ಟಾಟಾ - ಮಹೀಂದ್ರಾ ತಾಕತ್ತು: ಬಂಡೆಯಂತಿರುವ ಸುರಕ್ಷಿತ ಫ್ಯಾಮಿಲಿ ಕಾರುಗಳಿವು.. 7 ಏರ್‌ಬ್ಯಾಗ್‌.. ADAS, 7-ಸೀಟರ್!

ಇತ್ತೀಚಿನ ದಿನಗಳಲ್ಲಿ ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ, ತಮ್ಮ ಬಜೆಟ್‌ಗೆ ಯಾವ ಕಾರು ಸರಿಹೊಂದುತ್ತದೆ. ಅನಿರೀಕ್ಷಿತವಾಗಿ ಎದುರಾಗುವ ಅಪಾಯದ ಸಂದರ್ಭದಲ್ಲಿ ರಕ್ಷಣೆ ಒದಗಿಸಲು ತಾವು ತೆಗೆದುಕೊಳ್ಳುವ ನೂತನ ಕಾರು ಯಾವೆಲ್ಲ ಸುರಕ್ಷತಾ ವೈಶಿಷ್ಟ್ಯಗಳನ್ನು (Safety Features) ಒಳಗೊಂಡಿರುತ್ತವೆ ಎಂಬ ಗೊಂದಲ ಹಲವರಲ್ಲಿ ಇರುತ್ತದೆ. ನಾವಿಲ್ಲಿ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿರುವ ಜನಪ್ರಿಯ ಟಾಟಾ ಸಫಾರಿ (Tata Safari), ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಮತ್ತು ಸ್ಕಾರ್ಪಿಯೋ ಎನ್ (Scorpio N) ಕಾರುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಸಫಾರಿ (Tata Safari) ಕುರಿತಂತೆ ಮಾತನಾಡೋಣ. ಇದೊಂದು ಜನಪ್ರಿಯ ಎಸ್‌ಯುವಿಯಾಗಿದ್ದು, ರೂ.15.49 ಲಕ್ಷದಿಂದ ರೂ.26.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, 14.50 ರಿಂದ 16.30 ಕೆಎಂಪಿಎಲ್‌ವರೆಗೆ ನೀಡುತ್ತದೆ. 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Safest Family Cars Tata Safari Mahindra Xuv700 Mahindra Scorpio N 7 Airbag ADAS Details

ಈ ಟಾಟಾ ಸಫಾರಿ ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಭಾರತ್ ಎನ್‌ಸಿಎಪಿ ನಡೆಸುವ ಸುರಕ್ಷತೆ ಪರೀಕ್ಷೆಯಲ್ಲಿ 5 ಸ್ಟಾರ್ ರೇಟಿಂಗ್ ಪಡೆದಿದೆ. 7 ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಕೂಡ ಪ್ರಮುಖ ಎಸ್‍ಯುವಿಯಾಗಿದೆ. ಇದು ರೂ.13.99 ಲಕ್ಷದಿಂದ ರೂ.26.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 5, 6 ಮತ್ತು 7 ಆಸನಗಳನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Safest Family Cars Tata Safari Mahindra Xuv700 Mahindra Scorpio N 7 Airbag ADAS Details

ನೂತನ ಮಹೀಂದ್ರಾ ಎಕ್ಸ್‌ಯುವಿ700 ಕಾರು, ಗ್ಲೋಬಲ್ ಎನ್‌ಸಿಎಪಿ ಸುರಕ್ಷತೆ ಪರೀಕ್ಷೆಯಲ್ಲಿ 5 ಸ್ಟಾರ್ ರೇಟಿಂಗ್ ಗಳಿಸಿದೆ. ಈ ಕಾರು, 7 ಏರ್‌ಬ್ಯಾಗ್‌, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಈ ಕಾರು ರೂ.13.85 ಲಕ್ಷದಿಂದ ರೂ.24.54 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್/ 2.2 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 12.12 ರಿಂದ 15.94 ಕೆಎಂಪಿಎಲ್‌ವರೆಗೆ ನೀಡುತ್ತದೆ. 6 ಅಥವಾ 7 ಆಸನದೊಂದಿಗೂ ಲಭ್ಯವಿದೆ.

Safest Family Cars Tata Safari Mahindra Xuv700 Mahindra Scorpio N 7 Airbag ADAS Details

ಈ ಸ್ಕಾರ್ಪಿಯೋ ಎನ್ ಸಹ ಗೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ. 6-ಏರ್‌ಬ್ಯಾಗ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಅಸಿಸ್ಟ್ ಕಂಟ್ರೋಲ್, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಕ್ಯಾಮೆರಾಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 27, 2024, 16:00 [IST]
English summary
Safest family cars tata safari mahindra xuv700 mahindra scorpio n 7 airbag adas details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+