ಹೊಸ ಕಾರು ಕೊಳ್ಳಲು ಆಫರ್ ಇಲ್ಲದೆ ಕೊರಗಬೇಡಿ: ಮಾರುತಿಯ ಈ ಕಾರು ಕೊಳ್ಳಲು ಪರ್ಫೆಕ್ಟ್ ಟೈಮ್!
ಭಾರತೀಯ ಮಾರುಕಟ್ಟೆಯಲ್ಲಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಸೆಗ್ಮೆಂಟ್‌ನಲ್ಲಿ ಎಲ್ಲರ ಫೇವರಿಟ್ ಕಾರು ಯಾವುದೆಂದು ಕೇಳಿದರೆ ಸುಮಾರು ೮೦% ಜನರೂ ಸಹ ಹೇಳುವುದು ಮಾರುತಿ ಸುಜುಕಿ ಬಲೇನೋ ಎಂದು. ಇದರ ಅಗ್ರೆಸಿವ್ ಆಗಿರುವ ಡಿಸೈನ್, ಒಳಭಾಗದಲ್ಲಿ ವಿಶಾಲವಾದ ಸ್ಥಳಾವಕಾಶ, ಅತ್ಯುತ್ತಮ ಮೈಲೇಜ್ ಮುಂತಾದ ಅಂಶಗಳು ಈ ಕಾರನ್ನು ಇದೇ ಸೆಗ್ಮೆಂಟ್‌ನ ಇತರ ಕಾರು ಮಾದರಿಗಳಿಗಿಂತ ವಿಭಿನ್ನವಾಗಿ ನಿಲ್ಲುವಂತೆ ಮಾಡುತ್ತದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಈ ಕಾರನ್ನು ಕೊಳ್ಳುವವರಿಗೆ ಭರ್ಜರಿ ಉಡುಗೊರೆಯನ್ನು ನೀಡುತ್ತಿದೆ. ಇಂದಿನ ಲೇಖನದಲ್ಲಿ ಆ ಕುರಿತಾಗಿ ನೋಡೋಣ.
ಮಾರುತಿ ಸುಜುಕಿ ಬಲೆನೊ ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ, ಆಲ್ಪಾ ರೂಪಾಂತರ ಮತ್ತು ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರೈಂಡರ್ ಗ್ರೇ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಮಾರುತಿ ಸುಜುಕಿಯು ಹೊಸ ಬಲೆನೋ AMT ಆವೃತ್ತಿಗೆ ಕಾರಿಗೆ ಸುಮಾರು 57000 ರೂಗಳವರೆಗಿನ ಆಫರ್ ಅನ್ನು ನೀಡುತ್ತಿದೆ. ಇದರಲ್ಲಿ 35000 ವರೆಗೆ ಕ್ಯಾಶ್ ಬೆನಿಫಿಟ್‌ಗಳು, 15,000 ರೂಗಳವರೆಗಿನ ಎಕ್ಸ್‌ಚೇಂಜ್ ಬೋನಸ್ ಅನ್ನು ಸಹ ಕಂಪನಿ ನೀಡುತ್ತಿದೆ. ಇತ್ತೀಚೆಗಷ್ಟೇ ಮಾರುತಿ ಸುಜುಕಿ ತನ್ನ ಆಟೋಮ್ಯಟಿಕ್ ಕಾರುಗಳಿಗೆ ಸಖತ್ ಆಫರ್ ಅನ್ನು ಘೋಷಿಸಿತ್ತು. ಈ ಆಫರ್‌ಗಳು ಆಯಾ ಪ್ರದೇಶಕ್ಕೆ ಅನುಗುಣವಾಗಿ ಬದಲಾಗುತ್ತವೆ.
ಬೆಂಗಳೂರಿನಲ್ಲಿ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಹ್ಯಾಚ್‌ಬ್ಯಾಕ್‌ನ ಸಿಗ್ಮಾ (ಪೆಟ್ರೋಲ್) ಬೇಸ್ ಮಾಡೆಲ್ ರೂ.7.98 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಡೆಲ್ಟಾ (ಪೆಟ್ರೋಲ್) ಮಾದರಿ ರೂ.8.97 ಲಕ್ಷ, ಬೇಸ್ ವೇರಿಯೆಂಟ್ ಮತ್ತು ಅತಿಹೆಚ್ಚು ಮಾರಾಟವಾಗುವ ಡೆಲ್ಟಾ (ಸಿಎನ್‌ಜಿ) ರೂ.10.04 ಲಕ್ಷ , ಟಾಪ್ ಎಂಡ್ ಮಾಡೆಲ್ ಜಿಟಾ (ಸಿಎನ್‌ಜಿ) ರೂ.11.13 ಆನ್-ರೋಡ್ ದರವನ್ನು ಹೊಂದಿದೆ.

ಹೊಸ ಮಾರುತಿ ಸುಜುಕಿ ಬಲೆನೊ ಕಾರನ್ನು ನೀವು ರೂ.80,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.15,191 ಇಎಂಐ ಕಟ್ಟಬೇಕು. ಈ ಹ್ಯಾಚ್‌ಬ್ಯಾಕ್, ವಿನ್ಯಾಸ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪ್ಯುಲೆಂಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಮಾರುತಿ ಸುಜುಕಿ ಬಲೆನೊ ಕಾರಿನ (Maruti Suzuki Baleno) 1.2-ಲೀಟರ್ ಪೆಟ್ರೋಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 113 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಮತ್ತು 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ.
ಸಿಎನ್‌ಜಿ ಕಿಟ್ ಪಡೆದಿರುವ ಕಾರು ಸಹ ಇದೇ ಎಂಜಿನ್ ಪಡೆದಿದೆ. ಆದರೆ, 77.5 ಪಿಎಸ್ ಪವರ್ ಮತ್ತು 98.5 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 22.35 ರಿಂದ 22.94 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 30.61 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications