Tata Curvv: ಹೊಸ ಟಾಟಾ ಕರ್ವ್ ಕೂಪೆ ಎಸ್‌ಯುವಿ ಬಿಡುಗಡೆ.. ರೂ.10 ಲಕ್ಷ ಬೆಲೆ, ಬುಕ್ಕಿಂಗ್ ಶುರು.. ವೈಶಿಷ್ಟ್ಯಗಳೇನು?

ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಕರ್ವ್ ಇವಿಯನ್ನು (Curvv EV) ಪರಿಚಯಿಸಿತ್ತು. ಇದೊಂದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದೆ. ರೂ.17.49 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿದೆ. ಇಂದು (ಸೆಪ್ಟೆಂಬರ್ 2) ಇಂಧನ ಚಾಲಿತ (ಪೆಟ್ರೋಲ್/ಡೀಸೆಲ್) ನೂತನ ಕರ್ವ್ ಎಸ್‌ಯುವಿಯನ್ನು ಬಿಡುಗಡೆ ಮಾಡಿದೆ. ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ನಿರೀಕ್ಷೆಗೂ ಮೀರಿದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಬೆಲೆ (Price): ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ರೂ.9.99 ರಿಂದ 17.69 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ದರಗಳು ಅಕ್ಟೊಬರ್ 31ರವರೆಗೆ ಅನ್ವಯವಾಗಲಿದ್ದು, ಇಂದಿನಿಂದ ಬುಕ್ಕಿಂಗ್ ಕೂಡ ಶುರುವಾಗಿದೆ. ಹೊಸ ಕರ್ವ್ ಎಸ್‌ಯುವಿ ಸ್ಮಾರ್ಟ್, ಪ್ಯೂರ್ ಪ್ಲಸ್, ಕ್ರಿಯೇಟಿವ್, ಕ್ರಿಯೇಟಿವ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಎಸ್ ಮತ್ತು ಅಕಾಂಪ್ಲಿಶ್ಡ್ ಪ್ಲಸ್ ಎ ಎಂಬ 6 ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

Tata Curvv Coupe Suv ICE Launched In India Rs 10 Lakh Price Booking Open Details

ವಿನ್ಯಾಸ (Design): ಈ ಕಾರು ಹೊರಭಾಗದಲ್ಲಿ ಅದ್ಬುತವಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಲೈಟ್ ಬಾರ್‌ಗಳು, ಡುಯಲ್ ಟೋನ್ ಅಲಾಯ್ ವೀಲ್‌ಗಳು ಮತ್ತು ಎಲ್‌ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ರೂಫ್‌ಲೈನ್‌ ಇಳಿಜಾರಾಗಿದ್ದು, ಒಳಭಾಗದ ಕ್ಯಾಬಿನ್ (Cabin) ವಿನ್ಯಾಸವು ಉತ್ತಮವಾಗಿದೆ. ಜೊತೆಗೆ 5 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿದೆ.

ನೂತನ ಟಾಟಾ ಕರ್ವ್ ಕೂಪೆ ಎಸ್‌ಯುವಿ 4,310 ಎಂಎಂ ಉದ್ದ, 1,810 ಎಂಎಂ ಅಗಲ ಮತ್ತು 1,637 ಎಂಎಂ ಎತ್ತರವನ್ನು ಹೊಂದಿದೆ. ವೀಲ್‌ಬೇಸ್ 2,560 ಎಂಎಂ ಇದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು 500 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Tata Curvv Coupe Suv ICE Launched In India Rs 10 Lakh Price Booking Open Details

ಕಾರ್ಯಕ್ಷಮತೆ (Performance): ಈ ಕಾರು 3 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 170 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್ 125 ಬಿಹೆಚ್‍ಪಿ ಶಕ್ತಿ ಮತ್ತು 225 ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.5 ಲೀಟರ್ ಡೀಸೆಲ್ ಎಂಜಿನ್ 118 ಬಿಹೆಚ್‍ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 260 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದೆ.

Curvv Revotron Turbo Petrol MT Hyperion GDi MT Kyrojet Diesel MT
Smart ₹9.99 Lakh ₹11.49 Lakh
Pure+ ₹10.99 Lakh ₹12.49 Lakh
Creative ₹12.19 Lakh ₹13.69 Lakh
Creative S ₹12.69 Lakh ₹13.99 Lakh ₹14.19 Lakh
Creative+ S ₹13.69 Lakh ₹14.99 Lakh ₹15.19 Lakh
Accomplished S ₹14.69 Lakh ₹15.99 Lakh ₹16.19 Lakh
Accomplished+ A ₹17.49 Lakh ₹17.69 Lakh
Revotron Turbo Petrol DCA ₹12.49 Lakh
Hyperion GDi DCA ₹16.49 Lakh
Kryojet Diesel DCA ₹13.99 Lakh

ವೈಶಿಷ್ಟ್ಯಗಳು (Features): ಟಾಟಾ ಕರ್ವ್ ಕೂಪೆ ಎಸ್‌ಯುವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪನೊರೊಮಿಕ್ ಸನ್‌ರೂಫ್, 6-ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರಿಕ್ಲೈನಿಂಗ್ ರೇರ್ ಸೀಟ್‌ಗಳು ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ನೀಡುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಪ್ರತಿಸ್ಪರ್ಧಿ ಕಾರುಗಳು (Rival Cars): ಟಾಟಾ ಕರ್ವ್ ಕೂಪೆ ಎಸ್‌ಯುವಿಗೆ ಸಿಟ್ರನ್ ಬಸಾಲ್ಟ್ ನೇರ ಎದುರಾಳಿಯಾಗಿದೆ. ಇದರೊಟ್ಟಿಗೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರೈಡರ್, ಹೋಂಡಾ ಎಲಿವೇಟ್, ಎಂಜಿ ಆಸ್ಟರ್, ಸ್ಕೋಡಾ ಕುಶಾಕ್, ಸಿಟ್ರಸ್ ಸಿ3 ಏರ್‌ಕ್ರಾಸ್ ಕಾಂಪ್ಯಾಕ್ಟ್ ಎಸ್‌ಯುವಿಗಳು ಕೂಡ ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, September 2, 2024, 14:29 [IST]
English summary
Tata curvv coupe suv ice launched india rs 10 lakh price booking open details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+