Tata: ಬಿಡುಗಡೆಗೂ ಮುನ್ನ ಡೀಲರ್‌ಶಿಪ್ ತಲುಪಿದ ಟಾಟಾದ ಹೊಸ ಕಾರು.. ನೀರಿಕ್ಷೆಗೂ ಮೀರಿದ ವಿಶೇಷತೆಗಳು?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಸಫಾರಿ, ಹ್ಯಾರಿಯರ್, ನೆಕ್ಸಾನ್, ಪಂಚ್, ಆಲ್ಟ್ರೋಜ್, ಟಿಗೂರ್ ಮತ್ತು ಟಿಯಾಗೊ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಜೂನ್ 7ರಂದು ನೂತನ ಆಲ್ಟ್ರೋಜ್ ರೇಸರ್ (Altroz Racer) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಬಿಡುಗಡೆಗೊಳಿಸಲಿದೆ. ಅದಕ್ಕಾಗಿ ಕಂಪನಿಯು ಬಹಳಷ್ಟು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಸದ್ಯ, ಈ ಕಾರು ದೇಶಾದ್ಯಂತ ವಿವಿಧ ಭಾಗಗಳಲ್ಲಿ ಡೀಲರ್‌ಶಿಪ್‌ಗಳನ್ನು ತಲುಪುವುದಕ್ಕೆ ಶುರುವಾಗಿದೆ.

ಹೊಚ್ಚ ಹೊಸ ಟಾಟಾ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್‌, ಹ್ಯುಂಡೈ ಐ20 ಎನ್ ಕಾರಿಗೆ ಪ್ರಬಲ ಪ್ರತಿಸ್ಪರ್ಧಿಯಾಗಿದೆ. ಈಗ ಡೀಲರ್‌ಶಿಪ್‌ನಲ್ಲಿ ನಿಂತಿರುವ ಮಾದರಿಯು ಅವೆನ್ಯೂ ವೈಟ್ ಎಂಬ ಡುಯಲ್-ಟೋನ್ ಬಣ್ಣ(ಕಲರ್)ದ ಆಯ್ಕೆಯನ್ನು ಹೊಂದಿದೆ. ಇದು ಮಾತ್ರವಲ್ಲದೆ, ಈ ಆಲ್ಟ್ರೋಜ್ ರೇಸರ್ ಮತ್ತೆರೆಡು ಡುಯಲ್-ಟೋನ್ ಬಣ್ಣಗಳಾದ ಅಟಾಮಿಕ್ ಆರೆಂಜ್ ಮತ್ತು ಪ್ಯೂರ್ ಗ್ರೇಯೊಂದಿಗೆ ಲಭ್ಯವಾಗಲಿದೆ. ಜೊತೆಗೆ ಆರ್1, ಆರ್2 ಹಾಗೂ ಆರ್3 ರೂಪಾಂತರ (ವೇರಿಯೆಂಟ್)ಗಳೊಂದಿಗೆ ಸಿಗಬಹುದು ಎಂದು ವರದಿಯಾಗಿದೆ.

Tata Altroz Racer Car Launch In June 7 Starts Reaching Dealerships Expected Price And Features

ನೂತನ ಕಾರು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಬ್ಲೈಂಡ್ ಸ್ಪಾಟ್ ಮಾನಿಟರ್, ಏರ್ ಪ್ಯೂರಿಫೈಯರ್, 360-ಡಿಗ್ರಿ ಸರೌಂಡ್ ಕ್ಯಾಮೆರಾ ಹಾಗೂ ಸನ್‌ರೂಫ್‌ನ್ನು ಒಳಗೊಂಡಿರಬಹುದು ಎಂದು ತಿಳಿದುಬಂದಿದೆ.

ಈ ಟಾಟಾ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್‌ (Tata Altroz Racer Hatchback), 1.2-ಲೀಟರ್ 3-ಸಿಲಿಂಡರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿರಲಿದೆ. ಇದು 118 ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿರಲಿದ್ದು, 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಲಭ್ಯವಾಗಬಹುದು ಎನ್ನಲಾಗಿದೆ.

Tata Altroz Racer Car Launch In June 7 Starts Reaching Dealerships Expected Price And Features

ಹೊಸ ಆಲ್ಟ್ರೋಜ್ ರೇಸರ್ ಸುಮಾರು ರೂ.10 ಲಕ್ಷ ಬೆಲೆಯಲ್ಲಿ (ಎಕ್ಸ್ ಶೋರೂಂ) ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ. ಈಗಾಗಲೇ ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.21,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ಪ್ರಸ್ತುತ ದೇಶೀಯವಾಗಿ ಲಭ್ಯವಿರುವ ಸಾಮಾನ್ಯ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌, ರೂ.6.65 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಇದರ ಪವರ್‌ಟ್ರೇನ್ ಬಗ್ಗೆ ಹೇಳುವುದಾದರೆ, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಆಯ್ಕೆಯನ್ನು ಒಳಗೊಂಡಿದ್ದು, 18.50 ರಿಂದ 26.20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಆಟೋ ಪಾರ್ಕ್ ಲಾಕ್ ಮತ್ತು ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: CarWale

More from DriveSpark

Article Published On: Wednesday, June 5, 2024, 18:33 [IST]
English summary
Tata altroz racer car launch in june 7 starts reaching dealerships expected price and features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+