TATA: ರತನ್ ಟಾಟಾ ಕಂಪನಿಯ 10 ಲಕ್ಷದ ಹೊಸ ಕಾರಿನ ಬುಕ್ಕಿಂಗ್ ಶುರುವಾಗಿದೆ.. ಮುಂದಿನ ವಾರವೇ ವಿತರಣೆ

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೋಮವಾರ ಹೊಚ್ಚ ಹೊಸ ಕರ್ವ್ (Curvv) ಕಾರನ್ನು ಬಿಡುಗಡೆ ಮಾಡಿದೆ. ಇದೊಂದು ಕೂಪೆ ಎಸ್‌ಯುವಿಯಾಗಿದ್ದು, ಆಕರ್ಷಕ ವಿನ್ಯಾಸ (Design) ಹಾಗೂ ವೈಶಿಷ್ಟ್ಯಗಳನ್ನು (Features) ಪಡೆದುಕೊಂಡಿದೆ. ಜೊತೆಗೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂಪಾಂತರಗಳಿಗೆ (Variants) ಅನುಗುಣವಾಗಿ ರೂ.9.99 ರಿಂದ 17.69 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇಲ್ಲಿ ನೂತನ ಕಾರಿನ ಬುಕ್ಕಿಂಗ್ ಹಾಗೂ ವಿತರಣೆ ಸಂಬಂಧ ಹೆಚ್ಚಿನ ವಿವರವನ್ನು ತಿಳಿಸಿಕೊಟ್ಟಿದ್ದೇವೆ.

ಸದ್ಯ, ದೇಶಾದ್ಯಂತ ಹಲವು ಶೋರೂಂಗಳಿಗೆ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ತಲುಪಲು ಶುರುವಾಗಿದ್ದು, ಶೀಘ್ರದಲ್ಲಿಯೇ ಟೆಸ್ಟ್ ಡ್ರೈವ್ ಆರಂಭವಾಗುವ ನಿರೀಕ್ಷೆಯಿದೆ. ಸೆಪ್ಟೆಂಬರ್ 2ರಿಂದಲೇ ಬುಕ್ಕಿಂಗ್ ಪ್ರಾರಂಭವಾಗಿದ್ದು, ಆಸಕ್ತ ಗ್ರಾಹಕರು ಸಮೀಪದ ಡೀಲರ್‌ಶಿಪ್ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕಾಯ್ದಿರಿಸಬಹುದು. ಆದಾಗ್ಯೂ ಈ ಕಾರಿನ ಪರಿಚಯಾತ್ಮಕ ದರಗಳು ಅಕ್ಟೊಬರ್ 31ರವರೆಗೆ ಮಾತ್ರ ಅನ್ವಯಿಸಲಿದ್ದು, ಸೆಪ್ಟೆಂಬರ್ 12ರಿಂದ ವಿತರಣೆ ಶುರುವಾಗಲಿದೆ.

Tata Curvv Coupe Suv Booking And Delivery Date Details You Need To Know

ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎ ಸೇರಿದಂತೆ ವಿವಿಧ ರೂಪಾಂತರಗಳು ಹಾಗೂ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಹೊರಭಾಗದಲ್ಲಿ ಉತ್ತಮವಾದ ವಿನ್ಯಾಸವನ್ನು ಪಡೆದಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ.

ಈ ಕಾರು 4,310 ಎಂಎಂ ಉದ್ದ, 1,810 ಎಂಎಂ ಅಗಲ ಹಾಗೂ 1,637 ಎಂಎಂ ಎತ್ತರವಿದೆ. 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ.

Tata Curvv Coupe Suv Booking And Delivery Date Details You Need To Know

ಟಾಟಾ ಕರ್ವ್ ಕೂಪೆ ಎಸ್‌ಯುವಿಯಲ್ಲಿ (Tata Curvv Coupe Suv) 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ರಜಾದಿನಗಳು ಹಾಗೂ ವಾರಾಂತ್ಯದಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಹೊಸ ಟಾಟಾ ಕರ್ವ್ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Tata Curvv Coupe Suv Booking And Delivery Date Details You Need To Know

ಈ ಕಾರು ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣವನ್ನು ಒದಗಿಸುತ್ತದೆ. ಅದಕ್ಕಾಗಿ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, September 4, 2024, 8:30 [IST]
English summary
Tata curvv coupe suv booking and delivery date details you need to know
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+