ಎಸ್‌ಯುವಿಗಳಿಗೆ ಫುಲ್ ಡಿಮ್ಯಾಂಡ್.. ಆದ್ರೂ 3.99 ಲಕ್ಷದ ಈ ಪುಟ್ಟ ಕಾರಿಗಾಗಿ ಶೋರೂಂ ಎಡತಾಕುವ ಗ್ರಾಹಕರು!
ಭಾರತದ ಕಾರು ಮಾರುಕಟ್ಟೆಯಲ್ಲಿ ಎಸ್‌ಯುವಿಗಳಿಗೆ ಭಾರೀ ಬೇಡಿಕೆಯಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ವಾಹನ ತಯಾರಕ ಕಂಪನಿಗಳು ಸಹ ಎಸ್‌ಯುವಿ ಉತ್ಪಾದನೆಗೆ ಆದ್ಯತೆ ನೀಡಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವ ಮಾದರಿ (ಮಾಡೆಲ್)ಗಳನ್ನು ಹೊರತರುತ್ತಿವೆ. 2024ರ ಆರ್ಥಿಕ ವರ್ಷದಲ್ಲಿ ಎಸ್‌ಯುವಿಗಳ ಮಾರುಕಟ್ಟೆ ಪಾಲು ಶೇಕಡ 50.4% ಏರಿಕೆಯಾಯಿತು. ಅದರ ನೇರ ಪರಿಣಾಮವನ್ನು ಹ್ಯಾಚ್‌ಬ್ಯಾಕ್ ಹಾಗೂ ಸೆಡಾನ್‌ಗಳು ಎದುರಿಸಬೇಕಾಯಿತು. ಕ್ರಮವಾಗಿ 27.8% ಮತ್ತು 9% ಕುಸಿತ ಕಂಡವು.
ಸದ್ಯ ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಎಸ್‌ಯುವಿ ಲೈನ್ಅಪ್ ಸಾಕಷ್ಟು ಬಲಗೊಳ್ಳುತ್ತಿದ್ದರೂ, ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಮಾತ್ರ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. 2024ರ ಆರ್ಥಿಕ ವರ್ಷದಲ್ಲಿ 111,955 ಯುನಿಟ್ ಆಲ್ಟೊ ಕಾರುಗಳನ್ನು ಮಾರಲಾಗಿದೆ. ಅದೇ 2025ರ ಆರ್ಥಿಕ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ ಬರೋಬ್ಬರಿ 24,493 ಯುನಿಟ್ ಮಾರಾಟ ಮಾಡಲಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಹೊಚ್ಚ ಹೊಸ ಮಾರುತಿ ಸುಜುಕಿ ಆಲ್ಟೊ ಕೆ10 ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ. ಮೆಟಾಲಿಕ್ ಸಿಜ್ಲಿಂಗ್ ರೆಡ್ ಹಾಗೂ ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ಕೂಡ ದೊರೆಯುತ್ತದೆ.
ಈ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದರ 1-ಲೀಟರ್ ಪೆಟ್ರೋಲ್ ಎಂಜಿನ್ 67 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 89 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಸಿಎನ್‌ಜಿ ಚಾಲಿತ ಮಾದರಿಯು ಇದೇ ಎಂಜಿನ್‌ನ್ನು ಪಡೆದಿದೆ. ಆದರೆ 57 ಪಿಎಸ್ ಪವರ್ ಮತ್ತು 82 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮಾರುತಿ ಸುಜುಕಿ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್ ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 24.39 ರಿಂದ 24.90 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 33.40 ರಿಂದ 33.85 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ. ಇದು ಸಣ್ಣ ಗಾತ್ರದಲ್ಲಿರುವುದರಿಂದ ಸುಲಭವಾಗಿ ಪಾರ್ಕಿಂಗ್ ಮಾಡಬಹುದು.
ಈ ಕಾರಿನಲ್ಲಿ 4 ರಿಂದ 5 ಜನರು ಓಡಾಟವನ್ನು ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 214 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿಯಂತಹ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಆಲ್ಟೊ ಕೆ10 ಸುರಕ್ಷತೆಗೂ ಹೆಸರುವಾಸಿಯಾಗಿದೆ. ಡುಯಲ್ ಫ್ರಂಟ್ ಏರ್ ಬಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರಿಯರ್ ಪಾರ್ಕಿಂಗ್ ಸೆನ್ಸರ್ ಮತ್ತು ರಿವರ್ಸಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ರೆನಾಲ್ಟ್ ಕ್ವಿಡ್ (Renault Kwid) ಪ್ರಬಲ ಎದುರಾಳಿಯಾಗಿದ್ದು, ರೂ.4.70 ರಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿದಾರರಿಗೆ ಸಿಗುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications