ನಾಳೆ ರತನ್ ಟಾಟಾ ಕಂಪನಿಯ ಹೊಸ ಕಾರಿನ ವಿತರಣೆ ಆರಂಭ.. 9.99 ಲಕ್ಷ, 5-ಸೀಟರ್.. ಶೋರೂಂ ಭರ್ತಿಯಾಗಬಹುದು!
ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಈ ವರ್ಷ ಕಂಪನಿಗೆ ಮಹತ್ವದ ವರ್ಷವಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಪರಿಚಯಿಸಿದೆ. ಸೆಪ್ಟೆಂಬರ್ 2ರಂದು ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ನೂತನ ಕರ್ವ್ (Curvv) ಕಾರನ್ನು ಬಿಡುಗಡೆ ಮಾಡಿತ್ತು. ಇದೊಂದು ಕೂಪೆ ಎಸ್‌ಯುವಿಯಾಗಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ನಾಳೆಯಿಂದ ಈ ಎಸ್‌ಯುವಿ ವಿತರಣೆ ಪ್ರಾರಂಭವಾಗಲಿದೆ. ಗ್ರಾಹಕರು ಕೂಡ ಕಾತರಿದಿಂದ ಕಾಯುತ್ತಿದ್ದಾರೆ. ಬನ್ನಿ.. ಹೊಚ್ಚ ಹೊಸ ಟಾಟಾ ಕರ್ವ್ ಕಾರಿನ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.
ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.9.99 ರಿಂದ 17.69 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಈ ಪರಿಚಯಾತ್ಮಕ ಬೆಲೆಗಳು ಅಕ್ಟೊಬರ್ 31ರವರೆಗೆ ಮಾತ್ರ ಅನ್ವಯವಾಗಲಿದೆ. ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್ ಮತ್ತು ಅಕಾಂಪ್ಲಿಶ್ಡ್ ಎಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

ಈ ಕಾರು 1.2 ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.
ಟಾಟಾ ಕರ್ವ್ ಕೂಪೆ ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕರ್ವ್ ಕಾರು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಟಾಟಾ ಕರ್ವ್ ಇವಿ (Tata Curvv EV) ಸಹ ಖರೀದಿಗೆ ಲಭ್ಯವಿದೆ. ಇದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿರುವುದರಿಂದ ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಈ ಕಾರು 45 ಕೆಡಬ್ಲ್ಯೂಹೆಚ್ ಮತ್ತು 55 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಟಾಟಾ ಕರ್ವ್ ಇವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್, ಪನೊರೊಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications