ರತನ್ ಟಾಟಾ ಕಂಪನಿಗೆ ಮತ್ತೊಂದು ಗರಿ.. 'ಇಂಡಿಯಾ ಬುಕ್ ಆಫ್ ರೆಕಾರ್ಡ್' ಸೇರಿದ ಟಾಟಾದ ಹೊಸ ಕಾರು
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಆಲ್ಟ್ರೋಜ್ ರೇಸರ್ (Altroz Racer) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ನೂತನ ಕಾರು ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಕೆಲವೇ ದಿನಗಳ ಹಿಂದೆ, ತಮಿಳುನಾಡಿನ ಕೊಯಮತ್ತೂರು ಆಟೋಸ್ಪೋರ್ಟ್ಸ್ & ಟ್ರಾನ್ಸ್‌ಪೋರ್ಟ್ ಟ್ರಸ್ಟ್ (CoASTT) ರೇಸ್‌ಟ್ರಾಕ್‌ನ್ನು ವೇಗವಾಗಿ ಸುತ್ತುವ ಮೂಲಕ ಇತಿಹಾಸ ಪುಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.
ದೇಶದ ನಂಬರ್ ಒನ್ ರೇಸರ್ ನರೇನ್ ಕಾರ್ತಿಕೇಯನ್ (Narain Karthikeyan) ಅವರು 'ಟಾಟಾ ಆಲ್ಟ್ರೋಜ್ ರೇಸರ್' ಕಾರನ್ನು ರೇಸ್‌ಟ್ರಾಕ್‌ನಲ್ಲಿ ಓಡಿಸಿದ್ದರು. ನಿಗದಿತ ಗುರಿಯನ್ನು ಕೇವಲ 2 ನಿಮಿಷ 21.74 ಸೆಕೆಂಡುಗಳಲ್ಲಿ ಮುಟ್ಟಿದ್ದರು. ಈ ಮೂಲಕ ಭಾರತದ ವೇಗದ ಹ್ಯಾಚ್‌ಬ್ಯಾಕ್ (Fastest Indian Hatchback) ಎಂಬ ಹಿರಿಮೆಗೆ ಆಲ್ಟ್ರೋಜ್ ರೇಸರ್ ಪಾತ್ರವಾಗಿದ್ದು, ಜೂನ್ 5ರಂದು 'ಇಂಡಿಯಾ ಬುಕ್ ಆಫ್ ರೆಕಾರ್ಡ್'ಗೂ ಸೇರ್ಪಡೆಗೊಂಡಿತ್ತು.

ಸದ್ಯ ದೇಶೀಯವಾಗಿ ಖರೀದಿಗೆ ಸಿಗುವ ಟಾಟಾ ಆಲ್ಟ್ರೋಜ್ ರೇಸರ್ ಹ್ಯಾಚ್‌ಬ್ಯಾಕ್, ರೂ.9.49 ಲಕ್ಷದಿಂದ ರೂ.10.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಆರ್1, ಆರ್2 ಮತ್ತು ಆರ್3 ಎಂಬ ಮೂರು ರೂಪಾಂತರ (ವೇರಿಯೆಂಟ್)ಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಆಲ್ಟ್ರೊಜ್ ರೇಸರ್ ಹ್ಯಾಚ್‌ಬ್ಯಾಕ್ 1.2-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 118 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, ಕೇವಲ 11.3 ಸೆಕೆಂಡಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ ಕಾರು ಅಟಾಮಿಕ್ ಆರೆಂಜ್, ಅವೆನ್ಯೂ ವೈಟ್, ಪ್ಯೂರ್ ಗ್ರೇ ಬಣ್ಣ (ಕಲರ್)ಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್, ಆಟೋ ಎಸಿ ವೈರ್‌ಲೆಸ್ ಫೋನ್ ಚಾರ್ಜರ್, ಕ್ರೂಸ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ ಹಾಗೂ ಏರ್ ಪ್ಯೂರಿಫೈಯರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಟಾಟಾ ಆಲ್ಟ್ರೊಜ್ ರೇಸರ್ (Tata Altroz Racer) ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಈ ಕಾರಿಗೆ ಹ್ಯುಂಡೈ ಐ20 ಎನ್ ಲೈನ್ ಪ್ರಬಲ ಎದುರಾಳಿಯಾಗಿದ್ದು, ಹ್ಯುಂಡೈ ಎಕ್ಸ್‌ಟರ್, ರೆನಾಲ್ಟ್ ಕಿಗರ್ ಎಸ್‌ಯುವಿಗಳೊಂದಿಗೂ ಸ್ಪರ್ಧಿಸಬೇಕಾಗಿದೆ.
ಸಾಮಾನ್ಯ ಟಾಟಾ ಆಲ್ಟ್ರೊಜ್ (Tata Altroz) ಹ್ಯಾಚ್‌ಬ್ಯಾಕ್ ರೂ.6.65 ಲಕ್ಷದಿಂದ ರೂ.11.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್, ಡಿಸೇಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications