ಮಧ್ಯಮ ವರ್ಗದವರು ಹೊಸ ಕಾರು ಖರೀದಿಸಬಹುದು: 7 ಲಕ್ಷಕ್ಕೆ ಸಿಗುತ್ತವೆ.. ಹೆಚ್ಚು ಮೈಲೇಜ್, ಸುರಕ್ಷತೆಯಲ್ಲೂ ಉತ್ತಮ

ಹೊಸ 'ಕಾರು' ಖರೀದಿಸಬೇಕೆಂಬುದು ಎಲ್ಲರ ಆಸೆಯಾಗಿರುತ್ತದೆ. ಆದರೆ, ಬಹುತೇಕರ ಈ ಕನಸು ಈಡೇರುವುದಿಲ್ಲ. ಇಲ್ಲಿ 7 ಲಕ್ಷ ಬೆಲೆಗೆ ಸಿಗುವ ಟಾಟಾ ಪಂಚ್ (Tata Punch), ಹ್ಯುಂಡೈ ಎಕ್ಸ್‌ಟರ್‌ (Hyundai Exter) ಮತ್ತು ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಜನಪ್ರಿಯ ಮೈಕ್ರೋ ಎಸ್‌ಯುವಿ ಟಾಟಾ ಪಂಚ್ (Tata Punch) ಬಗ್ಗೆ ಮಾತನಾಡೋಣ. ಈ ಕಾರು, ರೂ.6 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2 - ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಜೊತೆಗೆ 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

SUVs Under 7 Lakh in India: Tata Punch, Hyundai Exter, Nissan Magnite

ಟಾಟಾ ಪಂಚ್ ಪೆಟ್ರೋಲ್ ರೂಪಾಂತರಗಳು ಪ್ರತಿ ಲೀ.ಗೆ 18.8 ರಿಂದ 20.09 ಕಿಲೋಮೀಟರ್, ಸಿಎನ್‌ಜಿ ರೂಪಾಂತರ ಒಂದು ಕೆಜಿಗೆ 26.99 ಕಿ.ಮೀ ಮೈಲೇಜ್ ನೀಡುತ್ತದೆ. ಈ ಕಾರು, 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಡಿಫಾಗರ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಹ್ಯುಂಡೈ ಎಕ್ಸ್‌ಟರ್‌ (Hyundai Exter) ಬಗ್ಗೆ ಹೇಳುವುದಾದರೆ, ಇದು ರೂಪಾಂತರಗಳಿಗೆ ಅನುಗುಣವಾಗಿ ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ (ಒ), ಎಸ್ಎಕ್ಸ್, ಎಸ್ಎಕ್ಸ್ (ಒ) ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿರುವ ಈ ಕಾರು, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಅನ್ನು ಹೊಂದಿದೆ.

SUVs Under 7 Lakh in India: Tata Punch, Hyundai Exter, Nissan Magnite

ಈ ಹ್ಯುಂಡೈ ಎಕ್ಸ್‌ಟರ್‌ ಪೆಟ್ರೋಲ್ ರೂಪಾಂತರಗಳು, 19.2 ಕೆಎಂಪಿಎಲ್ ರಿಂದ 19.4 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 27.1 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿದೆ.

ಕೊನೆಯಾದಾಗಿ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಕುರಿತು ಮಾತನಾಡುವುದಾದರೆ, ಈ ಕಾರು ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಬ್ಲೇಡ್ ಸಿಲ್ವರ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಲಭ್ಯವಿದೆ. ಜೊತೆಗೆ 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 5 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ ಬಾಕ್ಸ್‌ನ್ನು ಒಳಗೊಂಡಿದೆ.

SUVs Under 7 Lakh in India: Tata Punch, Hyundai Exter, Nissan Magnite

ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, 360 - ಡಿಗ್ರಿ ಕ್ಯಾಮೆರಾ, ಹಿಲ್ - ಸ್ಟಾರ್ಟ್ ಅಸಿಸ್ಟ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, February 3, 2024, 13:10 [IST]
English summary
Suvs under 7 lakh in india tata punch hyundai exter nissan magnite
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+