Tata Curvv: ಮಧ್ಯಮ ವರ್ಗದವರ ಲಂಬೋರ್ಗಿನಿ.. ಮತ್ತೊಮ್ಮೆ ಕಾಣಿಸಿಕೊಂಡ ಟಾಟಾ ಕರ್ವ್, ಬೆಲೆ.. ವಿಶೇಷತೆಗಳೇನು?

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂದಿದೆ. ಜೂನ್ ಬಳಿಕ ದೇಶೀಯ ಮಾರುಕಟ್ಟೆಯಲ್ಲಿ ಕರ್ವ್ (Curvv) ಕೂಪ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ಈ ಕಾರು ಪರೀಕ್ಷಾರ್ಥ ಸಂಚಾರ ನಡೆಸುವಾಗ ಮತ್ತೊಮ್ಮೆ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.

ಮುಂಬರಲಿರುವ ಟಾಟಾ ಕರ್ವ್ (Tata Curvv) ಕಾರನ್ನು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಪ್ರದರ್ಶಿಸಲಾಗಿತ್ತು. ಈಗಾಗಲೇ, ಕರ್ವ್ ಎಸ್‌ಯುವಿ ಉತ್ಪಾದನೆಯಗೆ ಸಿದ್ಧವಾಗಿದೆ. ಆದರೂ ಟಾಟಾ ಕಂಪನಿಯು ಪ್ರಾಯೋಗಿಕ ಓಡಾಟದ ವೇಳೆ ಈ ಕಾರಿನ ವಿನ್ಯಾಸ (ಡಿಸೈನ್)ವನ್ನು ಮರೆಮಾಚುತ್ತಿದೆ. ನೂತನ ಕರ್ವ್ ಎಸ್‌ಯುವಿ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರನ್ನು ಸೆಳೆಯುತ್ತಿದೆ.

Tata Curvv Car Spied Again Expected Price Launch Date And Features

ಪರೀಕ್ಷಾರ್ಥ ಸಂಚಾರದ ಸಂದರ್ಭದಲ್ಲಿ ಕಂಡುಬಂದ ಹೊಸ ಕರ್ವ್ ಕಾರಿನ ಮುಂಭಾಗ (ಫ್ರಂಟ್)ದಲ್ಲಿರುವ ಫಾಸಿಯಾ, ಎಲ್‌ಇಡಿ ಲೈಟ್ ಬಾರ್ ನೊಂದಿಗೆ ಸಂಪರ್ಕಿತಗೊಂಡಿದೆ. ಅತ್ಯಾಧುನಿಕ ಹೆಡ್‌ಲ್ಯಾಂಪ್ಸ್ ಕೂಡ ಪಡೆದಿದೆ. ಬದಿ (ಸೈಡ್) ವಿನ್ಯಾಸವು ಅತ್ಯುತ್ತಮವಾಗಿದ್ದು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ ಅನ್ನು ಹೊಂದಿದೆ. ಹಿಂಭಾಗದ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ.

ಹೊಸ ಟಾಟಾ ಕರ್ವ್ ಕೂಪ್ ಎಸ್‌ಯುವಿ, ಒಳಭಾಗವು ಅತ್ಯುತ್ತಮ ವಿನ್ಯಾಸವನ್ನು ಪಡೆದಿದೆ. ಜೊತೆಗೆ ಹ್ಯಾರಿಯರ್, ಸಫಾರಿ ಮತ್ತು ನೆಕ್ಸಾನ್‌ನಂತಹ ಎಸ್‌ಯುವಿಗಳಂತೆಯೂ ವೈಶಿಷ್ಟ್ಯವನ್ನು ಪಡೆದಿರುವ ನಿರೀಕ್ಷೆಯಿದೆ. ಟಾಟಾ ಲೋಗೋವನ್ನು ಹೊಂದಿರುವ 4 - ಸ್ಪೋಕ್ ಸ್ಟೀರಿಂಗ್ ವೀಲ್, 12.3 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 - ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ.

Tata Curvv Car Spied Again Expected Price Launch Date And Features

ಈ ಕಾರು, ಇಂಧನ ಹಾಗೂ ಎಲೆಕ್ಟ್ರಿಕ್ ಪವರ್ ಟ್ರೈನ್ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಇದರ 1.2 - ಲೀಟರ್ ಟಿಜಿಡಿಐ ಪೆಟ್ರೋಲ್ ಎಂಜಿನ್, 125 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 225 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಲಿದ್ದು, 6 - ಸ್ವೀಡ್ ಮ್ಯಾನುವಲ್ ಮತ್ತು ಡಿಸಿಟಿ ಗೇರ್ ಬಾಕ್ಸ್ ಹೊಂದಿರುವ ನಿರೀಕ್ಷೆಯಿದೆ.

ಮತ್ತೊಂದು 1.5 - ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, ಇದು 115 ಪಿಎಸ್ ಪವರ್ ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕಬಹುದು. ಎಲೆಕ್ಟ್ರಿಕ್ ರೂಪಾಂತರದಲ್ಲಿ ಬರುವ ಟಾಟಾ ಕರ್ವ್ ಕೂಪ್ ಎಸ್‌ಯುವಿ, ಶಕ್ತಿಯುತ ಬ್ಯಾಟರಿ ಪ್ಯಾಕ್ ಪಡೆದಿರಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ.

Tata Curvv Car Spied Again Expected Price Launch Date And Features

ಹೊಸ ಟಾಟಾ ಕರ್ವ್ ಕಾರು, ಗರಿಷ್ಠ ಸುರಕ್ಷತಾ ವೈಶಿಷ್ಟ್ಯದೊಂದಿಗೆ ಮಾರುಕಟ್ಟೆಗೆ ಬರಬಹುದು. ಪ್ರಮುಖವಾಗಿ 6 - ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360 - ಡಿಗ್ರಿ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಈ ಕಾರು ರೂ.11 ಲಕ್ಷ (ಎಕ್ಸ್ ಶೋರೂಂ) ಬೆಲೆಗೆ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Cardekho

Article Published On: Wednesday, April 10, 2024, 10:12 [IST]
English summary
Tata curvv car spied again expected price launch date features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+