TATA: ಟಾಟಾದ ಈ ಹೊಸ ಕಾರು ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಮಾರಾಟ: ಪ್ರತಿಸ್ಪರ್ಧಿಗಳಿಗೆ ನಡುಕ!
ಭಾರತದ ಕಾರು ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ದೊಡ್ಡಮಟ್ಟದಲ್ಲಿ ಬೇಡಿಕೆಯಿದೆ. ಇವುಗಳು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಆದರಲ್ಲೂ ಆಗಸ್ಟ್‌ನಲ್ಲಿ ಮಾರಾಟ ಬಂದ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಯಾಗಿದ್ದರೂ, ಕಾಂಪ್ಯಾಕ್ಟ್ ಎಸ್‌ಯುವಿಗಳಿಗೆ ಪ್ರಬಲವಾದ ಸ್ಪರ್ಧೆಯೊಡುತ್ತಿದೆ. ಇತ್ತೀಚೆಗೆ ಸೆಪ್ಟೆಂಬರ್ (2024) ತಿಂಗಳ 'ಕಾಂಪ್ಯಾಕ್ಟ್ ಎಸ್‌ಯುವಿ' ಮಾರಾಟದ ಅಂಕಿಅಂಶಗಳು ಪ್ರಕಟಗೊಂಡಿದ್ದು, ಟಾಟಾ ಕರ್ವ್ ಕಾರುಗಳು ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಸೆಪ್ಟೆಂಬರ್-2024) ಬರೋಬ್ಬರಿ 4763 ಯುನಿಟ್ ಟಾಟಾ ಕರ್ವ್ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿದೆ. ಇದೇ ಆಗಸ್ಟ್‌ನಲ್ಲಿ ಮಾರಲಾದ 3455 ಯುನಿಟ್‌ಗೆ ಹೋಲಿಕೆ ಮಾಡಿದರೆ ತಿಂಗಳಿನಿಂದ ತಿಂಗಳಿಗೆ (MoM) ಶೇಕಡ 37.85% ಬೆಳವಣಿಗೆಯಾಗಿದೆ. ಈ ಮೂಲಕ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕರ್ವ್ ಕಾರು ಹೋಂಡಾ ಎಲಿವೇಟ್ (1960 ಯುನಿಟ್), ಸ್ಕೋಡಾ ಕುಶಾಕ್ (1767 ಯುನಿಟ್) ಮತ್ತು ಪೋಕ್ಸ್‌ವ್ಯಾಗನ್ ಟೈಗನ್ (1611 ಯುನಿಟ್) ಮಾದರಿಗಳನ್ನು (ಮಾಡೆಲ್) ಹಿಂದಿಕ್ಕಿದೆ.

ಆದರೆ, ಟಾಟಾ ಕರ್ವ್ ಎಸ್‌ಯುವಿಗಿಂತ ಹ್ಯುಂಡೈ ಕ್ರೆಟಾ (15902 ಯುನಿಟ್), ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (10267 ಯುನಿಟ್), ಕಿಯಾ ಸೆಲ್ಟೋಸ್ (6959 ಯುನಿಟ್) ಹಾಗೂ ಟೊಯೊಟಾ ಹೈರೈಡರ್ (5385 ಯುನಿಟ್) ಕಾರುಗಳು ಸಾಕಷ್ಟು ಮುಂದಿವೆ. ಈ ಅಕ್ಟೋಬರ್‌ನಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಕರ್ವ್ ಎಸ್‌ಯುವಿಗಳು ಮಾರಾಟವಾಗುವ ನಿರೀಕ್ಷೆಯಿದೆ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ಕರ್ವ್ ಕೂಪೆ ಎಸ್‌ಯುವಿ ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಕರ್ವ್ ಎಲೆಕ್ಟ್ರಿಕ್ ಕಾರು, ರೂ.17.49 ರಿಂದ ರೂ.21.99 ಲಕ್ಷ ಎಕ್ಸ್ ಎಕ್ಸ್ ಶೋರೂಂ ದರವನ್ನು ಪಡೆದಿದೆ. 45 ಕೆಡಬ್ಲ್ಯೂಹೆಚ್ (ಕಿಲೋವ್ಯಾಟ್) ಮತ್ತು 55 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

ಈ ಟಾಟಾ ಕರ್ವ್ ಎಲೆಕ್ಟ್ರಿಕ್ ಎಸ್‌ಯುವಿಯಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ (10.25- ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಹೊಂದಿದೆ.
ಇಂಧನ ಚಾಲಿತ ಟಾಟಾ ಕರ್ವ್ ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.9.99 ಲಕ್ಷದಿಂದ ರೂ.17.69 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಸ್ಮಾರ್ಟ್ ಮತ್ತು ಕ್ರಿಯೇಟಿವ್ ಪ್ಲಸ್ ಎಸ್ ಒಳಗೊಂಡಂತೆ ಹಲವು ರೂಪಾಂತರಗಳನ್ನು ಪಡೆದಿದೆ. ಇದರಲ್ಲಿಯೂ 5 ಜನರು ದೂರದ ಊರುಗಳಿಗೆ ತೆರಳಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಟಾಟಾ ಕರ್ವ್ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ಸಹ ನೀಡುತ್ತದೆ ಎಂದು ತಿಳಿದುಬಂದಿದೆ.
ಈ ಇಂಧನ ಚಾಲಿತ ಟಾಟಾ ಕರ್ವ್ ಎಸ್‌ಯುವಿಯೂ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications