ಅತಿಕಡಿಮೆ ಬೆಲೆಯಲ್ಲಿ ಲಕ್ಷುರಿ ಫೀಚರ್ಸ್‌ನ ಸ್ಕೋಡಾ ಕೈಲಾಕ್: ಟಾಟಾ, ಮಹೀಂದ್ರಾಗೆ ನಿದ್ದೆಗೆಡಿಸಿದ ಎಸ್‍ಯುವಿ
ಭಾರತೀಯ ಮಾರುಕಟ್ಟೆಯಲ್ಲಿ ಸ್ಪೋರ್ಟ್ ಯುಟಿಲಿಟಿ ವಾಹನಗಳಿಗೆ (ಎಸ್‍ಯುವಿ) ಹೆಚ್ಚಿನ ಬೇಡಿಕೆ ಪಡೆಯುತ್ತಿರುವಾ ಸ್ಕೋಡಾ ತನ್ನ ಬಹುನಿರೀಕ್ಷಿತ ಸ್ಕೋಡಾ ಕೈಲಾಕ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿದೆ. ಈ ಹೊಸ ಸ್ಕೋಡಾ ಕೈಲಾಕ್ (Skoda Kylaq) ಸಬ್ 4-ಮೀಟರ್ ಎಸ್‍ಯುವಿ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.89 ಲಕ್ಷವಾಗಿದೆ. ಈ ಎಸ್‍ಯುವಿಯ ಎಲ್ಲಾ ರೂಪಾಂತರಗಳ ಸಂಪೂರ್ಣ ಬೆಲೆ ವಿವರಗಳನ್ನು 2024ರ ಡಿಸೆಂಬರ್ 2 ರಂದು ಬಹಿರಂಗಪಡಿಸಲಿದೆ. ಅದೇ ದಿನ ಈ ಕಾಂಪ್ಯಾಕ್ಟ್ ಎಸ್‍ಯುವಿಗಾಗಿ ಅಧಿಕೃತವಾಗಿ ಬುಕಿಂಗ್‌ಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತದೆ
ಹೊಸ ಸ್ಕೋಡಾ ಕೈಲಾಕ್ ಸಬ್ 4-ಮೀಟರ್ ಎಸ್‍ಯುವಿಯ ವಿತರಣೆಯು ಜನವರಿ 27 ರಿಂದ ಪ್ರಾರಂಭವಾಗಲಿವೆ. ಈ ಸ್ಕೋಡಾ ಕೈಲಾಕ್ ಎಸ್‍ಯುವಿಯು ಭಾರತದಲ್ಲಿ ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 3 ಎಕ್ಸ್‌ಒ, ಮಾರುತಿ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಕಿಯಾ ಸೊನೆಟ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಭಾರತದ ಕೆಲವು ಸ್ಕೋಡಾ ಡೀಲರ್‌ಶಿಪ್‌ಗಳು ಈ ಕೈಲಾಕ್ ಎಸ್‍ಯುವಿಯನ್ನು ಖರೀದಿಸಲು ಅನಧಿಕೃತವಾಗಿ ಬುಕ್ಕಿಂಗ್ ಸ್ವಿಕರಿಸಲು ಪ್ರಾರಂಭಿಸಿವೆ.

ಸ್ಕೋಡಾ ಕೈಲಾಕ್ ಎಸ್‌ಯುವಿಯಲ್ಲಿ ಕುಶಾಕ್ ಮತ್ತು ಸ್ಲಾವಿಯಾದೊಂದಿಗೆ ಬಳಸಿದ ಅದೇ 1.0-ಲೀಟರ್ TSI ಪೆಟ್ರೋಲ್ ಎಂಜಿನ್‌ನಿಂದ ನಿಯಂತ್ರಿಸಲ್ಪಡುತ್ತದೆ. ಈ ಎಂಜಿನ್ 115 bhp ಪವರ್ ಮತ್ತು 178 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನವಾಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಗಳೊಂದಿಗೆ ಜೋಡಿಸಲಾಗುತ್ತದೆ.
ಈ ಹೊಸ ಸ್ಕೋಡಾ ಕೈಲಾಕ್ ಎಸ್‍ಯುವಿಯು 10.5 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವರೆಗೆ ವೇಗವನ್ನು ಪಡೆದುಕೊಳ್ಳುತ್ತದೆ. QB-A0-IN ಪ್ಲಾಟ್‌ಫಾರ್ಮ್‌ನಿಂದ ಆಧಾರವಾಗಿರುವ ಕುಶಾಕ್ ಮತ್ತು ಸ್ಲಾವಿಯಾದಂತಹ ಜನಪ್ರಿಯ ಮಾದರಿಗಳನ್ನು ಸ್ಕೋಡಾ ಈಗಾಗಲೇ ಹೊಂದಿದೆ. ಈ ಪ್ಲಾಟ್‌ಫಾರ್ಮ್ ಅನ್ನು ಬಳಸುವ ಮೂರನೇ ಸ್ಕೋಡಾ ಕಾರು ಕೈಲಾಕ್ ಅಗಿದೆ.

