Tata: ಟಾಟಾದ ಈ ಕಾರು ಎಲ್ಲರಿಗೂ ಇಷ್ಟವಾಗುತ್ತದೆ.. ರೂ.9.49 ಲಕ್ಷ ಬೆಲೆ, 6 ಏರ್‌ಬ್ಯಾಗ್
ದೇಶದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಆಲ್ಟ್ರೋಜ್ ರೇಸರ್ (Altroz Racer) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ಉತ್ತಮ ಬೇಡಿಕೆ ಪಡೆದುಕೊಂಡಿದೆ. ನೀವು ಈ ಕಾರನ್ನು ಮನೆ ತರಲು ಆಲೋಚಿಸಿದ್ದೀರಾ.. ಇಲ್ಲಿ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು: ಹೊಚ್ಚ ಹೊಸ ಟಾಟಾ ಆಲ್ಟ್ರೋಜ್ ರೇಸರ್ (Tata Altroz Racer) ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.9.49 ಲಕ್ಷದಿಂದ ರೂ.10.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆರ್1, ಆರ್2 ಮತ್ತು ಆರ್3 ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ.

ಬಣ್ಣಗಳು, ಆಸನ ಆಯ್ಕೆ: ಈ ಕಾರು ಅಟಾಮಿಕ್ ಆರೆಂಜ್, ಅವೆನ್ಯೂ ವೈಟ್ ಹಾಗೂ ಪ್ಯೂರ್ ಗ್ರೇ ಎಂಬ ಮೂರು ಡುಯಲ್-ಟೋನ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ತೆರಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ: ಆಲ್ಟ್ರೊಜ್ ರೇಸರ್ ಹ್ಯಾಚ್‌ಬ್ಯಾಕ್ 1.2-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 120 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಕೇವಲ 11.3 ಸೆಕೆಂಡಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು: ಈ ಕಾರು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್ ಮತ್ತು ಏರ್ ಪ್ಯೂರಿಫೈಯರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಟಾಟಾ ಆಲ್ಟ್ರೋಜ್ ರೇಸರ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಬ್ಲೈಂಡ್ ವ್ಯೂ ಮಾನಿಟರ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಸಾಮಾನ್ಯ ಟಾಟಾ ಆಲ್ಟ್ರೊಜ್ ವಿಶೇಷತೆಗಳೇನು: ಈ ಕಾರು ರೂ.6.65 ಲಕ್ಷದಿಂದ ರೂ.11.35 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಪೆಟ್ರೋಲ್, ಡಿಸೇಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications