ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರನ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!

ಹ್ಯುಂಡೈ ಕ್ರೆಟಾ ಜನಪ್ರಿಯ ಮಿಡ್-ಸೈಜ್ (ಮಧ್ಯಮ ಗಾತ್ರ) ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ಕಾರು ಬಿಡುಗಡೆಯಾಗಿ 3 ತಿಂಗಳೊಳಗೆ 1 ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡು ದಾಖಲೆಯನ್ನು ನಿರ್ಮಿಸಿತ್ತು. ಇದಕ್ಕೆ ದೇಶೀಯ ಮಾರುಕಟ್ಟೆಯಲ್ಲಿ ಪೈಪೋಟಿ ನೀಡಲು ಟಾಟಾ ಹಾಗೂ ಸಿಟ್ರನ್ ಕಂಪನಿಗಳು ತಮ್ಮದೇಯಾದ ಸಿದ್ಧತೆಯಲ್ಲಿ ತೊಡಗಿವೆ.

ಬಹುತೇಕ ಈ ವರ್ಷವೇ ಟಾಟಾ ಮೋಟಾರ್ಸ್ (Tata Motors), ಹ್ಯುಂಡೈ ಕ್ರೆಟಾಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ಪರಿಚಯಿಸಬಹುದು. ಈ ಕಾರು ಇಂಧನ (ಫ್ಯುಯೆಲ್) ಹಾಗೂ ಎಲೆಕ್ಟ್ರಿಕ್ ಪವರ್ ಟ್ರೇನ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುವ ಸಾಧ್ಯತೆಯಿದ್ದು, ಹಲವಾರು ಬಾರಿ ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಕಂಡುಬಂದಿದೆ.

ಇತ್ತೀಚೆಗೆ ಚಾರ್ಜಿಂಗ್ ಸ್ಟೇಷನ್‌ನಲ್ಲಿ ನಿಂತಿದ್ದ ಟಾಟಾ ಕರ್ವ್ ಎಸ್‌ಯುವಿ ಫೋಟೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದವು. ಈ ಕಾರು ಸಹ ಪಂಚ್ ಇವಿಯಂತೆ ಫ್ರಂಟ್ (ಮುಂಭಾಗ) ಫೆಂಡರ್‌ನಲ್ಲಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿತ್ತು. ನೂತನ ಕರ್ವ್ ಎಸ್‌ಯುವಿಯು ದೊಡ್ಡ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 500 ಕಿ.ಮೀ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.

ಈ ಟಾಟಾ ಕರ್ವ್ ಇಂಧನ ಚಾಲಿತ ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿರುವ ನಿರೀಕ್ಷೆಯಿದ್ದು, 6-ಸ್ಪೀಡ್ ಮ್ಯಾನುವಲ್ & ಡಿಸಿಟಿ ಗೇರ್ ಬಾಕ್ಸ್ ಅನ್ನು ಪಡೆದಿರಬಹುದು. 4-ಸ್ಪೋಕ್ ಸ್ಟೀರಿಂಗ್ ವೀಲ್, 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು.

ಸಿಟ್ರನ್ (Citroen) ಕಂಪನಿಯು ಹ್ಯುಂಡೈ ಕ್ರೆಟಾಗೆ ಎದುರಾಳಿಯಾಗಿ ನೂತನ ಕಾರನ್ನು ತಯಾರಿಸುತ್ತಿದ್ದು, ಇದೇ ವರ್ಷದ ದ್ವಿತೀಯಾರ್ಧದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು. ಹೊಸ ಕಾರಿಗೆ ಯಾವುದೇ ಹೆಸರನ್ನು ಇಟ್ಟಿಲ್ಲ. 'ಸಿಟ್ರನ್ ಸಿ3 ಎಕ್ಸ್' ಎಂದು ನಾಮಕರಣ ಮಾಡಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಕೂಡ ಸಿ3 ಏರ್‌ಕ್ರಾಸ್‌ ಪ್ಲಾಟ್‌ಫಾರ್ಮ್ ಆಧರಿಸಿರಲಿದೆ ಎನ್ನಲಾಗಿದೆ.

ನೂತನ ಸಿಟ್ರನ್ ಎಸ್‌ಯುವಿಯು ಸಿ3 ಏರ್‌ಕ್ರಾಸ್‌ನಂತೆಯೇ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 110 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 205 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಬಹುದು ಎಂದು ಹೇಳಲಾಗಿದೆ. 10.2-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್, ರೂ.11 ಲಕ್ಷದಿಂದ ರೂ.20.15 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಹೊಂದಿದ್ದು, 17.4 ರಿಂದ 21.8 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, April 24, 2024, 10:54 [IST]
English summary
Tata citroen company launch hyundai creta rival car 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+