TATA: ರತನ್ ಟಾಟಾ ಕಂಪನಿಯಿಂದ ದೊಡ್ಡ ಸಿಹಿಸುದ್ದಿ.. 2 ಲಕ್ಷ ಬೆಲೆ ಇಳಿಕೆ.. ಈಗ 4.99 ಲಕ್ಷಕ್ಕೆ ಹೊಸ ಕಾರು!
ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ರತನ್ ಟಾಟಾ ಒಡೆತನದ ಕಂಪನಿಯು ಈ ಹಬ್ಬದ ಋತುವಿನಲ್ಲಿ ಮಾರಾಟ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಿದೆ. ಅದರ ಭಾಗವಾಗಿ ಇಂದಿನಿಂದ (ಸೆಪ್ಟೆಂಬರ್ 9) 'ಫೆಸ್ಟಿವಲ್ ಆಫ್ ಕಾರ್ಸ್' ಮೇಳ ಆಯೋಜಿಸಿದ್ದು, ಎಲ್ಲ ಇಂಧನ ಚಾಲಿತ ಕಾರುಗಳ ಬೆಲೆಯನ್ನು ನಿರ್ದಿಷ್ಟ ಅವಧಿಗೆ ಕಡಿತಗೊಳಿಸಿದೆ. ಈ ಮೂಲಕ ಹೊಸ ಕಾರು ಖರೀದಿ ಮಾಡಬೇಕು ಎಂದುಕೊಳ್ಳುವ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಟಾಟಾ ಮೋಟಾರ್ಸ್, ಇಂಧನ ಚಾಲಿತ ಕಾರುಗಳ ದರವನ್ನು ರೂ.2.05 ಲಕ್ಷದವರೆಗೆ ಇಳಿಕೆ ಮಾಡಿದೆ. ಜೊತೆಗೆ ರೂ.45,000ದವರೆಗೆ ವಿನಿಮಯ ಬೋನಸ್‌ನ್ನು (Exchange Bonus) ಘೋಷಣೆ ಮಾಡಿದೆ. ಅಕ್ಟೋಬರ್ 31, 2024ರವರೆಗೆ ಈ ಕೊಡುಗೆಗಳು ಮಾನ್ಯವಾಗಿರಲಿದೆ. ಬೆಲೆ ಕಡಿಮೆಯಾಗಿರುವ ಹಿನ್ನೆಲೆ, ಟಿಯಾಗೊ ರೂ.4.99 ಲಕ್ಷ, ಆಲ್ಟ್ರೋಜ್ ರೂ.6.49 ಲಕ್ಷ, ನೆಕ್ಸಾನ್ ರೂ.7.99 ಲಕ್ಷ, ಹ್ಯಾರಿಯರ್ ರೂ.14.99 ಲಕ್ಷ ಮತ್ತು ಸಫಾರಿ ರೂ.15.49 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಹೊಂದಿವೆ.

ಪ್ರಸ್ತುತ ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19 ರಿಂದ 26.49 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು.
ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. 18.50 ರಿಂದ 26.20 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿಯೂ 5 ಜನರು ಸಂಚರಿಸಬಹುದು.

ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಎಸ್‌ಯುವಿಯಾಗಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17.01 ದಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ ಸಹ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಾಟಾ ಹ್ಯಾರಿಯರ್ (Tata Harrier) ಗಟ್ಟಿಮುಟ್ಟಾದ ಎಸ್‌ಯುವಿ ಎಂದೇ ಖ್ಯಾತಿಗಳಿಸಿದೆ. 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 14.60 ರಿಂದ 16.80 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಜನರು ಓಡಾಟ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಸಫಾರಿ (Tata Safari) ಕೂಡ ಪ್ರಮುಖ ಎಸ್‌ಯುವಿಯಾಗಿದ್ದು, 6/ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಸಿಗುತ್ತದೆ. 2-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications