Curvv: ಮಧ್ಯಮ ವರ್ಗದವರ ಟೆಸ್ಲಾ.. ಮತ್ತೊಮ್ಮೆ ಕಾಣಿಸಿಕೊಂಡ ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರು: ವಿಶೇಷತೆಗಳೇನು?
ಭಾರತದಲ್ಲಿ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಮುಂಬರುವ ತಿಂಗಳಲ್ಲಿ 'ಕರ್ವ್' ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಿದ್ಧತೆಯನ್ನು ನಡೆಸುತ್ತಿದೆ. ಅದರ ಭಾಗವಾಗಿ ಈ ಕಾರನ್ನು ಪರೀಕ್ಷಿಸುತ್ತಿದ್ದು, ಚಾರ್ಜಿಂಗ್ ಸ್ಟೇಷನ್‌ನಲ್ಲಿ ನಿಂತಿದ್ದ ಕರ್ವ್ ಎಸ್‌ಯುವಿ ಫೋಟೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.
ಈ ಫೋಟೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಪಂಚ್ ಇವಿಯಂತೆಯೇ ನೂತನ ಟಾಟಾ ಕರ್ವ್ (Tata Curvv) ಎಲೆಕ್ಟ್ರಿಕ್ ಕಾರು ಸಹ ಫ್ರಂಟ್ (ಮುಂಭಾಗ) ಫೆಂಡರ್‌ನಲ್ಲಿ ಚಾರ್ಜಿಂಗ್ ಪೋರ್ಟ್ ಹೊಂದಿರುವುದನ್ನು ನೋಡಬಹದು. ಇದರೊಟ್ಟಿಗೆ ವಿನ್ಯಾಸದ ದೃಷ್ಟಿಯಿಂದ ವಿಶಾಲವಾದ ಬಾನೆಟ್, ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್ಸ್ ಹಾಗೂ ಫುಲ್ ವಿಡ್ತ್ (ಪೂರ್ಣ ಉದ್ದದ) ಲೈಟ್ ಬಾರ್ ಅನ್ನು ಒಳಗೊಂಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಇವಿ (Tata Nexon EV), 30 ಕೆಡಬ್ಲ್ಯೂಹೆಚ್ ಮತ್ತು 40.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯಲಿದ್ದು, ಕ್ರಮವಾಗಿ 325 ಕಿಲೋಮೀಟರ್ ರಿಂದ 465 ಕಿಲೋಮೀಟರ್ ಓಡುತ್ತದೆ. ಹೊಸ ಟಾಟಾ ಕರ್ವ್ ಇವಿ ಅದಕ್ಕಿಂತಲೂ ಶಕ್ತಿಯುತ ಬ್ಯಾಟರಿ ಪ್ಯಾಕ್ ಹೊಂದಿರಬಹುದು ಎಂದು ಅಂದಾಜಿಸಲಾಗಿದ್ದು, ಭರ್ತಿ ಚಾರ್ಜ್ ನಲ್ಲಿ 500 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡಲಿದೆ ಎನ್ನಲಾಗಿದೆ.
ಟಾಟಾ ಮೋಟಾರ್ಸ್, ಕರ್ವ್ ಎಸ್‌ಯುವಿಯನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಮಾತ್ರವಲ್ಲದೆ ಇಂಧನ ಚಾಲಿತ ರೂಪದಲ್ಲಿಯೂ ಬಿಡುಗಡೆಗೊಳಿಸಲು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಬಹುತೇಕ ಪೆಟ್ರೋಲ್ ಹಾಗೂ ಡೀಸೆಲ್ ಆಯ್ಕೆಯಲ್ಲಿಯೂ ಖರೀದಿಗೆ ಸಿಗಬಹುದು. ಇದು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿರುವ ಸಾಧ್ಯತೆಯಿದ್ದು, 6-ಸ್ವೀಡ್ ಮ್ಯಾನುವಲ್ & ಡಿಸಿಟಿ ಗೇರ್ ಬಾಕ್ಸ್ ಅನ್ನು ಪಡೆದಿರಬಹುದು.

ಟಾಟಾ ಕರ್ವ್ ಇಂಧನ ಹಾಗೂ ಎಲೆಕ್ಟ್ರಿಕ್ ಚಾಲಿತ ಕಾರುಗಳು ಒಂದೇ ರೀತಿಯ ವೈಶಿಷ್ಟ್ಯವನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಹ್ಯಾರಿಯರ್, ಸಫಾರಿ ಹಾಗೂ ನೆಕ್ಸಾನ್ ಕಾರುಗಳಂತೆ ಟಾಟಾ ಲೋಗೋವನ್ನು ಹೊಂದಿರುವ 4-ಸ್ಪೋಕ್ ಸ್ಟೀರಿಂಗ್ ವೀಲ್, 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು.
ಟಾಟಾ ಕಾರುಗಳು ಸುರಕ್ಷತೆಗೆ ವಿಚಾರವಾಗಿಯೇ ದೊಡ್ಡ ಹೆಸರನ್ನು ಮಾಡಿವೆ. ಅದಕ್ಕೆ ತಕ್ಕಂತೆ ನೂತನ ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರು ಸಹ ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯಿದೆ. 6-ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), 360-ಡಿಗ್ರಿ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ (ಮುಂಭಾಗ) ಹಾಗೂ ರೇರ್ (ಹಿಂಭಾಗ) ಪಾರ್ಕಿಂಗ್ ಸೇನಾರ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಪಡೆದಿರಬಹುದು.

ಹೊಸ ಟಾಟಾ ಕರ್ವ್ ಎಸ್‌ಯುವಿ ರೂ.11 ಲಕ್ಷಕ್ಕಿಂತ ಹೆಚ್ಚಿನ ಬೆಲೆಗೆ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಪಡೆದಿರಲಿದ್ದು, ಮುಂಬರುವ ತಿಂಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು ಲಾಂಚ್ ಆದ ಮೇಲೆ ಗ್ರಾಹಕರಿಂದ ಯಾವ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications