TATA: 10 ಲಕ್ಷ ಬೆಲೆ.. 5 ಸೀಟರ್.. ಗುರುವಾರದಿಂದ ಹೊಸ ಟಾಟಾ ಕಾರಿನ ವಿತರಣೆ ಶುರು!

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 2ರಂದು ನೂತನ ಕರ್ವ್ (Curvv) ಕಾರನ್ನು ಬಿಡುಗಡೆ ಮಾಡಿತ್ತು. ಇದೊಂದು ಕೂಪೆ ಎಸ್‌ಯುವಿಯಾಗಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ಆಸಕ್ತರು ಹತ್ತಿರದ ಡೀಲರ್‌ಶಿಪ್ ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕಾಯ್ದಿರಿಸಬಹುದು. ಸೆಪ್ಟೆಂಬರ್ 12ರಿಂದ (ಗುರುವಾರ) ವಿತರಣೆ ಪ್ರಾರಂಭವಾಗಲಿದೆ.

ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ರೂ.9.99 ಲಕ್ಷದಿಂದ 17.69 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ದರಗಳು ಅಕ್ಟೊಬರ್ 31ರವರೆಗೆ ಮಾನ್ಯವಾಗಿರಲಿದೆ. ಕರ್ವ್ ಕಾರು ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್ ಹಾಗೂ ಕ್ರಿಯೇಟಿವ್ ಪ್ಲಸ್ ಸೇರಿದಂತೆ 6 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಜೊತೆಗೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Tata Curvv Coupe Suv Delivery Start September 12 Thursday Price And Features Details

ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಪಡೆದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು ಹಾಗೂ ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿದೆ. 310 ಎಂಎಂ ಉದ್ದ, 1,810 ಎಂಎಂ ಅಗಲ ಮತ್ತು 1,637 ಎಂಎಂ ಎತ್ತರವಿದೆ.

ಹೊಚ್ಚ ಹೊಸ ಟಾಟಾ ಕರ್ವ್ ಕೂಪೆ ಎಸ್‌ಯುವಿ 3-ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಮತ್ತು 170 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 125 ಬಿಹೆಚ್‍ಪಿ ಶಕ್ತಿ ಹಾಗೂ 225 ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Tata Curvv Coupe Suv Delivery Start September 12 Thursday Price And Features Details

ಮತ್ತೊಂದು 1.5 ಲೀಟರ್ ಡೀಸೆಲ್ ಎಂಜಿನ್ 118 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 260 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಅಥವಾ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

ಈ ಕಾರು 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Tata Curvv Coupe Suv Delivery Start September 12 Thursday Price And Features Details

ಟಾಟಾ ಕರ್ವ್ ಕೂಪೆ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಸಿಟ್ರನ್ ಬಸಾಲ್ಟ್ ನೇರ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, September 8, 2024, 16:00 [IST]
English summary
Tata curvv coupe suv delivery start september 12 thursday price and features details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+