ಟಾಟಾ ಆಲ್ಟ್ರೊಜ್ ಕಾರಿಗಾಗಿ ಕ್ಯೂ ನಿಂತ ಜನ: ಮಾರಾಟದಲ್ಲಿ ಭಾರೀ ಬೆಳವಣಿಗೆ
ದೇಶದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata) ಹೆಚ್ಚು ಜನಪ್ರಿಯವಾಗಿದೆ. ಟಾಟಾ ಕಂಪನಿಯ ಜನಪ್ರಿಯ ಮಾದರಿಯ ಟಾಟಾ ಆಲ್ಟ್ರೊಜ್ (Tata Altroz) ಭಾರೀ ಬೇಡಿಕೆಯೊಂದಿಗೆ ಮಾರಾಟ ವಾಗುತ್ತಿದೆ. 2024ರ ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್ಟ್ರೊಜ್ ಮಾದರಿಯ ಮಾರಾಟದ ಅಂಕಿಅಂಶಗಳು ಅದ್ಭುತವಾಗಿದೆ.
2024ರ ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್ಟ್ರೊಜ್ ಮಾದರಿಯ 5,985 ಯುನಿಟ್‌ಗಳ ಮಾರಾಟವನ್ನು ಘೋಷಿಸಿದೆ. ಇದು ಹಿಂದಿನ ವರ್ಷದ ಅದೇ ತಿಂಗಳಲ್ಲಿ 3,862 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.55 ರಷ್ಟು ಬೆಳವಣಿಗೆಯನ್ನು ಕಂಡಿದೆ. ಕಳೆದ ತಿಂಗಳು ಭಾರತದಲ್ಲಿ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್‌ಗಳಲ್ಲಿ ಟಾಟಾ ಆಲ್ಟ್ರೊಜ್ ಅನ್ನು ಆರನೇ ಸ್ಥಾನ ಪಡೆದುಕೊಂಡಿದೆ.

ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ಸೇರಿದಂತೆ ವಿವಿಧ ಎಂಜಿನ್ ಆಯ್ಕೆಗಳನ್ನು ಒದಗಿಸುವ ಆಲ್ಟ್ರೊಜ್ ವ್ಯಾಪಕ ಸರಣಿಯ ಆದ್ಯತೆಗಳನ್ನು ಒದಗಿಸುತ್ತದೆ. ಇದು ಗ್ರಾಹಕರಿಗೆ ಬಹುಮುಖ ಆಯ್ಕೆಯಾಗಿದೆ. ಈ ಟಾಟಾ ಆಲ್ಟ್ರೊಜ್ ಕಾರಿನ ಎಕ್ಸ್ಇ, ಎಕ್ಸ್ಎಂ, ಎಕ್ಸ್ಎಂ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ದೊರೆಯುತ್ತದೆ.
ಟಾಟಾ ಆಲ್ಟ್ರೊಜ್ ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಪವರ್ ಟ್ರೈನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 86 PS ಪವರ್, 113 Nm ಪೀಕ್ ಟಾರ್ಕ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಟಾಟಾ ಆಲ್ಟ್ರೊಜ್ ಕಾರಿನಲ್ಲಿ 1.2 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 PS ಪವರ್, 140 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

ಮತ್ತೊಂದು, 1.5 - ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 90 PS ಗರಿಷ್ಠ ಪವರ್, 200 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಡುಯಲ್ ಕ್ಲಚ್ (DCT) ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.
ಸಿಎನ್‌ಜಿ ರೂಪಾಂತರದಲ್ಲಿ 1.2 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಪಡೆದಿದ್ದು, ಈ ಎಂಜಿನ್ 73.5 PS ಪವರ್ ಮತ್ತು 103 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಮಾತ್ರ ಸಿಗುತ್ತದೆ.

ಮೈಲೇಜ್ ವಿಚಾರ ಇದರ ಪೆಟ್ರೋಲ್ ಹಾಗೂ ಡೀಸೆಲ್ ರೂಪಾಂತರಗಳು ಕ್ರಮವಾಗಿ 18.50 kmpl - 23.64 kmpl, ಸಿಎನ್‌ಜಿ ರೂಪಾಂತರಗಳು 26.20 km/kg ಮೈಲೇಜ್ ನೀಡುತ್ತವೆ. ಈ ಕಾರಿನಲ್ಲಿ 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್ ಮತ್ತು ಸಿಂಗಲ್ ಪೇನ್ ಸನ್‌ರೂಫ್ ಮತ್ತು 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ.
ಸುರಕ್ಷತೆಯ ದೃಷ್ಟಿಯಿಂದಲ್ಲೂ ಈ ಟಾಟಾ ಆಲ್ಟ್ರೊಜ್ ಅತ್ಯುತ್ತಮವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, ISOFIX ಚೈಲ್ಡ್-ಸೀಟ್ ಆಂಕರ್ಸ್, ಆಟೋ ಪಾರ್ಕ್ ಲಾಕ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಹುಂಡೈ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಟೊಯೊಟಾ ಗ್ಲಾಂಝಾ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications