Tata: ಸದ್ದಿಲ್ಲದೇ ಗ್ರಾಹಕರಿಗೆ ಆಘಾತ ಕೊಟ್ಟ ಟಾಟಾ!

ಭಾರತದ ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಇದೀಗ ತನ್ನ ಗ್ರಾಹಕರಿಗೆ ಸದ್ದಿಲ್ಲದೇ ಆಘಾತ ನೀಡಿದ್ದು, ಎಲೆಕ್ಟ್ರಿಕ್ ವಾಹನಗಳು (Electric Vehicles - EVs) ಸೇರಿದಂತೆ ಎಲ್ಲ ಪ್ರಯಾಣಿಕ ವಾಹನಗಳ (Passenger Vehicles) ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ.

ನೂತನ ದರಗಳು ಸರಾಸರಿ 0.7% ಏರಿಕೆಯಾಗಿದ್ದು, ಹೊಸ ಬೆಲೆಗಳು ಫೆಬ್ರವರಿ 1, 2024ರಿಂದ ಅನ್ವಯವಾಗಲಿದೆ. ಇನ್‌ಪುಟ್ ಒಳಗೊಂಡಂತೆ ವಿವಿಧ ಖರ್ಚುಗಳನ್ನು ಸರಿದೂಗಿಸಲು ಕಂಪನಿಯು ಸಣ್ಣ ಪ್ರಮಾಣದಲ್ಲಿ ಈ ದರ ಹೆಚ್ಚಳ ಮಾಡಿದೆ ಎನ್ನಲಾಗಿದೆ. ಆದರೆ, ಯಾವ ಕಾರುಗಳ ಬೆಲೆ ಎಷ್ಟು ಅಧಿಕಗೊಳ್ಳಲಿದೆ ಎನ್ನುವುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲ.

Tata Cars Price Hike: February 1, 2024 Details

ಟಾಟಾದ ಜನಪ್ರಿಯ ಕಾರುಗಳಾದ ಟಿಯಾಗೊ (Tiago), ನೆಕ್ಸಾನ್ (Nexon), ಹ್ಯಾರಿಯರ್ (Harrier) ಹಾಗೂ ಸಫಾರಿ (Safari) ಕಾರುಗಳ ಬೆಲೆ ಹೆಚ್ಚಳಗೊಳ್ಳಬಹುದು. ಆದರೆ, ಕೆಲವೇ ದಿನಗಳ ಹಿಂದೆ ರೂ.11 ಲಕ್ಷ ಆರಂಭಿಕ (ಎಕ್ಸ್ ಶೋರೂಂ) ಬೆಲೆಯಲ್ಲಿ ಬಿಡುಗಡೆಗೊಂಡ ಟಾಟಾ ಪಂಚ್ ಇವಿ (Tata Punch EV) ದರ ಏರಿಕೆಯಾಗುವುದಿಲ್ಲ ಎಂದು ತಿಳಿದುಬಂದಿದೆ. ಆದರೆ, ಖಚಿತತೆ ಇಲ್ಲ.

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಪಂಚ್ ಇವಿ, ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 25 kWh ಬ್ಯಾಟರಿ ಪ್ಯಾಕ್ ಹೊಂದಿರುವ ಕಾರು, ಪೂರ್ತಿ ಚಾರ್ಜ್ ನಲ್ಲಿ 315 ಕಿ.ಮೀ, 35 kWh ಬ್ಯಾಟರಿ ಪ್ಯಾಕ್ ಪಡೆದಿರುವ ಕಾರು, 421 km ರೇಂಜ್ (ಮೈಲೇಜ್) ನೀಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Tata Cars Price Hike: February 1, 2024 Details

ಟಾಟಾ ಸಫಾರಿ (Tata Safari) ಎಸ್‌ಯುವಿ, ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಸ್ಮಾರ್ಟ್ (ಒ), ಪ್ಯೂರ್ (ಒ), ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಡ್ವೆಂಚರ್ ಪ್ಲಸ್ ಡಾರ್ಕ್ ಒಳಗೊಂಡಂತೆ 10 ರೂಪಾಂತರದ ಆಯ್ಕೆಯಲ್ಲಿ ಸಿಗುವ ಈ ಕಾರು, 2-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇಯಂತಹ ಫೀಚರ್ಸ್ ಒಳಗೊಂಡಿದೆ.

ಟಾಟಾ ಹ್ಯಾರಿಯರ್ (Tata Harrier), ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದುಕೊಂಡಿದೆ. ಈ ಎಸ್‌ಯುವಿ, 2.0-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 170 hp ಪವರ್ ಹಾಗೂ 350 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

Tata Cars Price Hike: February 1, 2024 Details

ಟಾಟಾದ ಎಂಟ್ರಿ ಲೆವೆಲ್ ಟಿಯಾಗೊ (Tiago) ಕುರಿತು ಹೇಳುವುದಾದರೆ, ಇದು ರೂ.5.60 ಲಕ್ಷದಿಂದ ರೂ.8.20 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಆಯ್ಕೆಯನ್ನು ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 19.43 kmpl - 20.01 kmpl, ಸಿಎನ್‌ಜಿ ರೂಪಾಂತರಗಳು 26.49 km/kg ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, January 22, 2024, 18:15 [IST]
English summary
Tata cars price hike february 1 2024 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+