ಶ್ರೀಸಾಮಾನ್ಯರ ಕನಸು ನನಸು: ಈ ಕೂಪೆ ಎಸ್‌ಯುವಿಗಳು ಬಂದಿವೆ.. ರೂ.7.99 ಲಕ್ಷ ಆರಂಭಿಕ ಬೆಲೆ, 5 ಸೀಟರ್!
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಜನಪ್ರಿಯ ಕಂಪನಿಗಳಿಗೆ ಸೇರಿದ ಹಲವು ಕಾರುಗಳು ಮಾರಾಟಕ್ಕೆ ಬರುತ್ತವೆ. ತಿಂಗಳ ಅಂತರದಲ್ಲಿ ಇಂಧನ ಚಾಲಿತ ಟಾಟಾ ಕರ್ವ್ (Tata Curvv) ಹಾಗೂ ಸಿಟ್ರನ್ ಬಸಾಲ್ಟ್ (Citroen Basalt) ಕಾರುಗಳು ಬಿಡುಗಡೆಯಾಗಿದ್ದವು. ಇವೆರೆಡು ಕೂಪೆ ಎಸ್‌ಯುವಿ (Coupe Suv) ಆಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತವೆ. ಇಲ್ಲಿ ನೂತನ ಕಾರುಗಳ ದರ (Price) ಹಾಗೂ ವಿಶೇಷತೆ (Specification) ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಬಗ್ಗೆ ಮಾತನಾಡೋಣ. ಇದು ರೂ.9.99 ರಿಂದ 17.69 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್ ಹಾಗೂ ಅಕಾಂಪ್ಲಿಶ್ಡ್ ಎಸ್ ಸೇರಿದಂತೆ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಕರ್ವ್ ಕಾರು 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5 ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ (Citroen Basalt Coupe Suv) ಕುರಿತಂತೆ ಹೇಳುವುದಾದರೆ, ಈ ಕಾರು ರೂ.7.99 ಲಕ್ಷದಿಂದ ರೂ.13.83 ಎಕ್ಸ್ ಶೋರೂಂ ದರವನ್ನು ಪಡೆದಿದೆ. ಬಸಾಲ್ಟ್ ಪ್ಲಸ್, ಬಸಾಲ್ಟ್ ಟರ್ಬೊ ಪ್ಲಸ್, ಬಸಾಲ್ಟ್ ಟರ್ಬೊ ಎಟಿ ಪ್ಲಸ್ ಮತ್ತು ಬಸಾಲ್ಟ್ ಟರ್ಬೊ ಮ್ಯಾಕ್ಸ್ ಸೇರಿದಂತೆ ವಿವಿಧ ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. ಇದರಲ್ಲಿಯೂ 5 ಜನರು ಓಡಾಟ ನಡೆಸಬಹುದು.
ಈ ಸಿಟ್ರನ್ ಬಸಾಲ್ಟ್ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್, 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ (ಎಂಟಿ) ಹಾಗೂ 6-ಸ್ಪೀಡ್ ಆಟೋಮೆಟಿಕ್ ಟ್ರಾನ್ಸ್‌ಮಿಷನ್ (ಎಟಿ) ಆಯ್ಕೆಯನ್ನು ಪಡೆದಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹೊಸ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications