ಸುರಕ್ಷಿತ ಕಾರುಗಳಿವು.. ಇವುಗಳಿಗೆ ಸರಿ ಸಾಟಿಯೇ ಇಲ್ಲ: ಭರಪೂರ ಸೇಫ್ಟಿ ಫೀಚರ್ಸ್

ದೇಶದಲ್ಲಿ ಹೊಸ ಕಾರು ಖರೀದಿಸುವವರೂ ಅದರ ಬೆಲೆಗಿಂತ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಾರೆ. ಆದರೆ, ಯಾವ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ ಎಂಬುದರ ಬಗ್ಗೆ ತಿಳಿದಿರುವುದಿಲ್ಲ. ಇಲ್ಲಿ ಅತ್ಯುತ್ತಮ ಸೇಫ್ಟಿ ಫೀಚರ್ಸ್ ಹೊಂದಿರುವ ಟಾಟಾ ಸಫಾರಿ ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಸಫಾರಿ (Tata Safari) ಕಾರಿನ ಬಗ್ಗೆ ಮಾತನಾಡೋಣ. ಇದು ಸುರಕ್ಷತೆಗೆ ಹೆಸರುವಾಸಿಯಾಗಿದ್ದು, ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ (ಭಾರತ್ ಎನ್‌ಸಿಎಪಿ-Bharat NCAP) ಕ್ರ್ಯಾಶ್ ಟೆಸ್ಟ್ ನಲ್ಲಿ 5-ಸ್ಟಾರ್ ರೇಟಿಂಗ್ ಪಡೆದಿದೆ. ವಯಸ್ಕರ ರಕ್ಷಣೆ (Adult Occupant) ವಿಭಾಗದಲ್ಲಿ ಗರಿಷ್ಠ 32ಕ್ಕೆ 30.08 ಮತ್ತು ಮಕ್ಕಳ ರಕ್ಷಣೆ (Child Occupant) ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಗಳಿಸಿದೆ.

Safest Cars Tata Safari Mahindra Scorpio N Airbags And Details

ಈ ಟಾಟಾ ಸಫಾರಿ ಎಸ್‌ಯುವಿ 7-ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್, 360 ಡಿಗ್ರಿ ಕ್ಯಾಮೆರಾ, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೆಕೆಂಡ್ ರೋ ISOFIX ಚೈಲ್ಡ್ ಸೀಟ್ ಆಂಕಾರೇಜ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌) ಸೇರಿದಂತೆ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಸಫಾರಿ ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರು 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, 170 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. 16.3 ಕೆಎಂಪಿಎಲ್ ನೀಡುತ್ತದೆ.

Safest Cars Tata Safari Mahindra Scorpio N Airbags And Details

ಮಹೀಂದ್ರಾ (Mahindra) ಮಾರಾಟಗೊಳಿಸುವ ಸ್ಕಾರ್ಪಿಯೋ ಎನ್ (Scorpio N) ಎಸ್‌ಯುವಿ ಕೂಡ ಸುರಕ್ಷತೆ ವಿಚಾರದಲ್ಲಿ ಅತ್ಯುತ್ತಮವಾಗಿದೆ. ಗ್ಲೋಬಲ್ ಎನ್‌ಸಿಎಪಿ (Global NCAP) ನಡೆಸುವ ಪರೀಕ್ಷೆಯ ವಯಸ್ಕರ ರಕ್ಷಣೆ (Adult Occupant) ವಿಭಾಗದಲ್ಲಿ 34ಕ್ಕೆ 29.25ಕ್ಕೆ ಅಂಕಗಳನ್ನು ಗಳಿಸುವ ಮೂಲಕ 5-ಸ್ಟಾರ್ ಹಾಗೂ ಮಕ್ಕಳ ರಕ್ಷಣೆ (Child Occupant) ವಿಭಾಗದಲ್ಲಿ 3-ಸ್ಟಾರ್ ರೇಟಿಂಗ್ ಪಡೆದಿದೆ.

ಈ ಮಹೀಂದ್ರಾ ಸ್ಕಾರ್ಪಿಯೋ 6 ಏರ್‌ಬ್ಯಾಗ್‌, ಹಿಲ್ ಅಸಿಸ್ಟ್ ಕಂಟ್ರೋಲ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ರೂ.13.60 ಲಕ್ಷದಿಂದ ರೂ.24.54 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ ಎಸ್‌ಯುವಿ 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯಲಿದ್ದು, 2.2-ಲೀಟರ್ ಡೀಸೆಲ್ ಹಾಗೂ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೊಮೇಟಿಕ್ ಗೇರ್ ಬಾಕ್ಸ್ ನೊಂದಿಗೂ ಸಿಗುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 14.67 ರಿಂದ 15 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಸ್ಕಾರ್ಪಿಯೋ ಎನ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಫ್ರಂಟ್ & ರೇರ್ ಕ್ಯಾಮೆರಾ ಮತ್ತು ವೈರ್‌ಲೆಸ್ ಫೋನ್ ಚಾರ್ಜಿಂಗ್, 6-ವೇ-ಪವರ್ ಡ್ರೈವರ್ ಸೀಟ್ ಮತ್ತು ಸಿಂಗಲ್ ಪೇನ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 25, 2024, 15:40 [IST]
English summary
Safest cars tata safari mahindra scorpio n airbag and details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+