ಸಾಮಾನ್ಯರ ಕನಸು ನನಸು: 6 ಲಕ್ಷ ಬೇಕಷ್ಟೆ.. ಈ ಹ್ಯಾಚ್‌ಬ್ಯಾಕ್, ಎಸ್‌ಯುವಿಗಳನ್ನು ಬೇಗ ಮನೆಗೆ ತರಬಹುದು!
ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಬಹುತೇಕರಿಗೆ ತಮ್ಮ ಕುಟುಂಬದ ಬಳಕೆಗಾಗಿ ಹೊಸ ಕಾರು ಖರೀದಿಸಬೇಕೆಂಬ ಕನಸಿರುತ್ತದೆ. ಆದರೆ, ಯಾವುದನ್ನು ತೆಗೆದುಕೊಳ್ಳಬೇಕೆಂಬ ಗೊಂದಲದಲ್ಲಿರುತ್ತಾರೆ. ಇಲ್ಲಿ ರೂ.6 ಲಕ್ಷ ಬೆಲೆಯಲ್ಲಿ ಲಭ್ಯವಿರುವ ಟಾಟಾ, ಮಾರುತಿ ಸುಜುಕಿ, ರೆನಾಲ್ಟ್ ಹಾಗೂ ನಿಸ್ಸಾನ್ ಕಂಪನಿಯ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳ ಕುರಿತು ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಖರೀದಿಗೆ ಲಭ್ಯವಿದೆ. 1-ಲೀಟರ್ ಪೆಟ್ರೋಲ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು 24.39 ರಿಂದ 24.90 ಕೆಎಂಪಿಎಲ್ ಮತ್ತು ಸಿಎನ್‌ಜಿ ಮಾದರಿಗಳು 33.85 ಕೆಎಂ/ ಕೆಜಿ ಮೈಲೇಜ್ ನೀಡುತ್ತವೆ.

ನೂತನ ಆಲ್ಟೊ ಕೆ10 ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್ ಬಾಗ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.
ರೆನಾಲ್ಟ್ ಕ್ವಿಡ್ (Renault KWID) ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಈ ಹ್ಯಾಚ್‌ಬ್ಯಾಕ್ 1-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 91 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದ್ದು, 21.46 ರಿಂದ 22.3 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ರೆನಾಲ್ಟ್ ಕ್ವಿಡ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಫ್ರಂಟ್ ಏರ್ ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ. ಕ್ವಿಡ್ ಹ್ಯಾಚ್‌ಬ್ಯಾಕ್‌ಗೆ ಮಾರುತಿ ಸುಜುಕಿ ಆಲ್ಟೊ ಕೆ10 ಮತ್ತು ಎಸ್-ಪ್ರೆಸ್ಸೊಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 19.43 ರಿಂದ 20.01 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 26.49 - 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಟಿಯಾಗೊ ಕಾರು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೆನ್ಸರ್ಸ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್/ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಕೂಡ ಒಳಗೊಂಡಿದೆ. 17.4 ರಿಂದ 20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಮ್ಯಾಗ್ನೈಟ್ ಎಸ್‌ಯುವಿಯು FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