ಈ ಎಸ್‍ಯುವಿ 189mm ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ. ಈ ಸ್ಕೋಡಾ ಕೈಲಾಕ್ ಹೊಸ ಎಸ್‍ಯುವಿಯು ಸ್ಕೋಡಾ ಬ್ರ್ಯಾಂಡ್‌ನ ಇತ್ತೀಚಿನ 'ಮಾಡರ್ನ್ ಸಾಲಿಡ್' ವಿನ್ಯಾಸ ಭಾಷೆಯ ಅಂಶಗಳನ್ನು ಒಳಗೊಂಡಿದೆ. ಕೈಲಾಕ್ ಕ್ಲೀನ್ ಲೈನ್‌ಗಳ ಜೊತೆ ಮುಂಭಾಗದ ಲ್ಯಾಂಪ್ ಗಳೊಂದಿಗೆ ಕುಶಾಕ್‌ನಂತೆ ಸ್ವಲ್ಪ ಕಾಣಿಸುತ್ತದೆ. ಈ ಎಸ್‍ಯುವಿಯ ಟ್ರೆಂಡಿಂಗ್ ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟಪ್ ಎಲ್ಇಡಿ ಡಿಆರ್ಎಲ್ ಅರೇಂಜ್ಮೆಂಟ್ ಅಪ್ ಟಾಪ್ ಮತ್ತು ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಕೆಳ ಭಾಗದಲ್ಲಿ ಇದೆ.
ಇದರೊಂದಿಗೆ ಅಲ್ಯೂಮಿನಿಯಂ-ಲುಕ್ ಸ್ಪಾಯ್ಲರ್‌ನೊಂದಿಗೆ ಎರಡು-ಟೋನ್ ಬಂಪರ್ ಸೇರಿವೆ. ಇನ್ನು ಈ ಕೈಲಾಕ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಟೂ-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ಅನೇಕ ಅಂಶಗಳನ್ನು ಹಂಚಿಕೊಳ್ಳುತ್ತದೆ. ಇದು ನವೀಕರಿಸಿದ OS, ವೈರ್‌ಲೆಸ್ ಆಂಡ್ರಾಯ್ಡ್ ಆಟೋ/ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸಿಂಗಲ್ ಪೇನ್ ಸನ್‌ರೂಫ್‌ನೊಂದಿಗೆ 10-ಇಂಚಿನ ಟಚ್‌ಸ್ಕ್ರೀನ್ ಅನ್ನು ಸಹ ಒಳಗೊಂಡಿದೆ.

ಹೊಸ ಸ್ಕೋಡಾ ಕೈಲಾಕ್ ಎಸ್‍ಯುವಿಯಲ್ಲಿ ಸನ್‌ರೂಫ್ (ಸಿಂಗಲ್-ಪೇನ್), ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ, ಮುಂಭಾಗದ ಸೀಟ್ ವೆಂಟಿಲೇಶನ್ ಮತ್ತು ಲೆಥೆರೆಟ್ ಅಪ್ಹೋಲ್‌ಸ್ಟರಿಗಳನ್ನು ಒಳಗೊಂಡಿದೆ. ಈ ಕೈಲಾಕ್ ಎಸ್‌ಯುವಿ 446 ಲೀಟರ್ ಬೂಟ್ ಸ್ಪೇಸ್ ಸಾಮರ್ಥ್ಯವನ್ನು ಹೊಂದಿದ್ದು, ಈ ಎಸ್‍ಯುವಿಯ ಸೀಟುಗಳನ್ನು ಮಡಚಿದರೆ 1,265 ಲೀಟರ್‌ಗೆ ಬೂಟ್ ಸ್ಪೇಸ್ ಅನ್ನು ವಿಸ್ತರಿಸಬಹುದು.
ಕೈಲಾಕ್ ಚಾಲಕನಿಗೆ ಮಾತ್ರವಲ್ಲದೆ ಮುಂಭಾಗದ ಪ್ರಯಾಣಿಕರಿಗೂ ಫಾರ್ವಡ್ ಸೀಟ್ ಹೊಂದಾಣಿಕೆಯನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು ಆರು ಏರ್‌ಬ್ಯಾಗ್‌ಗಳು, EBD ಜೊತೆಗೆ ABS, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಲೆಕ್ಟ್ರಾನಿಕ್ ಡಿಫರೆನ್ಷಿಯಲ್ ಲಾಕ್ ಮತ್ತು ISOFIX ಚೈಲ್ಡ್ ಸೀಟ್ ಮೌಂಟ್‌ಗಳು ಬೋರ್ಡ್‌ನಾದ್ಯಂತ ಸ್ಟ್ಯಾಂಡರ್ಡ್ ಸುರಕ್ಷತಾ ಫೀಚರ್ಸ್ ಗಳನ್ನು ಒಳಗೊಂಡಿವೆ.


Click it and Unblock the Notifications








