ಕನಸು ನನಸಾಗುವ ಕಾಲ ಬಂದೇ ಬಿಡ್ತು..! ಈ ಹೊಸ ಕಾರಿನ ಅನಾವರಣಕ್ಕೆ ದಿನಾಂಕ ಘೋಷಣೆ: 5-ಸೀಟರ್.. 8.5 ಲಕ್ಷ?
ಜರ್ಮನಿಗೆ ಸೇರಿದ ಸ್ಕೋಡಾ (Skoda) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕುಶಾಕ್, ಸ್ಲಾವಿಯಾ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ, ಮುಂಬರಲಿರುವ ಹೊಸ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಗೆ ಹೆಸರನ್ನು ಪ್ರಕಟಿಸಿದ್ದು, ಕೈಲಾಕ್ (Kylaq) ಎಂದು ನಾಮಕರಣ ಮಾಡಿತ್ತು. ಸೋಮವಾರ ಈ ಕಾರನ್ನು ಜಾಗತಿಕವಾಗಿ ಅನಾವರಣಗೊಳಿಸುವ ದಿನಾಂಕವನ್ನು ಕಂಪನಿಯು ಘೋಷಣೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಉತ್ಪಾದನೆಗೆ ಸಿದ್ಧಗೊಂಡಿರುವ ಹೊಚ್ಚ ಹೊಸ ಸ್ಕೋಡಾ ಕೈಲಾಕ್ (Skoda Kylaq) ಕಾರನ್ನು ನವೆಂಬರ್ 6, 2024ರಂದು ಅಂತರರಾಷ್ಟ್ರೀಯವಾಗಿ ಗ್ರಾಹಕರ ಮುಂದೆ ಪ್ರದರ್ಶಿಸಲಾಗುತ್ತದೆ. ಭಾರತದ ಮಾರುಕಟ್ಟೆಯಲ್ಲಿ ಈ ಎಸ್‌ಯುವಿ 2025ರ ಜನವರಿ ಬಿಡುಗಡೆಯಾಗಲಿದ್ದು, ಫೆಬ್ರವರಿಯಲ್ಲಿ ಶೋರೂಂ ತಲುಪಲಿದೆ. ಆ ಬಳಿಕ ವಿತರಣಾ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿದುಬಂದಿದೆ.

ಸ್ಕೋಡಾ ಕೈಲಾಕ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ. ಸರಿ ಸುಮಾರು ರೂ. 8.5 ಲಕ್ಷ ಎಕ್ಸ್ ಶೋರೂಂ ಪಡೆದಿರಬಹುದು ಎಂದು ಎನ್ನಲಾಗಿದೆ. ಈ ಕಾರು ಟಾಟಾ ನೆಕ್ಸಾನ್, ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್‌ಒ, ಮಾರುತಿ ಸುಜುಕಿ ಬ್ರೆಝಾ, ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಮ್ಯಾಗ್ನೈಟ್‌ಗಳೊಂದಿಗೆ ಸ್ಪರ್ಧಿಸಬೇಕಾಗಿದೆ.
ನೂತನ ಸ್ಕೋಡಾ ಕೈಲಾಕ್ (Skoda Kylaq) ಕಾರು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಪಡೆದುಕೊಂಡಿರುವ ನಿರೀಕ್ಷೆಯಿದೆ. ಈ ಎಸ್‌ಯುವಿ, ಸ್ಪ್ಲಿಟ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ - ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಟೈಲ್‌ಲೈಟ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿರಲಿದೆ ಎಂಬ ವಿವರಗಳು ಬಹುತೇಕ ದೃಢಪಟ್ಟಿವೆ.
ಈ ಎಸ್‌ಯುವಿ ಶಕ್ತಿಯುತವಾಗಿ ಪವರ್‌ಟ್ರೇನ್ ಕೂಡ ಪಡೆದಿರುವ ಸಾಧ್ಯತೆಯಿದೆ. 1-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಬಹುದು. 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 178 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸಲಿದೆ ಎಂದು ಹೇಳಲಾಗಿದೆ. 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ.
ಹೊಚ್ಚ ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಈ ಕಾರು ಪ್ರಯಾಣಿಕರಿಗೆ ದೊಡ್ಡಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಐಎಸ್ಒಎಫ್ಐಎಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳು ಮತ್ತು 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








