Second Hand Cars: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುವ ಸೆಕೆಂಡ್ ಹ್ಯಾಂಡ್ ಕಾರುಗಳಿವು, ಬೈಕ್‌ನಂತೆ ಮೈಲೇಜ್!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ, ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದ ಎಷ್ಟೋ ಮಂದಿ ನೂತನ ಕಾರುಗಳನ್ನು ಕೊಂಡುಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಇಲ್ಲಿ ಅತ್ಯಂತ ಕಡಿಮೆ ಬೆಲೆಗೆ ಖರೀದಿಗೆ ಸಿಗುವ ಸೆಕೆಂಡ್ ಹ್ಯಾಂಡ್ (Second Hand) ಕಾರುಗಳ ಬಗ್ಗೆ ವಿವರಿಸಿದ್ದೇವೆ.

ಬಡವರು ಸಹ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಅನ್ನು ಸೆಕೆಂಡ್ ಹ್ಯಾಂಡ್ ನಲ್ಲಿ ಖರೀದಿಸುವ ಮೂಲಕ ಕಾರಿನ ಮಾಲೀಕರಾಗಬಹುದು. ಇದು ತುಂಬಾ ಅಗ್ಗದ ಬೆಲೆಗೆ ಸಿಗುತ್ತದೆ. ನೀವು ಗಮನಿಸಬೇಕಾದ ಅಂಶವೆಂದರೆ ಕಂಪನಿಯೇ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಆಲ್ಟೊ ಕೆ10 ಕಾರನ್ನು ಅತ್ಯಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ.

Second Hand Cars: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುವ ಸೆಕೆಂಡ್ ಹ್ಯಾಂಡ್ ಕಾರುಗಳಿವು, ಬೈಕ್‌ನಂತೆ ಮೈಲೇಜ್!

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೈನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 24.39 kmpl-24.90 kmpl, ಸಿಎನ್‌ಜಿ ರೂಪಾಂತರಗಳು 33.40 km/kg-33.85 km/kg ಮೈಲೇಜ್ ನೀಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕೂಡ ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಭರ್ಜರಿ ಡಿಮ್ಯಾಂಡ್ ಹೊಂದಿದ್ದು, ತೀರಾ ಅಗ್ಗದ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಆದರೂ ನೂತನ ಸ್ವಿಫ್ಟ್ ಕಾರೇ ಕೈಗೆಟುಕುವ ದರದಲ್ಲಿ ಲಭ್ಯವಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Second Hand Cars: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುವ ಸೆಕೆಂಡ್ ಹ್ಯಾಂಡ್ ಕಾರುಗಳಿವು, ಬೈಕ್‌ನಂತೆ ಮೈಲೇಜ್!

ಈ ಕಾರು, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, ಪೆಟ್ರೋಲ್ ರೂಪಾಂತರಗಳು 22.38 kmpl-22.56 kmpl, ಸಿಎನ್‌ಜಿ ರೂಪಾಂತರಗಳು 30.90 km/kg ಮೈಲೇಜ್ ನೀಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ - ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹ್ಯುಂಡೈ ಐ20 (Hyundai i20) ಸಹ ಉಪಯೋಗಿದ ಕಾರು (used cars) ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಹೊಂದಿದೆ. ತುಂಬಾ ಕಡಿಮೆ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಆದಾಗ್ಯೂ ನೂತನ ಕಾರು, 7.04 - 11.21 ಲಕ್ಷ ಎಕ್ಸ್ ಶೋರೂಂ ಬೆಲೆ ಖರೀದಿಗೆ ಸಿಗುತ್ತದೆ. ಪೆಟ್ರೋಲ್ ಎಂಜಿನ್ ಹೊಂದಿರುವ ಹ್ಯುಂಡೈ ಐ20, ರೂಪಾಂತರಗಳಿಗೆ ಅನುಗುಣವಾಗಿ 16 - 20 kmpl ಮೈಲೇಜ್ ನೀಡುತ್ತದೆ.

Second Hand Cars: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುವ ಸೆಕೆಂಡ್ ಹ್ಯಾಂಡ್ ಕಾರುಗಳಿವು, ಬೈಕ್‌ನಂತೆ ಮೈಲೇಜ್!

ಈ ಕಾರು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಏರ್ ಪ್ಯೂರಿಫೈಯರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌, ISOFIX ಚೈಲ್ಡ್ ಸೀಟ್ ಆಂಕಾರೇಜ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್ ಕಂಟ್ರೋಲ್, ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್ ಅನ್ನು ಒಳಗೊಂಡಿದೆ.

ಇನ್ನು, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವವರೂ, ಅದರ ದಾಖಲೆಗಳು, ಇನ್ಸೂರೆನ್ಸ್, ಕ್ರಮಿಸಿರುವ ಮೈಲೇಜ್, ಡೆಂಟ್ ಆಗಿರುವುದು ಒಳಗೊಂಡಂತೆ ವಿವಿಧ ಅಂಶಗಳನ್ನು ಪರಿಶೀಲಿಸಬೇಕು. ಜೊತೆಗೆ ಅದರ ದರ ನಿರ್ಣಯದ ವಿಚಾರದಲ್ಲಿ ಪರಿಣಿತರ ಅಭಿಪ್ರಾಯವನ್ನು ಪಡೆಯುವುದು ಸೂಕ್ತ. ಹಾಗೆಯೇ ವಿಶ್ವಾಸಾರ್ಹ ಸೆಕೆಂಡ್ ಹ್ಯಾಂಡ್ ಕಾರು ಮಳಿಗೆಗೆ ತೆರಳುವುದು ಉತ್ತಮ. ಏನೇ ಆಗಲಿ.. ಕಾರು ಪ್ರತಿಯೊಬ್ಬರ ಕನಸು. ಆದಷ್ಟು ಹೊಸದನ್ನು ತೆಗೆದುಕೊಳ್ಳಲು ಪ್ರಯತ್ನಿಸಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, January 21, 2024, 11:00 [IST]
English summary
Second hand cars buy india 2024 maruti suzuki alto k10 swift hyundai i20 low price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+