ಗರಿಷ್ಟ ಸುರಕ್ಷತೆ ನೀಡುವ 6 ಲಕ್ಷದ 5-ಸೀಟರ್ ಕಾರುಗಳು: 6 ಏರ್‌ಬ್ಯಾಗ್, ಆರಾಮ ಪ್ರಯಾಣ!
Safest cars: ಭಾರತೀಯ ಆಟೋ ಉದ್ಯಮವು ಸದ್ಯ ವಿಶ್ವದಲ್ಲೇ ಟಾಪ್-3 ಸ್ಥಾನವನ್ನು ಪಡೆದುಕೊಂಡು ಮುನ್ನುಗ್ಗುತ್ತಿದೆ. ನಿತ್ಯ ಸಾವಿರಾರು ಕಾರುಗಳು ದೇಶದಲ್ಲಿ ಮಾರಾಟವಾಗುತ್ತಿವೆ. ಗ್ರಾಹಕರು ಮೊದಲಿನಂತೆ ಮೈಲೇಜ್ ಹಾಗೂ ಬಜೆಟ್ ಮಾತ್ರವಲ್ಲದೆ ತುಸು ಬೆಲೆ ಹೆಚ್ಚಾದರು ಈಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಜನ ಗರಿಷ್ಟ ಗುಣಮಟ್ಟದ ಕಾರುಗಳನ್ನು ಖರೀದಿಸಲು ಮುಂದಾಗಿತ್ತಿರುವ ಕಾರಣ, ಬಹುತೇಕ ಎಲ್ಲಾ ಕಾರು ಕಂಪನಿಗಳು ಎಂಟ್ರಿ ಲೆವಲ್ ಮಾದರಿಗಳಲ್ಲಿ 6 ಏರ್‌ಬ್ಯಾಗ್‌ಗಳನ್ನು ನೀಡಲು ಪ್ರಾರಂಭಿಸಿವೆ. ಜೊತೆಗೆ ಭಾರತೀಯ ವಾಹನ ತಯಾರಕರು ತಮ್ಮ ಶ್ರೇಣಿಯಲ್ಲಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಸಹ ನೀಡಲು ಪ್ರಾರಂಭಿಸಿದ್ದಾರೆ.
ಒಂದು ಕಾಲದಲ್ಲಿ ಪ್ರೀಮಿಯಂ ವಾಹನಗಳಿಗೆ ಮಾತ್ರ ಸೀಮಿತವಾಗಿದ್ದ ಸುರಕ್ಷತಾ ಫೀಚರ್‌ಗಳು ಈಗ ಬಜೆಟ್ ಸ್ನೇಹಿ ಮಾದರಿಗಳಲ್ಲಿಯೂ ಲಭ್ಯವಿದೆ. ಈ ಲೇಖನದಲ್ಲಿ ಸ್ಟ್ಯಾಂಡರ್ಡ್ ಫೀಚರ್ ಆಗಿ ಆರು ಏರ್‌ಬ್ಯಾಗ್‌ಗಳೊಂದಿಗೆ ಬರುವ ಅತ್ಯಂತ ಕೈಗೆಟುಕುವ ಹ್ಯುಂಡೈ, ಮಾರುತಿ, ನಿಸ್ಸಾನ್ ಬ್ರಾಂಡ್‌ಗಳ ಕಾರುಗಳನ್ನು ಪಟ್ಟಿ ಮಾಡಿದ್ದೇವೆ.

