Tata: ಪ್ರತಿಸ್ಪರ್ಧಿಗಳಿಗೆ ನಡುಕ.. ಟಾಟಾದ ಹೊಸ ಕಾರು ಬಿಡುಗಡೆಗೆ ದಿನಗಣನೆ, ಹೇಗಿದೆ?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ ಖ್ಯಾತಿಗಳಿಸಿದ್ದು, ಬಹುನೀರಿಕ್ಷಿತ 'ಆಲ್ಟ್ರೋಜ್ ರೇಸರ್' ಹ್ಯಾಚ್‌ಬ್ಯಾಕ್‌ನ್ನು ದೇಶೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳು ಬಿಡುಗಡೆಗೊಳಿಸಲು ಸಿದ್ದವಾಗಿದೆ ಎಂದು ವರದಿಯಾಗಿದೆ. ಹೊಸ ಕಾರನ್ನು 2023ರ ಆಟೋ ಎಕ್ಸ್‌ಪೋ ಹಾಗೂ ಈ ವರ್ಷ ಜರುಗಿದ ಭಾರತ್ ಮೊಬಿಲಿಟಿ ಶೋನಲ್ಲಿ ಕೂಡ ಪ್ರದರ್ಶಿಸಲಾಗಿತ್ತು.

ನೂತನ ಟಾಟಾ ಆಲ್ಟ್ರೋಜ್ ರೇಸರ್ (Tata Altroz Racer) ಕಾರು, ನೆಕ್ಸಾನ್‌ ಎಸ್‌ಯುವಿಯಂತೆ 1.2 - ಲೀಟರ್, 3-ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಪಡೆದಿರಲಿದ್ದು, 120 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ದೊರೆಯಬಹುದು ಎಂದು ಹೇಳಲಾಗಿದೆ.

Tata Altroz Racer Car Launch Next Month Expected Price And Features

ಹೊಸ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್‌ ಹೊರ ಹಾಗೂ ಒಳಭಾಗದಲ್ಲಿ ಅತ್ಯಾಕರ್ಷಕ ವಿನ್ಯಾಸ (ಡಿಸೈನ್)ವನ್ನು ಹೊಂದಿರುವ ಸಾಧ್ಯತೆಯಿದೆ. ಈ ಕಾರಿನ ಬಾಹ್ಯ ನೋಟದ ಕುರಿತ ವಿವರಗಳು ಆಟೋ ಎಕ್ಸ್‌ಪೋ ಮತ್ತು ಭಾರತ್ ಮೊಬಿಲಿಟಿ ಶೋನಲ್ಲಿ ವೀಕ್ಷಣೆಗೆ ಇಡಲಾಗಿದ್ದ ಮಾದರಿ (ಮಾಡೆಲ್)ಯಿಂದ ಬಹಿರಂಗಗೊಂಡಿದೆ. ಆಲ್ಟ್ರೋಜ್ ರೇಸರ್ ಆವೃತ್ತಿಯು ಡುಯಲ್ ಟೋನ್ ಪೇಂಟ್ ಸ್ಕೀಮ್, ಫ್ರಂಟ್ (ಮುಂಭಾಗ) ಫೆಂಡರ್‌ಗಳಲ್ಲಿ 'ರೇಸರ್' ಬ್ಯಾಡ್ಜಿಂಗ್ ಹಾಗೂ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಈ ಕಾರಿನ ಒಳಭಾಗವು ಆಕರ್ಷಣೀಯವಾಗಿದ್ದು, ಆರಾಮದಾಯಕವಾದ ಆಸನ ವ್ಯವಸ್ಥೆಯನ್ನು ಪಡೆದುಕೊಂಡಿರಲಿದೆ. 10.25-ಇಂಚಿನ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, 360 ಡಿಗ್ರಿ ಕ್ಯಾಮೆರಾ, ಹೆಡ್ಸ್ ಅಪ್ ಡಿಸ್ಪ್ಲೇ, ಸನ್‌ರೂಫ್, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.

Tata Altroz Racer Car Launch Next Month Expected Price And Features

ಹೊಚ್ಚ ಹೊಸ ಟಾಟಾ ಆಲ್ಟ್ರೋಜ್ ರೇಸರ್ ಕಾರು ರೂ.9.20 ಲಕ್ಷದಿಂದ ರೂ.10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಸದ್ಯ, ದೇಶೀಯವಾಗಿ ಲಭ್ಯವಿರುವ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ ರೂಪಾಂತರಗಳಿಗೆ ಅನುಗುಣವಾಗಿ ರೂ.6.65 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಈ ಟಾಟಾ ಆಲ್ಟ್ರೋಜ್ ಕಾರು, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.2 - ಲೀಟರ್ ಟರ್ಬೊ ಪೆಟ್ರೋಲ್, 1.5 - ಲೀಟರ್ ಡೀಸೆಲ್ ಮತ್ತು 1.2 - ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಡುಯಲ್-ಕ್ಲಚ್ ಟ್ರಾಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 18.50 ರಿಂದ 26.20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

Tata Altroz Racer Car Launch Next Month Expected Price And Features

ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್‌ ಹಾರ್ಬರ್ ಬ್ಲೂ, ಡೌನ್‌ಟೌನ್ ರೆಡ್, ಆರ್ಕೇಡ್ ಗ್ರೇ, ಅವೆನ್ಯೂ ವೈಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಆಟೋ ಪಾರ್ಕ್ ಲಾಕ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 11, 2024, 8:30 [IST]
English summary
Tata altroz racer car launch next month expected price and features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+