Tata: ಶೋರೂಂಗಳಲ್ಲಿ ಟಾಟಾದ ಹೊಸ ಎಲೆಕ್ಟ್ರಿಕ್ ಕಾರಿನ ಬುಕ್ಕಿಂಗ್ ಆರಂಭ.. ಯಾವುದು, ವಿಶೇಷತೆಗಳೇನು?

ಭಾರತದ ವಿಶ್ವಾಸಾರ್ಹ ಎಲೆಕ್ಟ್ರಿಕ್ ವಾಹನ (ಇವಿ) ತಯಾರಕ ಸಂಸ್ಥೆಯಾಗಿ ಟಾಟಾ ಮೋಟಾರ್ಸ್ (Tata Motors) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ 'ಟಾಟಾ' ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರರನ್ನು ತನ್ನತ್ತ ಸೆಳೆಯಲು ಮುಂದಾಗಿದ್ದು, ಹೊಚ್ಚ ಹೊಸ ಕರ್ವ್ (Curvv) ಕೂಪೆ ಎಸ್‌ಯುವಿಯನ್ನು ಆಗಸ್ಟ್ 7ರಂದು ಪರಿಚಯಿಸಲಾಗುವುದು ಎಂದು ಘೋಷಣೆ ಮಾಡಿದೆ. ಈ ಕಾರಿನ ಮೇಲೆ ಖರೀದಿದಾರರಿಗೂ ನಿರೀಕ್ಷೆಗಳು ದುಪ್ಪಟ್ಟಾಗಿವೆ.

ಮೊದಲಿಗೆ ನೂತನ ಟಾಟಾ ಕರ್ವ್ ಕಾರು ಎಲೆಕ್ಟ್ರಿಕ್ ರೂಪದಲ್ಲಿ ಬರಲಿದೆ. ಆ ಬಳಿಕ ಇಂಧನ (ಪೆಟ್ರೋಲ್/ಡೀಸೆಲ್) ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ಮೂಲಗಳು ಖಚಿತಪಡಿಸಿವೆ. ದೇಶಾದ್ಯಂತ ಹಲವು ಡೀಲರ್‌ಶಿಪ್‌ಗಳು ಹೊಸ ಟಾಟಾ ಕರ್ವ್ ಇವಿ (Tata Curvv EV)ಗಾಗಿ ಬುಕ್ಕಿಂಗ್ ಪಡೆಯುವುದನ್ನು ಆರಂಭಿಸಿವೆ ಎಂದು ವರದಿಯಾಗಿದೆ.

Tata Curvv EV Bookings Open In Showroom Expected Price And Range Details

ಟಾಟಾ ಕರ್ವ್ ಇವಿ 55 - 56 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 550 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಲಿದೆ ಎಂದು ಹೇಳಲಾಗಿದೆ. ಈ ಕಾರು ಸಿಂಗಲ್-ಮೋಟಾರ್ ಮತ್ತು ಡುಯಲ್ ಮೋಟಾರ್ ಸೆಟಪ್‌ಗಳಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ.

ಹೊಸ ಕರ್ವ್ ಇವಿಯನ್ನು ದೇಶೀಯ ಮಾರುಕಟ್ಟೆಗೆ 'ಕೂಪೆ ಎಸ್‌ಯುವಿ' ವಿಭಾಗದಲ್ಲಿ ಬರುತ್ತಿರುವ ಟಾಟಾದ ಪ್ರಥಮ ಕಾರು ಎಂದು ಬಣ್ಣಿಸಲಾಗಿದೆ. ಇದರ ಒಂದಷ್ಟು ವಿನ್ಯಾಸ ನೆಕ್ಸಾನ್ (Nexon) ಕಾರಿಗೆ ಹೋಲಿಕೆಯಾಗಲಿದ್ದು, ನೋಡುಗರ ಕಣ್ಣು ಕುಕ್ಕುತ್ತದೆ. ಆಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿರಲಿದೆ ಎಂದು ತಿಳಿದುಬಂದಿದೆ.

Tata Curvv EV Bookings Open In Showroom Expected Price And Range Details

ನೂತನ ಟಾಟಾ ಕರ್ವ್ ಇವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರಿಗೆ ಸಿಗಲಿದ್ದು, ರೂ.18 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ. ಈ ಎಲೆಕ್ಟ್ರಿಕ್ ಕಾರಿಗೆ ಮುಂಬರುವ ತಿಂಗಳಲ್ಲಿ ಬಿಡುಗಡೆಯಾಗಲಿರುವ ಮಾರುತಿ ಸುಜುಕಿ ಇವಿಎಕ್ಸ್ ಮತ್ತು ಹ್ಯುಂಡೈ ಕ್ರೆಟಾ ಇವಿ ಮಾದರಿಗಳು ಪ್ರಬಲ ಪ್ರತಿಸ್ಪರ್ಧಿಯಾಗಲಿವೆ ಎಂದು ಎಂದು ಹೇಳಲಾಗಿದೆ.

ಈ ಕರ್ವ್ ಇವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. 12.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಪ್ರೀಮಿಯಂ ಸೌಂಡ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಬ್ಲೈಂಡ್ ಸ್ಪಾಟ್ ಮಾನಿಟರ್‌, ಪನೋರಮಿಕ್ ಸನ್‌ರೂಫ್, ಸ್ಪೋಕ್ ಸ್ಟೀರಿಂಗ್ ವೀಲ್, ಲೆವೆಲ್-2 ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

Tata Curvv EV Bookings Open In Showroom Expected Price And Range Details

ಇಂಧನ ಚಾಲಿತ ಆಯ್ಕೆಯಲ್ಲಿ ಬರಲಿರುವ ಟಾಟಾ ಕರ್ವ್ ಕಾರಿಗೆ ಬಗ್ಗೆ ಹೇಳುವುದಾದರೆ, ಅದು 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಹೊಂದಿರಲಿದೆ. 6-ಸ್ವೀಡ್ ಮ್ಯಾನುವಲ್/ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನೊಂದಿಗೆ ಸಿಗಲಿದ್ದು, ರೂ.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 16, 2024, 17:51 [IST]
English summary
Tata curvv ev bookings open in showroom expected price and range details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+