TATA: ಟಾಟಾದ ಹೊಸ ಕಾರು ಆ.7ರಂದು ಬಿಡುಗಡೆ.. ನಿರೀಕ್ಷೆಗೂ ಮೀರಿದ ವಿಶೇಷತೆಗಳಿರಲಿವೆ, ದುಡ್ಡು ಕೂಡಿಡಿ!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಟಿಗೂರ್, ಪಂಚ್ ಹಾಗೂ ನೆಕ್ಸಾನ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. 2024ರ ಹಣಕಾಸು ವರ್ಷದಲ್ಲಿ ಕಂಪನಿಯು ಶೇಕಡ 13.63% ಮಾರುಕಟ್ಟೆ ಪಾಲನ್ನು ಹೊಂದಿದ್ದು, ಪ್ರಮುಖ 10 ಕಾರು ತಯಾರಕ ಸಂಸ್ಥೆಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಸದ್ಯ, ಹೊಚ್ಚ ಹೊಸ ಕರ್ವ್ ಕಾರಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ.

ಟಾಟಾ ಮೋಟಾರ್ಸ್, ನೂತನ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ಆಗಸ್ಟ್ 7ರಂದು ಪರಿಚಯಿಸಲಾಗುವುದು ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ. 'ಕೂಪೆ' ವಿಭಾಗದಲ್ಲಿ ಕಂಪನಿಯಿಂದ ಬರುತ್ತಿರುವ ಮೊಟ್ಟ ಮೊದಲ ಕಾರು ಇದಾಗಿದ್ದು, ಎಲೆಕ್ಟ್ರಿಕ್ ಹಾಗೂ ಇಂಧನ ಚಾಲಿತ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ. ಆದಾಗ್ಯೂ ಎರಡು ಮಾದರಿ (ಮಾಡೆಲ್)ಗಳ ಬೆಲೆಯನ್ನು ಒಂದೇ ದಿನ ಪ್ರಕಟಿಸುವ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

Tata Curvv Car Launch In August 7 Expected Price And Features

ಮೊದಲಿಗೆ ಟಾಟಾ ಕರ್ವ್ ಇವಿ (ಎಲೆಕ್ಟ್ರಿಕ್ ಕಾರು) ಬಗ್ಗೆ ಮಾತನಾಡೋಣ. ಈ ಕಾರು ಬೃಹತ್ ಗಾತ್ರದ ಬ್ಯಾಟರಿಯನ್ನು ಪಡೆದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 400 ರಿಂದ 500 ಕಿ.ಮೀ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ. ಸಿಂಗಲ್ ಮೋಟಾರ್ ಮತ್ತು ಡುಯಲ್ ಮೋಟಾರ್ ಸೆಟಪ್‌ಗಳಲ್ಲಿ ಕೂಡ ಸಿಗಬಹುದು ಎನ್ನಲಾಗಿದೆ.

ಹೊಚ್ಚ ಹೊಸ ಟಾಟಾ ಕರ್ವ್ ಇವಿ ಅತ್ಯಂತ ಕೈಗೆಟುಕುವ ದರದಲ್ಲಿ ಖರೀದಿಗೆ ದೊರೆಯಲಿದ್ದು, ಸರಿ ಸುಮಾರು ರೂ.18 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರುವ ಸಾಧ್ಯತೆಯಿದೆ. ಈ ಎಲೆಕ್ಟ್ರಿಕ್ ಕಾರಿಗೆ ಮುಂಬರುವ ತಿಂಗಳಲ್ಲಿ ದೇಶೀಯ ಮಾರುಕಟ್ಟೆಗೆ ಬರಲಿರುವ ಮಾರುತಿ ಸುಜುಕಿ ಇವಿಎಕ್ಸ್ ಹಾಗೂ ಹ್ಯುಂಡೈ ಕ್ರೆಟಾ ಇವಿ ಮಾದರಿಗಳು ಪ್ರಬಲವಾದ ಸ್ಪರ್ಧೆಯೊಡ್ಡಲಿವೆ ಎಂದು ಹೇಳಲಾಗಿದೆ.

Tata Curvv Car Launch In August 7 Expected Price And Features

ಇಂಧನ ಚಾಲಿತ ಟಾಟಾ ಕರ್ವ್ ಎಸ್‌ಯುವಿಯು 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಪಡೆದಿರಲಿದೆ. ಜೊತೆಗೆ 6-ಸ್ವೀಡ್ ಮ್ಯಾನುವಲ್ ಅಥವಾ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದ್ದು, ರೂ.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎನ್ನಲಾಗಿದೆ.

ನೂತನ ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ಕರ್ವ್ ಕಾರುಗಳು ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿರಲಿವೆ. ಅದು ಬಹುತೇಕ ನೆಕ್ಸಾನ್ (Nexon) ಎಸ್‌ಯುವಿಗೆ ಹೋಲುತ್ತದೆ. ಈ ಹಿಂದೆ, ಕರ್ವ್ ಕಾರು ಪ್ರಾಯೋಗಿಕ ಸಂಚಾರ ನಡೆಸುವ ವೇಳೆಯಲ್ಲಿ ವಿವಿಧ ಫೋಟೋಗಳನ್ನು ಸೆರೆಹಿಡಿಯಲಾಗಿತ್ತು. ಅವುಗಳಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿರುವುದನ್ನು ಕಾಣಬಹುದು.

Tata Curvv Car Launch In August 7 Expected Price And Features

ಈ ಕಾರುಗಳು ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿರಲಿವೆ. 12-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ವಿನ್-ಸ್ಪೋಕ್ ಸ್ಟೀರಿಂಗ್ ವೀಲ್, ಹೀಟಡ್-ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 15, 2024, 10:39 [IST]
English summary
Tata curvv car launch in august 7 expected price and features
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+