ಬಿರುಬೇಸಿಗೆ.. ದ್ವಿಚಕ್ರ ವಾಹನ ಬಳಕೆ ಕಷ್ಟವೇ.. ರೂ.4.77 ಲಕ್ಷ ಆನ್-ರೋಡ್ ಬೆಲೆಗೆ ಈ ಹೊಸ ಕಾರನ್ನು ತನ್ನಿ

ಕರ್ನಾಟಕವು ಸೇರಿದಂತೆ ದೇಶಾದ್ಯಂತ ಬಿಸಿಲಿನ ಝಳ ಹೆಚ್ಚಳವಾಗಿದ್ದು, ದ್ವಿಚಕ್ರ ವಾಹನಗಳನ್ನು ಓಡಿಸುವುದು ತುಂಬಾ ಕಷ್ಟದ ಕೆಲಸ. ಆದರೆ, ದಿನನಿತ್ಯದ ಕೆಲಸ-ಕಾರ್ಯಗಳಿಗೆ ಇವುಗಳ ಬಳಕೆ ಅನಿರ್ವಾಯವಾಗಿದೆ. ನೀವು ಈ ಬೇಸಿಗೆಯಲ್ಲಿ ಆರಾಮದಾಯಕವಾಗಿ ಪ್ರಯಾಣಿಸಲು ಬಜೆಟ್ ಬೆಲೆಯಲ್ಲಿ ಹೊಸ ಕಾರನ್ನು ಹುಡುಕುತ್ತಿದ್ದರೆ ಮಾರುತಿ ಸುಜುಕಿ ಆಲ್ಟೊ ಕೆ10 ಉತ್ತಮ ಆಯ್ಕೆಯಾಗಬಲ್ಲದು.

ಈ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಅತ್ಯಂತ ಕಡಿಮೆ ಬೆಲೆ ಮತ್ತು ನಿಮಗೆ ಸರಿಹೊಂದುವ ಇಎಂಐ ಆಯ್ಕೆಯಲ್ಲಿ ದೊರೆಯುತ್ತದೆ. ಕೇವಲ ರೂ.5 ಲಕ್ಷದೊಳಗೆ ಗರಿಷ್ಠ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿರುವ ಈ ಕಾರನ್ನು ನಿಮ್ಮ ಮನೆಗೆ ತರಬಹುದು. ಬೆಂಗಳೂರಿನಲ್ಲಿ ಆಲ್ಟೊ ಕೆ10 ಬೇಸ್ ಮಾಡೆಲ್ ಎಸ್‌ಟಿಡಿ (ಪೆಟ್ರೋಲ್) ರೂ.4.77 ಲಕ್ಷ ಬೆಲೆಯನ್ನು ಹೊಂದಿದೆ.

Summer You Want To Buy Car Maruti Suzuki Alto K10 Best Choice On Road Price amp amp Emi Details

ಭಾರೀ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ವಿಎಕ್ಸ್ಐ (ಪೆಟ್ರೋಲ್) ರೂ.6.09 ಲಕ್ಷ, ಬೇಸ್ ವೇರಿಯೆಂಟ್ ಎಲ್ಎಕ್ಸ್ಐ ಎಸ್ (ಸಿಎನ್‌ಜಿ) ರೂ.6.91 ಲಕ್ಷ ಆನ್-ರೋಡ್ ದರವನ್ನು ಒಳಗೊಂಡಿದೆ. ನೀವು ಈ ಕಾರನ್ನು ರೂ.48,000 ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ರೂ.9,085 ಇಎಂಐ ಕಟ್ಟಬೇಕು.

ವಿನ್ಯಾಸದ ದೃಷ್ಟಿಯಿಂದಲೂ ಮಾರುತಿ ಸುಜುಕಿ ಆಲ್ಟೊ ಕೆ10 ಅತ್ಯಾಧುನಿಕವಾಗಿದ್ದು, ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸ್ಪೀಡಿ ಬ್ಲೂ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು. ಜೊತೆಗೆ ಇದೊಂದು ಸಣ್ಣ ಹ್ಯಾಚ್‌ಬ್ಯಾಕ್‌ ಆಗಿದ್ದರೂ 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

Summer You Want To Buy Car Maruti Suzuki Alto K10 Best Choice On Road Price amp amp Emi Details

ಮಾರುತಿ ಸುಜುಕಿ ಆಲ್ಟೊ ಕೆ10 ಕಾರು 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 24.39 ರಿಂದ 24.90 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 33.40 ರಿಂದ 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ಸ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿವರ್ಸಿಂಗ್ ಕ್ಯಾಮೆರಾ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

Summer You Want To Buy Car Maruti Suzuki Alto K10 Best Choice On Road Price amp amp Emi Details

ಮಾರುತಿ ಸುಜುಕಿ ಆಲ್ಟೊ ಕೆ10 ಕಾರಿಗೆ ರೆನಾಲ್ಟ್ ಕ್ವಿಡ್ (Renault Kwid) ಪ್ರಬಲ ಪ್ರತಿಸ್ಪರ್ಧಿಯಾಗಿದೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವೇ ಮಾದರಿಗಳ ಬೆಲೆಯ ಕುರಿತು ಮಾತ್ರ ಹೇಳಿದ್ದೇವೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಆನ್-ರೋಡ್ ಬೆಲೆ ಮತ್ತು ಸಾಲದ ಆಯ್ಕೆಗಳು ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 2, 2024, 17:31 [IST]
English summary
Summer you want to buy car maruti suzuki alto k10 best choice on road price emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+