Tata: ಟಾಟಾದ ಹೊಸ ಕಾರಿನ ಟೀಸರ್ ಬಿಡುಗಡೆ.. ಮಾರುಕಟ್ಟೆಗೆ ಯಾವಾಗ ಬರುತ್ತದೆ, ಬೆಲೆ ಎಷ್ಟಿರಲಿದೆ?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಹ್ಯಾರಿಯರ್, ಸಫಾರಿ, ನೆಕ್ಸಾನ್, ಪಂಚ್, ಆಲ್ಟ್ರೋಜ್, ಟಿಗೂರ್ ಹಾಗೂ ಟಿಯಾಗೊ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಜೂನ್‌ನಲ್ಲಿ ಹೊಚ್ಚ ಹೊಸ ಆಲ್ಟ್ರೋಜ್ ರೇಸರ್ (Altroz Racer) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಪರಿಚಯಿಸಲು ಕಂಪನಿಯು ಸಾಕಷ್ಟು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಟಾಟಾ ಮೋಟಾರ್ಸ್ ಬುಧವಾರ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ನೂತನ 'ಆಲ್ಟ್ರೋಜ್ ರೇಸರ್' ಕಾರಿನ ಟೀಸರ್ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದು ಹ್ಯಾಚ್‌ಬ್ಯಾಕ್‌ನ ಹೊರಭಾಗದ ವಿನ್ಯಾಸ (ಡಿಸೈನ್)ದ ಬಗ್ಗೆ ಒಂದಷ್ಟು ಬೆಳಕನ್ನು ಚೆಲ್ಲುತ್ತದೆ. ಈ ವಿಡಿಯೋದಲ್ಲಿ ಹೊಸ ಆಲ್ಟ್ರೋಜ್ ರೇಸರ್ ಮಾದರಿಯು ಡುಯಲ್-ಟೋನ್ ಪೇಂಟ್ ಸ್ಕೀಮ್‌ (ಬಣ್ಣದ ಆಯ್ಕೆ) ಹೊಂದಿರುವುದನ್ನು ನೋಡಬಹುದು.

Tata Altroz Racer Car Teaser Video Release Expected Price And Features Details

ವಿಶೇಷವಾಗಿ ಕಪ್ಪು (ಬ್ಲ್ಯಾಕ್) ಬಣ್ಣವು ಪೀಲರ್‌ಗಳು, ರೇರ್ ಡೋರ್ ಹ್ಯಾಂಡಲ್‌ಗಳು ಹಾಗೂ ಬಾನೆಟ್‌ನಾದ್ಯಂತ ಹರಡಿಕೊಂಡಿದೆ. ಅಲ್ಲಲ್ಲಿ ಬಿಳಿ (ವೈಟ್) ಬಣ್ಣದ ಸ್ಟ್ರಿಪ್‌ಗಳಿವೆ. ಶಾರ್ಕ್-ಫಿನ್ ಆಂಟೆನಾ ಮತ್ತು ಫ್ರಂಟ್ (ಮುಂಭಾಗ) ಫೆಂಡರ್‌ನಲ್ಲಿ 'ರೇಸರ್' ಬ್ಯಾಡ್ಜಿಂಗ್ ಅನ್ನು ಕಾಣಬಹುದು. ಆದಾಗ್ಯೂ ಈ ಹ್ಯಾಚ್‌ಬ್ಯಾಕ್‌ನ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯ (ಫೀಚರ್ಸ್)ಗಳ ಕುರಿತಂತೆ ಟಾಟಾ ಮೋಟಾರ್ಸ್ ಯಾವುದೇ ಅಧಿಕೃತ ವಿವರಗಳನ್ನು ಬಹಿರಂಗಪಡಿಸಿಲ್ಲ.

ಹೊಸ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್‌ನ್ನು ಆಲ್ಫಾ (ಆಗೈಲ್ ಲೈಟ್ ಫ್ಲೆಕ್ಸಿಬಲ್ ಅಡ್ವಾನ್ಸ್ಡ್ - ALFA) ಪ್ಲಾಟ್‌ಫಾರ್ಮ್‌ನಡಿ ಕಂಪನಿಯು ಅಭಿವೃದ್ದಿಪಡಿಸಿದೆ ಎಂದು ತಿಳಿದುಬಂದಿದೆ. ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಬರಲಿದ್ದು, 118 ಪಿಎಸ್ ಗರಿಷ್ಠ ಪವರ್ ಮತ್ತು 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಜೊತೆಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯುವ ಸಾಧ್ಯತೆಯಿದೆ.

Tata Altroz Racer Car Teaser Video Release Expected Price And Features Details

ಈ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, 360 - ಡಿಗ್ರಿ ಸರೌಂಡ್ ಕ್ಯಾಮೆರಾ ಹಾಗೂ ಸನ್‌ರೂಫ್‌ನ್ನು ಪಡೆದಿರಲಿದೆ ಎನ್ನಲಾಗಿದೆ.

ನೂತನ ಟಾಟಾ ಆಲ್ಟ್ರೋಜ್ ರೇಸರ್ (Tata Altroz Racer) ಹ್ಯಾಚ್‌ಬ್ಯಾಕ್‌ ರೂ.10 ಲಕ್ಷ ಆಸುಪಾಸಿನ ಬೆಲೆಯಲ್ಲಿ (ಎಕ್ಸ್ ಶೋರೂಂ) ಖರೀದಿಗೆ ಲಭ್ಯವಾಗಬಹುದು ಎಂದು ಹೇಳಲಾಗಿದೆ. ಸದ್ಯ ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳು ರೂ.21,000 ಟೋಕನ್ ಮೊತ್ತವನ್ನು ಪಡೆದು ಈ ಕಾರಿನ ಬುಕ್ಕಿಂಗ್‌ನ್ನು ಅನಧಿಕೃತವಾಗಿ ಶುರು ಮಾಡಿವೆ ಎಂದು ವರದಿಯಾಗಿದೆ.

ಈ ಆಲ್ಟ್ರೋಜ್ ರೇಸರ್ ಕಾರಿಗೆ ಹ್ಯುಂಡೈ ಐ20, ಮಾರುತಿ ಸುಜುಕಿ ಬಲೆನೊ ಹಾಗೂ ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ ಎಂದು ಅಂದಾಜಿಸಲಾಗಿದೆ. ಮುಂಬರುವ ಕೆಲವೇ ದಿನಗಳಲ್ಲಿ ನೂತನ ಕಾರು ಆಕರ್ಷಕ, ವಿನ್ಯಾಸ ಹಾಗೂ ವೈಶಿಷ್ಟ್ಯದೊಂದಿಗೆ ಬಿಡುಗಡೆಯಾಗಲಿದ್ದು, ಗ್ರಾಹಕರು ಸಹ ದೊಡ್ಡ ಮಟ್ಟದಲ್ಲಿ ಭರವಸೆಯನ್ನು ಇಟ್ಟುಕೊಂಡಿದ್ದಾರೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, May 30, 2024, 10:55 [IST]
English summary
Tata altroz racer car teaser video release expected price and features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+