ಶೀಘ್ರ ಈ ಜನಪ್ರಿಯ ಕಂಪನಿಯ ಕಾರುಗಳು ಬಿಡುಗಡೆ.. ಇವುಗಳಿಗೆ ಶೋರೂಂ ಮುಂದೆ ಸಾಲು ಕಟ್ಟುವುದು ಪಕ್ಕಾ!
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಟಾಟಾ ಮೋಟಾರ್ಸ್, ಮಾರುತಿ ಸುಜುಕಿ, ಮಹೀಂದ್ರಾ ಹಾಗೂ ಹ್ಯುಂಡೈ ಸೇರಿದಂತೆ ವಿವಿಧ ವಾಹನ ತಯಾರಕ ಕಂಪನಿಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿವೆ. ಸೆಪ್ಟೆಂಬರ್ (2024) ಮಹತ್ವದ ತಿಂಗಳಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಚಾಲಿತ ಟಾಟಾ ಕರ್ವ್ (Tata Curvv) ಮತ್ತು ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಕಾರುಗಳು ಬಿಡುಗಡೆಯಾಗಲಿವೆ.
ಮೊದಲಿಗೆ ಟಾಟಾ ಕರ್ವ್ (Tata Curvv) ಕಾರಿನ ಬಗ್ಗೆ ಮಾತನಾಡೋಣ. ಇದೊಂದು ಕೂಪೆ ಎಸ್‌ಯುವಿಯಾಗಿದ್ದು, ಈ ಹಿಂದೆ ಎಲೆಕ್ಟ್ರಿಕ್ ಮಾದರಿಯನ್ನು (ಮಾಡೆಲ್) ಪರಿಚಯಿಸಲಾಗಿತ್ತು. ಇಂಧನ ಚಾಲಿತ ಕಾರು ಸೆಪ್ಟೆಂಬರ್ 2ರಂದು ಮಾರಾಟಕ್ಕೆ ಬರಲಿದೆ. ಅಂದೇ ಅಧಿಕೃತ ಬೆಲೆಯನ್ನು ಘೋಷಣೆ ಮಾಡಲಾಗುತ್ತದೆ. ಈಗಾಗಲೇ, ಈ ಕಾರಿನ ಕುರಿತಂತೆ ಎಲ್ಲ ವಿವರಗಳು ಬಹಿರಂಗಗೊಂಡಿವೆ. ನೂತನ ಕರ್ವ್ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್ ಸೇರಿದಂತೆ 6 ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ.

ಟಾಟಾ ಕರ್ವ್ 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ನವೀನವಾಗಿರುವ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.
ನೂತನ ಕರ್ವ್ ಎಸ್‌ಯುವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮುಂಬರಲಿರುವ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಎಸ್‌ಯುವಿ ಹಲವು ನವೀಕರಣಗಳನ್ನು ಪಡೆದುಕೊಂಡು ಸೆಪ್ಟೆಂಬರ್ 9ರಂದು ಮಾರಾಟಕ್ಕೆ ಬರಲಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತ ಗ್ರಾಹಕರು, ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಹತ್ತಿರದ ಶೋರೂಂಗೆ ತೆರಳಿ, ರೂ.25,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು.
ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (2024) ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಹೊಸದಾದ ಕ್ವಾಡ್-ಬೀಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಾರ್ಕ್ ಕ್ರೋಮ್ ಗ್ರಿಲ್, ಹೆಚ್-ಆಕಾರಕ್ಕೆ ಹೋಲುವ ಎಲ್ಇಡಿ ಡಿಆರ್‌ಎಲ್, ಕನೆಕ್ಟೆಡ್ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. ಎಕ್ಸಿಕ್ಯೂಟಿವ್, ಪ್ರೆಸ್ಟೀಜ್, ಪ್ಲಾಟಿನಂ ಹಾಗೂ ಸಿಗ್ನೇಚರ್ ಎಂಬ 4 ರೂಪಾಂತರದ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಕಾರು 6 - 7 ಆಸನ ಆಯ್ಕೆಯಲ್ಲಿಯೂ ದೊರೆಯುತ್ತದೆ. 1.5-ಲೀಟರ್ ಟರ್ಬೊ ಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್‌ನ್ನು ಪಡೆದಿದೆ ಎಂದು ವರದಿಯಾಗಿದ್ದು, ರೂ.17 ಲಕ್ಷದಿಂದ ರೂ 23 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎನ್ನಲಾಗಿದೆ. ಈ ಕಾರಿಗೆ ಮಹೀಂದ್ರಾ ಸ್ಕಾರ್ಪಿಯೋ-ಎನ್, ಟಾಟಾ ಸಫಾರಿ ಮತ್ತು ಎಂಜಿ ಹೆಕ್ಟರ್ ಪ್ಲಸ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications