ಪ್ರತಿಸ್ಪರ್ಧಿಗಳಿಗೆ ನಡುಕ.. ಟಾಟಾದ ಹೊಸ ಪೆಟ್ರೋಲ್-ಡೀಸೆಲ್ ಕಾರು ಅನಾವರಣ, ಸೆ.2ರಂದು ಬೆಲೆ ಘೋಷಣೆ
ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಇಂದು ದೇಶೀಯ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ಕರ್ವ್ ಇವಿಯನ್ನು (Curvv EV) ಅದ್ದೂರಿಯಾಗಿ ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಕಾರು ರೂ.17.49 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ಹೊಚ್ಚ ಹೊಸ 'ಕರ್ವ್' ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಾಗಲಿದ್ದು, ಆ ಕಾರನ್ನು ಕೂಡ ಅನಾವರಣ ಮಾಡಲಾಗಿದೆ. ಆದಾಗ್ಯೂ ನೂತನ ಕಾರು ಸೆಪ್ಟೆಂಬರ್ 2ರಂದು ಮಾರಾಟಕ್ಕೆ ಬರಲಿದ್ದು, ಅಂದೇ ಬೆಲೆಯನ್ನು ಘೋಷಿಸಲಾಗುತ್ತದೆ.
ವಿನ್ಯಾಸ: ಹೊಸ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಯಾಗಿದ್ದು, ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಮುಂಭಾಗ (ಫ್ರಂಟ್) - ಹಿಂಭಾಗ (ರೇರ್) ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು ಹಾಗೂ ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. ಜೊತೆಗೆ ಇಳಿಜಾರಾದ ರೂಫ್‌ಲೈನ್‌ನ್ನು ಪಡೆದಿದೆ ಒಳಭಾಗದ ಕ್ಯಾಬಿನ್ ಸಹ ಹೆಚ್ಚು ಅತ್ಯಾಧುನಿಕವಾಗಿದ್ದು, ನೋಡುಗರನ್ನು ಸೆಳೆಯುತ್ತದೆ.

ರೂಪಾಂತರ & ಆಸನ ಆಯ್ಕೆ: ಈ ಕಾರು ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎ ಎಂಬ 6 ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದೆ. 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಜನರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ತೆರಳಬಹುದು.
ಕಾರ್ಯಕ್ಷಮತೆ: ಟಾಟಾ ಕರ್ವ್ 3 ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಹೊಸದಾದ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ವೈಶಿಷ್ಟ್ಯಗಳು: ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಬೆಲೆ & ಪ್ರತಿಸ್ಪರ್ಧಿ ಕಾರುಗಳು: ಟಾಟಾ ಕರ್ವ್ ರೂ.10 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಸೆಪ್ಟೆಂಬರ್ 2ರಂದು ಸ್ಪಷ್ಟ ಉತ್ತರ ಸಿಗಲಿದೆ. ಈ ಕಾರಿಗೆ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ನೇರ ಎದುರಾಳಿಯಾಗಲಿದೆ. ಇನ್ನುಳಿದಂತೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳು ಸಹ ಪ್ರಬಲವಾದ ಸ್ಪರ್ಧೆಯೊಡ್ಡಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications