ಹೊಸ ಕಾರು ಖರೀದಿಸಲು ಯೋಜಿಸಿದ್ದೀರಾ? ಈ ಜನಪ್ರಿಯ ಸ್ಕೋಡಾ ಸ್ಲಾವಿಯಾ ಕಾರಿನ ಬೆಲೆ ಕಡಿತ!
ಭಾರತೀಯ ಕಾರು ಮಾರುಕಟ್ಟೆಯಲ್ಲಿ ಕೆಲವು ವರ್ಷಗಳಲ್ಲಿ ಸೆಡಾನ್‌ಗಳು ಬಹಳಷ್ಟು ಮಾರುಕಟ್ಟೆ ಪಾಲನ್ನು ಕಳೆದುಕೊಂಡಿವೆ, ಎಸ್‍ಯುವಿಗಳ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಕಾರು ತಯಾರಕರು ಸೆಡಾನ್ ವಿಭಾಗದಲ್ಲಿ ಪುನರುಜ್ಜೀವನವನ್ನು ನೋಡಲು ಆಶಿಸುತ್ತಿದ್ದಾರೆ. ಸ್ಕೋಡಾ ಅಂತಹ ತಯಾರಕರಲ್ಲಿ ಒಂದಾಗಿದೆ, ಅದರ ಸೆಡಾನ್ ಕೊಡುಗೆಗಳೊಂದಿಗೆ ಭಾರತೀಯ ಖರೀದಿದಾರರನ್ನು ಆಕರ್ಷಿಸಲು ಪ್ರಯತ್ನಿಸುತ್ತಿದೆ. ಅದರಲ್ಲಿ ಸ್ಕೋಡಾ ಸ್ಲಾವಿಯಾ (Skoda Slavia) ಭಾರತೀಯ ಮಾರುಕಟ್ಟೆಯಲ್ಲಿ ಜೆಕ್ ಕಾರು ತಯಾರಕರ ಶ್ರೇಣಿಯಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಇದೀಗ ಸ್ಕೋಡಾ ಭಾರತದಲ್ಲಿ ಸ್ಲಾವಿಯಾ ಸೆಡಾನ್ ಬೆಲೆಯನ್ನು ಜೂನ್‌ನಲ್ಲಿ ಪರಿಷ್ಕರಿಸಿದೆ.
ಸ್ಕೋಡಾ ಸ್ಲಾವಿಯಾ ಕಾರಿನ ಬೆಲೆಯನ್ನು ಕಡಿತಗೊಳಿಸಿದ್ದು, ಇದೀಗ ಈ ಸೆಡಾನ್ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 10.69 ಲಕ್ಷವಾಗಿದೆ. ಈ ಸ್ಕೋಡಾ ಸ್ಲಾವಿಯಾ ಕಾರು ಕ್ಲಾಸಿಕ್, ಸಿಗ್ನೇಚರ್ ಮತ್ತು ಪ್ರೆಸ್ಟೀಜ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಸ್ಕೋಡಾ ಸ್ಲಾವಿಯಾ ಕಾರಿನ ಬೇಸ್-ಸ್ಪೆಕ್ ಮಾದರಿಗಾಗಿ ರೂ.94,000 ಕಡಿತಗೊಂಡು, ಈಗ ಇದರ ಆರಂಭಿಕ ಬೆಲ್ಯು ರೂ. 10.69 ಲಕ್ಷವಾದರೆ, ಟಾಪ್-ಸ್ಪೆಕ್ ಪ್ರೆಸ್ಟೀಜ್ ಎಟಿ ರೂಪಾಂತರದ ಬೆಲೆಯು ರೂ.18.69 ಲಕ್ಷವಾಗಿದೆ.

ಜೆಕ್ ಕಾರು ತಯಾರಕರು 2.0 ಯೋಜನೆಯ ಅಡಿಯಲ್ಲಿ ಬಿಡುಗಡೆಗೊಳಿಸಿದ ಸ್ಕೋಡಾದ ಎರಡನೇ ಮಾದರಿ ಸ್ಲಾವಿಯಾ ಆಗಿದೆ. ಈ ಹೊಸ ಸ್ಲಾವಿಯಾ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ನಷ್ಟು ಬೂಟ್‌ಸ್ಪೆಸ್ ಹೊಂದಿದೆ.
ಈ ಸ್ಕೋಡಾ ಸ್ಲಾವಿಯಾ (Skoda Slavia) ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಸ್ಲಾವಿಯಾ ಕಾರು ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಈ ಸ್ಕೋಡಾ ಸ್ಲಾವಿಯಾ ಕಾರಿನ ಒಳಭಾಗದಲ್ಲಿ 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಸೀಟುಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಇದರೊಂದಿಗೆ ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಗಳನ್ನು ಒಳಗೊಂಡಿದೆ.
ಈ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳನ್ನು ಹೊಂದಿವೆ.

ಈ ಸ್ಲಾವಿಯಾ ಕಾರಿನಲ್ಲಿ 1.0 ಲೀಟರ್ ಮಾದರಿಯು ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಈ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಜೋಡಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








