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‌ಯುವಿಯು ಅತ್ಯುತ್ತಮ ಸುರಕ್ಷಿತ ಕಾರಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ ವಯಸ್ಕರ ರಕ್ಷಣೆ ವಿಭಾಗದಲ್ಲಿ 5 ಸ್ಟಾರ್ ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 3 ಸ್ಟಾರ್ ರೇಟಿಂಗ್ ಪಡೆದಿದೆ. 7 ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಒಳಗೊಂಡಿದೆ.

More from DriveSpark

Article Published On: Thursday, February 15, 2024, 16:51 [IST]
English summary
Safest cars in india nexon harrier safari punch slavia virtus scorpio n xuv700
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+