ಶೋರೂಂಗಳು ತುಂಬುವುದು ಪಕ್ಕಾ.. ಟಾಟಾ ಕರ್ವ್ ಇವಿ ಬುಕ್ಕಿಂಗ್ ಶುರು, 585 Km ಓಡುತ್ತೆ.. 5 ಆಸನ ಆಯ್ಕೆ

ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ನೂತನ ಕರ್ವ್ ಇವಿಯನ್ನು (Curvv EV) ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಇದೊಂದು ಪ್ರೀಮಿಯಂ ಎಲೆಕ್ಟ್ರಿಕ್ ಕೂಪೆ ಎಸ್‌ಯುವಿಯಾಗಿದ್ದು, ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಇಂದಿನಿಂದ (ಆಗಸ್ಟ್ 12) ಈ ಕಾರಿನ ಬುಕ್ಕಿಂಗ್ ಆರಂಭವಾಗಿದೆ. ಬನ್ನಿ.. ಆ ಬಗ್ಗೆ ಸಂಪೂರ್ಣವಾದ ವಿವರ ತಿಳಿಯೋಣ.

ಹೊಚ್ಚ ಹೊಸ ಕರ್ವ್ ಎಲೆಕ್ಟ್ರಿಕ್ ಕಾರನ್ನು ಆಸಕ್ತ ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಹತ್ತಿರದ ಟಾಟಾ ಡೀಲರ್‌ಶಿಪ್‌ಗೆ ಭೇಟಿ ನೀಡಿ, ರೂ.21,000 ಮುಂಗಡ ಹಣ ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು. ಆಗಸ್ಟ್ 14ರಂದು ಟೆಸ್ಟ್ ಡ್ರೈವ್‌ ಪ್ರಾರಂಭವಾಗಲಿದ್ದು, ಆಗಸ್ಟ್ 23ರಿಂದ ವಿತರಣೆಗಳು ಶುರುವಾಗಲಿದೆ.

Tata Curvv EV Booking Open Rs 17 49 Lakh Price 585 Km Range Details

ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಕರ್ವ್ ಇವಿ ರೂ.17.49 ಲಕ್ಷದಿಂದ ರೂ.21.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕ್ರಿಯೇಟಿವ್, ಅಕಾಂಪ್ಲಿಶ್ಡ್, ಅಕಾಂಪ್ಲಿಶ್ಡ್ ಪ್ಲಸ್ ಎಸ್, ಎಂಪವರ್ಡ್ ಪ್ಲಸ್ ಹಾಗೂ ಎಂಪವರ್ಡ್ ಪ್ಲಸ್ ಎ ಎಂಬ 5 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಜೊತೆಗೆ ಫ್ಲೇಮ್ ರೆಡ್, ಎಂಪವರ್ಡ್ ಆಕ್ಸೈಡ್, ಪ್ರಿಸ್ಟಿನ್ ವೈಟ್ ಮತ್ತು ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಈ ಕಾರು ಎರಡು ಬ್ಯಾಟರಿ ಪ್ಯಾಕ್‌ಗಳನ್ನು ಪಡೆದಿದೆ. 45 ಕೆಡಬ್ಲ್ಯೂಹೆಚ್ (kWh) ಬ್ಯಾಟರಿಯನ್ನು ಒಳಗೊಂಡಿರುವ ರೂಪಾಂತರ ಸಂಪೂರ್ಣ ಚಾರ್ಜ್‌ನಲ್ಲಿ 502 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 150 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 215 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

55 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್‌ ಪಡೆದಿರುವ ರೂಪಾಂತರ ಭರ್ತಿ ಚಾರ್ಜ್‌ನಲ್ಲಿ 585 ಕಿಲೋಮೀಟರ್ ಕ್ರಮಿಸುತ್ತದೆ. ಇದರ ಎಲೆಕ್ಟ್ರಿಕ್ ಮೋಟಾರ್ 167 ಪಿಎಸ್ ಗರಿಷ್ಠ ಶಕ್ತಿ ಹಾಗೂ 215 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. ಕರ್ವ್ ಇವಿ ಬ್ಯಾಟರಿಯು ಡಿಸಿ ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ 10 ರಿಂದ 80% ಚಾರ್ಜ್ ಆಗಲು 40 ನಿಮಿಷ ತೆಗೆದುಕೊಳ್ಳುತ್ತದೆ.

ನೂತನ ಕರ್ವ್ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪನೊರೊಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್-ಸೌಂಡ್ ಸಿಸ್ಟಮ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಕರ್ವ್ ಇವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಅದಕ್ಕಾಗಿ 6 ಏರ್‌ಬ್ಯಾಗ್‌, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಹಾಗೂ 360 - ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, August 12, 2024, 16:26 [IST]
English summary
Tata curvv ev booking open rs 17 49 lakh price 585 km range details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+