TATA: ಬಿಡುಗಡೆಗೂ ಮುನ್ನವೇ ಶೋರೂಂ ತಲುಪಿದ ಹೊಸ ಟಾಟಾ ಕಾರು.. ಬೆಲೆ ಎಷ್ಟು, ವಿಶೇಷತೆಗಳೇನು?

ಟಾಟಾ ಮೋಟಾರ್ಸ್ (Tata Motors) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಈಚೆಗೆ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಆದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಇನೊಂದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದ್ದು, ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸೆಪ್ಟೆಂಬರ್ 2ರಂದು ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿಯೂ 'ಕರ್ವ್' ಕಾರನ್ನು ಮಾರಾಟಕ್ಕೆ ತರಲಾಗುತ್ತದೆ. ನೂತನ ಸಿಟ್ರನ್ ಬಸಾಲ್ಟ್ (Citroen Basalt) ಎಸ್‌ಯುವಿಗೆ ನೇರವಾಗಿ ಸ್ಪರ್ಧೆಯೊಡ್ಡುವ ಈ ಕಾರಿನ ಮೇಲೆ ಗ್ರಾಹಕರಿಗೂ ನಿರೀಕ್ಷೆಗಳು ದುಪ್ಪಟ್ಟಾಗಿವೆ.

ಸದ್ಯ, ದೇಶಾದ್ಯಂತ ವಿವಿಧ ಶೋರೂಂಗಳಿಗೆ ಇಂಧನ ಚಾಲಿತ ಹೊಸ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಯನ್ನು ಕಂಪನಿ ತಲುಪಿಸುವುದಕ್ಕೆ ಶುರು ಮಾಡಿದೆ. ನೂತನ ಕಾರು ಶೋರೂಂನಲ್ಲಿ ನಿಂತಿರುವ ಒಂದಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಈ ಕರ್ವ್ ಕೂಪೆ ಎಸ್‌ಯುವಿ ರೂ.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

Tata Curvv Coupe Suv Arrived Showroom Launch On September 2 Expected Price Details

ಈಗಾಗಲೇ, ಟಾಟಾ ಕರ್ವ್ ಕೂಪೆ ಎಸ್‌ಯುವಿ ಕುರಿತಂತೆ ಬಹುತೇಕ ಎಲ್ಲ ವಿವರಗಳು ಬಹಿರಂಗಗೊಂಡಿವೆ. ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು (ಡಿಸೈನ್) ಒಳಗೊಂಡಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು, ಎಲ್‌ಇಡಿ ಟೈಲ್‌ಲೈಟ್‌ಗಳು ಮತ್ತು ಇಳಿಜಾರಾದ ರೂಫ್‌ಲೈನ್‌ನ್ನು ಪಡೆದಿದೆ. ಒಳಭಾಗದ ಕ್ಯಾಬಿನ್ ಸಹ ಉತ್ತಮವಾಗಿದೆ.

ನೂತನ ಟಾಟಾ ಕರ್ವ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು. ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಂಪ್ಲಿಶೆಡ್ ಎಸ್ ಮತ್ತು ಅಕಂಪ್ಲಿಶೆಡ್ ಪ್ಲಸ್ ಎ ಎಂಬ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. 5 ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕರ್ವ್ ಕೂಪೆ ಎಸ್‌ಯುವಿ 1.2-ಲೀಟರ್ 3-ಸಿಲಿಂಡರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಹೊಸದಾದ 1.2-ಲೀಟರ್ ಡೈರೆಕ್ಟ್ ಇಂಜೆಕ್ಷನ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ತಕ್ಕ್ನತೆ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ.

ಟಾಟಾ ಕರ್ವ್ ಕಾರಿನಲ್ಲಿ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು (ಫೀಚರ್) ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, 4-ಸ್ಪೋಕ್ ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಹೊಚ್ಚ ಹೊಸ ಟಾಟಾ ಕರ್ವ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, August 28, 2024, 13:34 [IST]
English summary
Tata curvv coupe suv arrived showroom launch on september 2 expected price details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+