ಅತಿಕಡಿಮೆ ಬೆಲೆಗೆ ಈ ಹೊಸ ಕಾರು ಬರಲಿದೆ.. ಆಕರ್ಷಕ ಸನ್‌ರೂಫ್ ಇರುತ್ತೆ.. ಶೋರೂಂ ತುಂಬುವುದು ಪಕ್ಕಾ!

ಜರ್ಮನಿ ಮೂಲದ ಸ್ಕೋಡಾ (Skoda) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಸಹ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತಿಚೆಗೆ, ಮುಂಬರಲಿರುವ ಹೊಸ ಸಬ್‌-ಕಾಂಪ್ಯಾಕ್ಟ್ ಎಸ್‌ಯುವಿಗೆ ಹೆಸರನ್ನು ಘೋಷಿಸಿದ್ದು, ಕೈಲಾಕ್ (Kylaq) ಎಂದು ನಾಮಕರಣ ಮಾಡಿದೆ. ಈ ಕಾರು ಹಲವು ಬಾರಿ ಪ್ರಾಯೋಗಿಕ ಸಂಚಾರ ನಡೆಸುವಾಗಲೂ ಕಂಡುಬಂದಿದ್ದು, ವಿನ್ಯಾಸದ ಕುರಿತಂತೆ ಒಂದಷ್ಟು ವಿವರಗಳು ಬಹಿರಂಗಗೊಂಡಿವೆ.

ಕೆಲವು ದಿನಗಳ ಹಿಂದೆಯೂ ನೂತನ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ ಪರೀಕ್ಷಾರ್ಥ ಓಡಾಟ ನಡೆಸಿತ್ತು. ಆ ಸ್ಪೈ (ಪತ್ತೆದಾರಿ) ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದ್ದು, ಈ ಕಾರು ಎಲೆಕ್ಟ್ರಿಕ್ ಸನ್‌ರೂಫ್ ಹೊಂದಿರುವುದು ಖಚಿತವಾಗಿದೆ. ಜೊತೆಗೆ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳಲಾದ ಟೀಸರ್ ಫೋಟೋಗಳು ಹೊಸ ಸ್ಕೋಡಾ ಕೈಲಾಕ್ ಸ್ಪ್ಲಿಟ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್-ಆಕಾರಕ್ಕೆ ಹೋಲುವ ಎಲ್‌ಇಡಿ ಟೈಲ್‌ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿರುವುದನ್ನು ಖಚಿತಪಡಿಸಿವೆ.

Skoda Kylaq Car Spotted Again Sunroof Confirmed Details

ಈ ಕಾರು 1-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿರುವ ಸಾಧ್ಯತೆಯಿದ್ದು, 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 178 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದೆ ಎಂದು ತಿಳಿದುಬಂದಿದೆ. 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದರಲ್ಲಿಯೂ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ನೂತನ ಸ್ಕೋಡಾ ಕೈಲಾಕ್ ಎಸ್‌ಯುವಿ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಫುಲ್-ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರಬಹುದು ಎನ್ನಲಾಗಿದೆ.

ಈ ಹೊಸ 2025ರ ಫೆಬ್ರವರಿಯಲ್ಲಿ ಶೋರೂಂ ತಲುಪಲಿದೆ ಎಂದು ವರದಿಯಾಗಿದೆ. ಬಹುಶಃ ಈ ಕಾರಿನ ಎಲ್ಲ ವಿವರಗಳು ವರ್ಷಾಂತ್ಯದೊಳಗೆ ಲಭ್ಯವಾಗುವ ಸಾಧ್ಯತೆಯಿದ್ದು, ಆಗಲೇ ತಯಾರಿಕೆಯೂ ಆರಂಭವಾಗಲಿದೆ ಎಂದು ಹೇಳಲಾಗಿದೆ. ಜನವರಿ 2025ರ ಎರಡನೇ ವಾರದಲ್ಲಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಅಧಿಕೃತ ಬೆಲೆಯನ್ನು ಘೋಷಿಸುವ ಸಾಧ್ಯತೆಯಿದೆ.

ಹೊಚ್ಚ ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ ಅತ್ಯಂತ ಕೈಗೆಟುಕುವ ದರದಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ರೂ. 8.5 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ. ಈ ಕಾರಿಗೆ ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್‌ಒ, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೈಟ್‌ಗಳು ದೊಡ್ಡ ಪ್ರತಿಸ್ಪರ್ಧಿಯಾಗಿವೆ.

ಇನ್ನು, ನೂತನ ಸ್ಕೋಡಾ ಕೈಲಾಕ್ ಕಾರಿನ ಮೇಲೆ ಗ್ರಾಹಕರೂ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಬಹುದು ಎಂದು ಹೇಳಲಾಗಿದೆ. ಮುಂಬರುವ ದಿನಗಳಲ್ಲಿ ಹೊಸ ಕೈಲಾಕ್ ಹೇಗಿರಲಿದೆ ಎಂಬುದರ ಕುರಿತಂತೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, August 26, 2024, 16:56 [IST]
English summary
Skoda kylaq car spotted again sunroof confirmed details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+