Altroz: ಜನಪ್ರಿಯ ಟಾಟಾ ಆಲ್ಟ್ರೋಜ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದಲ್ಲಿ ಖರೀದಿಗೆ ದೊರೆಯುವ ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರೊಂದಿಗೆ ಹೆಚ್ಚಿನ ಮೈಲೇಜ್ ನೀಡುವುದರಿಂದ ಬಹುತೇಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ವಿವರಿದ್ದೇವೆ.

ಬೆಂಗಳೂರಿನಲ್ಲಿ ಟಾಟಾ ಆಲ್ಟ್ರೋಜ್ ಕಾರಿನ ಬೇಸ್ ಮಾಡೆಲ್ ಎಕ್ಸ್ಇ (ಪೆಟ್ರೋಲ್) ರೂಪಾಂತರ ರೂ.8.11 ಲಕ್ಷ, ಗರಿಷ್ಠ ಸಂಖ್ಯೆಯಲ್ಲಿ ಮಾರಾಟಗೊಳ್ಳುವ ಎಕ್ಸ್‌ಝಡ್ ಪ್ಲಸ್ ಎಸ್ (ಪೆಟ್ರೋಲ್) ರೂ.11.04 ಲಕ್ಷ, ಎಂಟ್ರಿ ಲೆವೆಲ್ ವೇರಿಯೆಂಟ್ ಎಕ್ಸ್ಎಂ ಪ್ಲಸ್ (ಡಿಸೇಲ್) ರೂ.10.80 ಲಕ್ಷ ಮತ್ತು ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಖರೀದಿಸುವ ಎಕ್ಸ್‌ಝಡ್ ಪ್ಲಸ್ ಎಸ್ (ಡಿಸೇಲ್) ರೂ.12.98 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

Tata Altroz Car On Road Price And Emi Details

ಬೇಸ್ ಮಾಡೆಲ್ ಎಕ್ಸ್ಇ (ಸಿಎನ್‌ಜಿ) ರೂ.9.26 ಲಕ್ಷ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಎಕ್ಸ್‌ಝಡ್ ಪ್ಲಸ್ ಎಸ್ (ಸಿಎನ್‌ಜಿ) ರೂ.12.70 ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.81,000 ಡೌನ್ ಪೇಮೆಂಟ್ ಪಾವತಿಸಿ, ಈ ಕಾರನ್ನು ಕೊಂಡುಕೊಂಡರೆ 5 ವರ್ಷದ ಅವಧಿಗೆ ಶೇಕಡ 9.8% ಬಡ್ಡಿ ದರದಲ್ಲಿ ತಿಂಗಳಿಗೆ ರೂ.15,439 ಇಎಂಐ ಕಟ್ಟಬೇಕು.

ನೂತನ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್ ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ಹಾರ್ಬರ್ ಬ್ಲೂ, ಡೌನ್‌ಟೌನ್ ರೆಡ್, ಆರ್ಕೇಡ್ ಗ್ರೇ, ಅವೆನ್ಯೂ ವೈಟ್, ಒಪೇರಾ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಜೊತೆಗೆ ಇಂಧನ ಚಾಲಿತ ಮಾದರಿಗಳು 345 ಲೀಟರ್ ಹಾಗೂ ಸಿಎನ್‌ಜಿ ರೂಪಾಂತರಗಳು 210 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿವೆ.

Tata Altroz Car On Road Price And Emi Details

ಈ ಕಾರು ಮೂರು ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 88 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 115 ಎನ್ಎಂ ಪೀಕ್ ಟಾರ್ಕ್, 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಪಿಎಸ್ ಪವರ್ ಹಾಗೂ 140 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ ಎನ್ಎಂ ಪೀಕ್ ಟಾರ್ಕ್, 1.2-ಲೀಟರ್ ಸಿಎನ್‌ಜಿ ಎಂಜಿನ್ 73.5 ಪಿಎಸ್ ಪವರ್ ಮತ್ತು 103 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಡುಯಲ್-ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಟಾಟಾ ಆಲ್ಟ್ರೋಜ್ ಕಾರಿನ ಪೆಟ್ರೋಲ್ ರೂಪಾಂತರಗಳು 18.50 ರಿಂದ 19.33 ಕೆಎಂಪಿಎಲ್, ಡೀಸೆಲ್ ಮಾದರಿಗಳು 23.64 ಕೆಎಂಪಿಎಲ್ ಮತ್ತು ಸಿಎನ್‌ಜಿ ಆವೃತ್ತಿಗಳು 26.20 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. ಈ ಹ್ಯಾಚ್‌ಬ್ಯಾಕ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಯ ವಿಚಾರದಲ್ಲಿಯೂ ಈ ಕಾರು ಉತ್ತಮವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, ಆಟೋ ಪಾರ್ಕ್ ಲಾಕ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಈ ಕಾರಿಗೆ ಮಾರುತಿ ಸುಜುಕಿ ಬಲೆನೊ, ಟೊಯೊಟಾ ಗ್ಲಾನ್ಜಾ ದೊಡ್ಡ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ರೂಪಾಂತರಗಳ ಆನ್-ರೋಡ್ ಬೆಲೆ ಕುರಿತು ಮಾತ್ರ ವಿವರಿಸಿದ್ದೇವೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಶೋ ರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 15, 2024, 17:57 [IST]
English summary
Tata altroz car on road price and emi details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+