ಮ್ಯಾಗ್ನೈಟ್: ಭಾರತದ ಅತ್ಯಂತ ಕೈಗೆಟುಕುವ ಹ್ಯಾಚ್‌ಬ್ಯಾಕ್ ಎಸ್‌ಯುವಿಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್(Nissan Magnite) ಕೂಡ ಒಂದು, 6 ಲಕ್ಷ ರೂ. (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ನಿಸ್ಸಾನ್ ಮ್ಯಾಗ್ನೈಟ್ ಆರು ಏರ್‌ಬ್ಯಾಗ್‌ಗಳನ್ನು ಸ್ಟ್ಯಾಂಡರ್ಡ್ ಪಡೆಯುತ್ತದೆ. ಹೆಚ್ಚುವರಿಯಾಗಿ ಐಎಸ್ ಒಫಿಕ್ಸ್ ಚೈಲ್ಡ್ ಸೀಟ್, ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್, ಎಲ್ಲರಿಗು 3-ಪಾಯಿಂಟ್ ಸೀಟ್ ಬೆಲ್ಟ್, ಟಿಪಿಎಂಎಸ್, 360-ಡಿಗ್ರಿ ಕ್ಯಾಮೆರಾ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ನಿಸ್ಸಾನ್ ಮ್ಯಾಗ್ನೈಟ್ 1-ಲೀಟರ್ NA ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಎರಡೂ ಎಂಜಿನ್‌ಗಳಲ್ಲಿ ನೀವು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆಯಬಹುದು. ಜೊತೆಗೆ ಟರ್ಬೋ ಎಂಜಿನ್ ಜೊತೆಗೆ ಹೆಚ್ಚುವರಿಯಾಗಿ ಎಎಂಟಿ ಮತ್ತು ಟರ್ಬೊ ಸಿವಿಟಿಯನ್ನು ಆಯ್ಕೆ ನೀಡಲಾಗಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್: ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಭಾರತದಲ್ಲಿ ಅತ್ಯಂತ ಅಗ್ಗದ ಬೆಲೆಯ ಕಾರಾಗಿದ್ದು, ಇದರ ಬೆಲೆಯು 5.92 ಲಕ್ಷ ರೂ. (ಎಕ್ಸ್ ಶೋರೂಂ)ಗಳಿಂದ ಪ್ರಾರಂಭವಾಗುತ್ತದೆ. ಎಂಟ್ರಿ ಲೆವೆಲ್ ಟ್ರಿಮ್‌ನಿಂದ ಪ್ರಾರಂಭಿಸಿ ಆರು ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ 1.2 ಲೀಟರಿನ ಎಂಜಿನ್ 82 ಬಿಹೆಚ್ ಪವರ್ ಹಾಗೂ 114 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಹೆಚ್ಚುವರಿಯಾಗಿ ಇಬಿಡಿಯೊಂದಿಗೆ ಎಬಿಎಸ್, ಎಲ್ಲಾ ಪ್ರಯಾಣಿಕರಿಗೆ 3-ಪಾಯಿಂಟ್ ಸೀಟ್ ಬೆಲ್ಟ್ ಮತ್ತು ಐಎಸ್ ಒಫಿಕ್ಸ್ ಚೈಲ್ಡ್ ಸೀಟ್ ಆಂಕೋರೇಜ್, ರಿಯರ್ ಕ್ಯಾಮೆರಾ ಹಾಗೂ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ ಹೊಂದಿದೆ.

ಹ್ಯುಂಡೈ ಎಕ್ಸ್ಟರ್: ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈನ ಇತ್ತೀಚಿನ ಹ್ಯಾಚ್‌ಬ್ಯಾಕ್ ಆಗಿರುವ ಎಕ್ಸ್ಟರ್, ರೂ. 6.13 ಲಕ್ಷ ರೂ.(ಎಕ್ಸ್ ಶೋರೂಂ) ಬೆಲೆಯನ್ನು ಪಡೆದುಕೊಂಡಿದೆ. 1.2-ಲೀಟರ್ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಆಯ್ಕೆಗಳೊಂದಿಗೆ ಬರುತ್ತದೆ. ಆರು ಏರ್‌ಬ್ಯಾಗ್, ಇಬಿಡಿಯೊಂದಿಗೆ ಎಬಿಎಸ್, 3-ಪಾಯಿಂಟ್ ಸೀಟ್ ಬೆಲ್ಟ್, ರಿಯರ್ ಸೆನ್ಸಾರ್, ಡ್ಯುಯಲ್ ಕ್ಯಾಮೆರಾ ಡ್ಯಾಶ್ ಕ್ಯಾಮ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಟಿಪಿಎಂಎಸ್ ಹೊಂದಿದೆ.
ಮಾರುತಿ ಸುಜುಕಿ ಸ್ವಿಫ್ಟ್: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಆರಂಭಿಕ ಬೆಲೆಯು 6.49 ಲಕ್ಷ ರೂ.(ಎಕ್ಸ್ ಶೋರೂಂ) ಇದೆ. ಆರು ಏರ್‌ಬ್ಯಾಗ್ ಇಬಿಡಿಯೊಂದಿಗೆ ಎಬಿಎಸ್, ರಿವರ್ಸ್ ಕ್ಯಾಮೆರಾ ಮತ್ತು ಪಾರ್ಕಿಂಗ್ ಸೆನ್ಸಾರ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯನ್ನು ಹೊಂದಿದೆ. 1.2 ಲೀಟರಿನ ನ್ಯಾಚುರಲಿ ಆಸ್ಪಿರೇಟೆಡ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಹಾಗೂ ಎಎಂಟಿ ಆಯ್ಕೆಯಲ್ಲಿ ಲಭ್ಯವಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications