Tata: 26 ಕಿ.ಮೀ ಮೈಲೇಜ್.. ಅಗ್ಗದ ಟಾಟಾ ಆಲ್ಟ್ರೋಜ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಟಾಟಾ ಮೋಟಾರ್ಸ್ (Tata Motors) ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗಿರುವ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಪ್ರೀಮಿಯಂ ಹ್ಯಾಚ್‌ಬ್ಯಾಕ್ 'ಆಲ್ಟ್ರೋಜ್'ನ್ನು ಮಾರಾಟಗೊಳಿಸುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ, 'ಟಾಟಾ ಆಲ್ಟ್ರೋಜ್' ಉತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಕಾರಿನ ಆನ್-ರೋಡ್ ಬೆಲೆ (On-Road Price), ಮೈಲೇಜ್ (Mileage) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಬೆಂಗಳೂರಿನಲ್ಲಿ ಟಾಟಾ ಆಲ್ಟ್ರೋಜ್ (Tata Altroz) ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. ಇದರ ಎಕ್ಸ್ಇ (ಪೆಟ್ರೋಲ್) ರೂಪಾಂತರ, ರೂ.8 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್ ಪೇಮೆಂಟ್ ಪಾವತಿ ಮಾಡಿ ಈ ಕಾರನ್ನು ಖರೀದಿ ಮಾಡಿದರೆ, ರೂ.5 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಕ್ಕೆ ತಿಂಗಳಿಗೆ ರೂ.10,000 ವರೆಗೆ ಇಎಂಐ ಕಟ್ಟಬೇಕು.

Tata Altroz Car On Road Price Mileage And Emi Details

ಟಾಟಾ ಆಲ್ಟ್ರೋಜ್ ಕಾರಿನ ಎಕ್ಸ್ಎಂ ಪ್ಲಸ್ ಡೀಸೆಲ್ ರೂಪಾಂತರ, ರೂ.11 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.3 ಲಕ್ಷ ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.8 ಲಕ್ಷವರೆಗೆ ಸಾಲ ಬಾಕಿ ಉಳಿಯುತ್ತದೆ. ಶೇಕಡ 8% ಬಡ್ಡಿ ಹಾಕಿ 5 ವರ್ಷಗಳಿಗೆ ಮಾಸಿಕ ರೂ.16,000 ವರೆಗೆ ಇಎಂಐ ಪಾವತಿ ಮಾಡಬೇಕು.

ನೂತನ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ನ ಎಕ್ಸ್‌ಟಿ ಡೀಸೆಲ್ ರೂಪಾಂತರ, ರೂ.11.30 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಪಡೆದಿದೆ. ಈ ಕಾರನ್ನು ರೂ.3 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.8.30 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಸೇರಿಸಿ 5 ವರ್ಷಕ್ಕೆ ತಿಂಗಳಿಗೆ ರೂ.17,000 ವರೆಗೆ ಇಎಂಐ ಕಟ್ಟಬೇಕು.

Tata Altroz Car On Road Price Mileage And Emi Details

ಈ ಕಾರಿನ ಎಕ್ಸ್‌ಝಡ್ ಪ್ಲಸ್ ಡೀಸೆಲ್ ರೂಪಾಂತರ, ರೂ.13 ಲಕ್ಷವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.3 ಲಕ್ಷ ಡೌನ್ ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.10 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 5 ವರ್ಷಗಳಿಗೆ ಮಾಸಿಕ ರೂ.20,000 ವರೆಗೆ ಇಎಂಐ ಪಾವತಿಸಬೇಕು.

ಹೊಸ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ನ ಎಕ್ಸ್‌ಝಡ್ ಪ್ಲಸ್ ಎಸ್ ಸಿಎನ್‌ಜಿ ರೂಪಾಂತರ, ರೂ.12.15 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.3 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಈ ಕಾರನ್ನು ಖರೀದಿಸಿದರೆ, ರೂ.9.15 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 5 ವರ್ಷಕ್ಕೆ ತಿಂಗಳಿಗೆ 19,000 ವರೆಗೆ ಇಎಂಐ ಕಟ್ಟಬೇಕು.

Tata Altroz Car On Road Price Mileage And Emi Details

ಈ ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಡುಯಲ್-ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ನಲ್ಲಿ 5 ಮಂದಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಮತ್ತು ಆಟೋ ಪಾರ್ಕ್ ಲಾಕ್ ಅನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

Article Published On: Saturday, December 28, 2024, 9:00 [IST]
English summary
Tata altroz car on road price mileage and emi details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+