Skoda: 5-ಸೀಟರ್, ಅತಿಕಡಿಮೆ ಬೆಲೆ.. ಹೊಸ ಸ್ಕೋಡಾ ಕೈಲಾಕ್ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಸ್ಕೋಡಾ (Skoda) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ, ದೇಶೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಬೆಲೆಯಲ್ಲಿ 'ಕೈಲಾಕ್' ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರು ಹೊರಭಾಗದಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಸ್ಕೋಡಾ ಕೈಲಾಕ್ ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ನವದೆಹಲಿಯಲ್ಲಿ ಸ್ಕೋಡಾ ಕೈಲಾಕ್ (Skoda Kylaq) ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಇದರ ಕ್ಲಾಸಿಕ್ ರೂಪಾಂತರ, ರೂ.8.80 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿ ಮಾಡಿದರೆ, ರೂ.6.80 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.14,000 ವರೆಗೆ ಇಎಂಐ ಕಟ್ಟಬೇಕು.

Skoda Kylaq Suv On Road Price And Emi Details

ನೂತನ ಸ್ಕೋಡಾ ಕೈಲಾಕ್ ಕಾರಿನ ಸಿಗ್ನೇಚರ್ ರೂಪಾಂತರ, ರೂ.10.68 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ಇದನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8.68 ಲಕ್ಷವರೆಗೆ ಸಾಲ ಬಾಕಿ ಉಳಿಯುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ ರೂ.18,000 ವರೆಗೆ ಇಎಂಐ ಪಾವತಿ ಮಾಡಬೇಕು.

ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿಯ ಸಿಗ್ನೇಚರ್ ಪ್ಲಸ್ ರೂಪಾಂತರ, ರೂ.13.13 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ತೆಗೆದುಕೊಂಡರೆ, ರೂ.11.13 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.23,000 ವರೆಗೆ ಇಎಂಐ ಪಾವತಿಬೇಕು.

Skoda Kylaq Suv On Road Price And Emi Details

ಈ ಕಾರಿನ ಪ್ರೆಸ್ಟಿಜ್ ರೂಪಾಂತರ, ರೂ.15.37 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ಈ ಕಾರನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿ ಮಾಡಿ ಕೊಂಡುಕೊಂಡರೆ, ರೂ.13.37 ಲಕ್ಷವರೆಗೆ ಸಾಲ ಉಳಿಯುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ತಿಂಗಳಿಗೆ ರೂ.27,000 ವರೆಗೆ ಇಎಂಐ ಕಟ್ಟಬೇಕು.

ನೂತನ ಸ್ಕೋಡಾ ಕೈಲಾಕ್ ಎಸ್‌ಯುವಿ 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. ಇದು 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 178 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದ್ದು, 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Skoda Kylaq Suv On Road Price And Emi Details

ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್, ಟೊರ್ನಾಡೊ ರೆಡ್ ಹಾಗೂ ಕ್ಯಾಂಡಿ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 446 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸಿಂಗಲ್-ಪೇನ್ ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ನಾವಿಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಯ ಬಗ್ಗೆ ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ವಿವರಗಳಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Tuesday, December 24, 2024, 8:30 [IST]
English summary
Skoda kylaq suv on road price and emi details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+